For Quick Alerts
ALLOW NOTIFICATIONS  
For Daily Alerts
 

LSG vs RR: ಕೈ ಕೊಟ್ಟ ರಾಹುಲ್, ಮಿಂಚಿದ ಚಹಲ್; ಲಕ್ನೋ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ರಾಜಸ್ಥಾನ್ ರಾಯಲ್ಸ್

IPL 2022: Rajasthan Royals won by 3 runs against Lucknow Super Giants

ನೂತನ ತಂಡವಾದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 20ನೇ ಪಂದ್ಯದಲ್ಲಿ ಸೆಣಸಾಟ ನಡೆಸಿವೆ. ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 3 ರನ್‌ಗಳ ಜಯವನ್ನು ಸಾಧಿಸಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರರನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ ಮತ್ತು ದೇವದತ್ ಪಡಿಕ್ಕಲ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿದರು. ಜೋಸ್ ಬಟ್ಲರ್ 11 ಎಸೆತಗಳಲ್ಲಿ 13 ರನ್ ಗಳಿಸಿ ಔಟ್ ಆದರೆ, ದೇವದತ್ ಪಡಿಕ್ಕಲ್ 29 ಎಸೆತಗಳಲ್ಲಿ 29 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನುಳಿದಂತೆ ನಾಯಕ ಸಂಜು ಸ್ಯಾಮ್ಸನ್ 12 ಎಸೆತಗಳಲ್ಲಿ 13 ರನ್ ಬಾರಿಸಿದರೆ, ವಾನ್ ಡರ್ ಡುಸೆನ್ 4 ರನ್, ರವಿಚಂದ್ರನ್ ಅಶ್ವಿನ್ 28, ರಿಯಾನ್ ಪರಾಗ್ 8 ರನ್, ಶಿಮ್ರಾನ್ ಹೆಟ್ಮಾಯೆರ್ ಅಜೇಯ 59 ರನ್ ಮತ್ತು ಟ್ರೆಂಟ್ ಬೌಲ್ಟ್ ಅಜೇಯ 2 ರನ್ ಕಲೆ ಹಾಕಿದರು. ಹೀಗೆ ಶಿಮ್ರಾನ್ ಹೆಟ್ಮಾಯೆರ್ ಸ್ಫೋಟಕ ಆಟದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 165 ರನ್ ಕಲೆಹಾಕಿದ ರಾಜಸ್ಥಾನ್ ರಾಯಲ್ಸ್ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 166 ರನ್‌ಗಳ ಗುರಿಯನ್ನು ನೀಡಿತ್ತು.

ಲಕ್ನೋ ಸೂಪರ್ ಜಯಂಟ್ಸ್ ತಂಡದ ಜೇಸನ್ ಹೋಲ್ಡರ್ ಮತ್ತು ಕೃಷ್ಣಪ್ಪ ಗೌತಮ್ ತಲಾ 2 ವಿಕೆಟ್ ಕಬಳಿಸಿದರು. 4 ಓವರ್ ಬೌಲಿಂಗ್ ಮಾಡಿದ ಜೇಸನ್ ಹೋಲ್ಡರ್ 50 ರನ್ ನೀಡುವ ಮೂಲಕ ದುಬಾರಿಯೂ ಕೂಡ ಆದರು . ಇನ್ನುಳಿದಂತೆ ಅವೇಶ್ ಖಾನ್ 1 ವಿಕೆಟ್ ಪಡೆದುಕೊಂಡರು.

lsg

ಇನ್ನು ರಾಜಸ್ಥಾನ್ ರಾಯಲ್ಸ್ ನೀಡಿದ ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ನಾಯಕ ಕೆಎಲ್ ರಾಹುಲ್ ಟ್ರೆಂಟ್ ಬೌಲ್ಟ್ ಎಸೆದ ಮೊದಲ ಎಸೆತದಲ್ಲಿಯೇ ಕ್ಲೀನ್ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು. ಹೀಗೆ ಪಂದ್ಯದ ಮೊದಲ ಎಸೆತದಲ್ಲಿಯೇ ರಾಹುಲ್ ಔಟ್ ಆದ ಬಳಿಕ ಕಣಕ್ಕಿಳಿದ ಕೃಷ್ಣಪ್ಪ ಗೌತಮ್ ಎರಡನೇ ಎಸೆತದಲ್ಲಿ ಟ್ರೆಂಟ್ ಬೌಲ್ಟ್ ಎಸೆತದಲ್ಲಿ ಎಲ್ ಬಿಡಬ್ಲ್ಯುಗೆ ಬಲಿಯಾದರು. ಹೀಗೆ 1 ರನ್‌ಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದ ಲಕ್ನೋ ಸೂಪರ್ ಜಯಂಟ್ಸ್ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಮತ್ತೋರ್ವ ಆಟಗಾರ ಕ್ವಿಂಟನ್ ಡಿ ಕಾಕ್ 39 ರನ್ ಗಳಿಸಿದರೆ, ಜೇಸನ್ ಹೋಲ್ಡರ್ 8, ದೀಪಕ್ ಹೂಡಾ 25, ಆಯುಷ್ ಬದೋನಿ 5, ಕ್ರುನಾಲ್ ಪಾಂಡ್ಯ 22, ದುಷ್ಮಂತ ಚಮೀರ 13 ರನ್ ಕಲೆ ಹಾಕಿದರು. ಅಂತಿಮವಾಗಿ ಎಂಟನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಾರ್ಕಸ್ ಸ್ಟೊಯಿನಿಸ್ ಸಿಕ್ಸರ್ ಮೇಲೆ ಸಿಕ್ಸರ್ ಬಾರಿಸಿ ಗೆಲ್ಲುವ ಭರವಸೆಯನ್ನು ಹುಟ್ಟುಹಾಕಿದ್ದರು.

ಕೊನೆಯ ಓವರ್‌ನಲ್ಲಿ ಗೆಲ್ಲಲು 15 ರನ್‌ಗಳು ಬೇಕಿದ್ದಾಗ ಮಾರ್ಕಸ್ ಸ್ಟಾಯಿನಿಸ್ ಅವರಿಗೆ ಸತತ 3 ಡಾಟ್ ಬಾಲ್ ಹಾಕಿದ ರಾಜಸ್ಥಾನ್ ರಾಯಲ್ಸ್ ತಂಡದ ಬೌಲರ್ ಕುಲ್ ದೀಪ್ ಸೇನ್ ಲಕ್ನೋ ಸೂಪರ್ ಜೈಂಟ್ಸ್ ಗೆಲುವಿನ ಆಸೆಗೆ ತಣ್ಣೀರು ಎರಚಿದರು. ಅಂತಿಮವಾಗಿ ಮಾರ್ಕಸ್ ಸ್ಟಾಯಿನಿಸ್ 17 ಎಸೆತಗಳಲ್ಲಿ ಅಜೇಯ 38 ರನ್ ಕಲೆಹಾಕಿದರೆ, ಅವೇಶ್ ಖಾನ್ ಅಜೇಯ 7 ರನ್ ಕಲೆ ಹಾಕಿದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ 3 ರನ್‌ಗಳ ಸೋಲನ್ನು ಅನುಭವಿಸಿತು. ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದೆ.

ರಾಜಸ್ಥಾನ್ ರಾಯಲ್ಸ್ ಪರ ಯುಜುವೇಂದ್ರ ಚಾಹಲ್ 4 ವಿಕೆಟ್ ಪಡೆದು ಮಿಂಚಿದರೆ, ಟ್ರೆಂಟ್ ಬೌಲ್ಟ್ 2 ವಿಕೆಟ್ ಹಾಗೂ ಪ್ರಸಿದ್ಧ್ ಕೃಷ್ಣ ಮತ್ತು ಕುಲ್ ದೀಪ್ ಸೇನ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Monday, April 11, 2022, 9:59 [IST]
Other articles published on Apr 11, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+