For Quick Alerts
ALLOW NOTIFICATIONS  
For Daily Alerts
 

LSG vs RR: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್

IPL 2022: Rajasthan Royals vs Lucknow Super Giants toss report and playing XI

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 20ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸೆಣಸಾಟಕ್ಕೆ ಇಳಿದಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟ್ ಮಾಡಲು ಆಹ್ವಾನಿಸಿದ್ದಾರೆ.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 4 ಪಂದ್ಯಗಳನ್ನಾಡಿ 3 ಪಂದ್ಯದಲ್ಲಿ ಜಯಗಳಿಸಿ ಉಳಿದೊಂದು ಪಂದ್ಯದಲ್ಲಿ ಸೋತಿರುವ ನೂತನ ತಂಡ ಲಕ್ನೋ ಸೂಪರ್ ಜೈಂಟ್ಸ್ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಜಯ ಸಾಧಿಸಿ ಉಳಿದೊಂದು ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಇನ್ನು ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಬೀಗಿದ್ದ ರಾಜಸ್ಥಾನ್ ರಾಯಲ್ಸ್ ಮೂರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತು ಇದೀಗ ನಾಲ್ಕನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದ್ದು, ಈ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೇಲಕ್ಕೇರುವತ್ತ ಚಿತ್ತ ನೆಟ್ಟಿದೆ. ಅತ್ತ ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಸೋತು ನಂತರ ಆಡಿದ ಎಲ್ಲಾ 3 ಪಂದ್ಯಗಳಲ್ಲಿಯೂ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವು ಕಂಡಿರುವ ಲಕ್ನೋ ಸೂಪರ್ ಜೈಂಟ್ಸ್ ಈ ಪಂದ್ಯದಲ್ಲಿಯೂ ಗೆದ್ದು ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿರುವತ್ತ ಚಿತ್ತ ನೆಟ್ಟಿದೆ.

ಪಿಚ್ ವರದಿ: ಪಂದ್ಯ ಆರಂಭಕ್ಕೂ ಮುನ್ನ ಪಿಚ್ ವೀಕ್ಷಣೆ ನಡೆಸಿದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಈ ಪಿಚ್‌ನಲ್ಲಿ ಈಗಾಗಲೇ ಕೆಲವೊಂದಷ್ಟು ಪಂದ್ಯಗಳು ನಡೆದಿದು, ಪಿಚ್ ಒಣಗಿರುವ ಕಾರಣ ಹೆಚ್ಚು ಸ್ಪಿನ್ ಆಗಲಿದೆ ಎಂದಿದ್ದಾರೆ ಹಾಗೂ ಇದು ಬ್ಯಾಟ್ಸ್‌ಮನ್‌ಗಳಿಗೆ ಸ್ವರ್ಗವಾಗಿರಲಿದ್ದು, ಬೌಲರ್‌ಗಳು ವಿಕೆಟ್ ಪಡೆಯುವುದು ಕಷ್ಟದ ಕೆಲಸ ಎಂದು ಹೇಳಿಕೆ ನೀಡಿದ್ದಾರೆ.

ಆಡುವ ಬಳಗಗಳು

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ ( ನಾಯಕ/ ವಿಕೆಟ್ ಕೀಪರ್‌), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಕುಲದೀಪ್ ಸೇನ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್

ಲಕ್ನೋ ಸೂಪರ್‌ ಜೈಂಟ್ಸ್ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್‌), ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್

Story first published: Sunday, April 10, 2022, 19:21 [IST]
Other articles published on Apr 10, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+