RCB vs PBKS: 102 ಮೀಟರ್ ಸಿಕ್ಸರ್ ಸಿಡಿಸಿದ ಆರ್‌ಸಿಬಿ ಆಟಗಾರ; ವೃದ್ಧನ ತಲೆಗೆ ಬಿತ್ತು ಚೆಂಡು, ವಿಡಿಯೋ ವೈರಲ್

ಶುಕ್ರವಾರ ( ಮೇ 13 ) ಸಂಜೆ ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಆಟಗಾರ ರಜತ್ ಪಟಿದಾರ್ 102 ಮೀಟರ್ ಉದ್ದದ ಬೃಹತ್ ಸಿಕ್ಸರ್ ಸಿಡಿಸಿ ಮಿಂಚಿದರು.
ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಬ್ಯಾಟ್ ಬೀಸಿದ ರಜತ್ ಪಟಿದಾರ್ ಒಂಬತ್ತನೇ ಓವರ್‌ನಲ್ಲಿ ಎದುರಾಳಿ ಪಂಜಾಬ್ ಕಿಂಗ್ಸ್ ತಂಡದ ಬೌಲರ್ ಹರ್ಮನ್ ಪ್ರೀತ್ ಬ್ರಾರ್ ಎಸೆದ ಎಸೆತಕ್ಕೆ ಈ ಬೃಹತ್ ಸಿಕ್ಸರ್ ಬಾರಿಸಿದರು. ರಜತ್ ಪಟಿದಾರ್ ಬಾರಿಸಿದ ಸಿಕ್ಸರ್ ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬಂದು ಕುಳಿತಿದ್ದ ವೃದ್ಧರೊಬ್ಬರ ತಲೆಗೆ ಜೋರಾಗಿ ಬಡಿದಿದೆ.
ಚೆಂಡಿನ ಪೆಟ್ಟು ತಿಂದ ಆ ವೃದ್ಧ ನೋವಿನಿಂದ ಬಳಲಿದ ವಿಡಿಯೋ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ ಹಾಗೂ ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ. ಇನ್ನು ಈ ಸಿಕ್ಸರ್ ವೀಕ್ಷಿಸುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಚೆಂಡು ಆ ವೃದ್ಧನ ತಲೆಗೆ ಬಿದ್ದಿದ್ದನ್ನು ಕಂಡು ಆ ಕ್ಷಣದಲ್ಲಿಯೇ ಬೇಸರ ವ್ಯಕ್ತಪಡಿಸಿದ ದೃಶ್ಯ ಕೂಡ ವಿಡಿಯೋದಲ್ಲಿದೆ.
ಹೀನಾಯ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು:
ಇನ್ನು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯ ಸೋಲನ್ನು ಕಂಡು ತನ್ನ ಪ್ಲೇ ಆಫ್ ಹಾದಿಯನ್ನು ಮತ್ತಷ್ಟು ಕಠಿಣಪಡಿಸಿಕೊಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಜಾನಿ ಬೈರ್ ಸ್ಟೋವ್ ಮತ್ತು ಲಿಯಾಮ್ ಲಿವಿಂಗ್ ಸ್ಟನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 209 ರನ್ ಬಾರಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 210 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 155 ರನ್ ಕಲೆಹಾಕಿತು. ಈ ಮೂಲಕ ಪಂಜಾಬ್ ಕಿಂಗ್ಸ್ 54 ರನ್‌ಗಳ ಬೃಹತ್ ಗೆಲುವನ್ನು ದಾಖಲಿಸಿ ಪ್ಲೇ ಆಫ್ ಹಾದಿ ಸುಲಭ ಮಾಡಿಕೊಳ್ಳುವ ನಿರೀಕ್ಷೆಯಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯೋಜನೆಗೆ ಕಲ್ಲು ಹಾಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications