KKR vs SRH: ರಾಣಾ ಅರ್ಧಶತಕ, ರಸೆಲ್ ಅಬ್ಬರ; ಹೈದರಾಬಾದ್‌ಗೆ 176 ರನ್‌ಗಳ ಗುರಿ ನೀಡಿದ ಕೆಕೆಆರ್

ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 25ನೇ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದ್ದು, ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿ ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 176 ರನ್‌ಗಳ ಗುರಿಯನ್ನು ನೀಡಿದೆ.
ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಫೀಲ್ಡಿಂಗ್ ಆಯ್ದುಕೊಳ್ಳುವುದರ ಮೂಲಕ ಎದುರಾಳಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಆರೋನ್ ಫಿಂಚ್ ಮತ್ತು ವೆಂಕಟೇಶ್ ಅಯ್ಯರ್ ಕಳಪೆ ಆರಂಭವನ್ನು ನೀಡಿದರು. ವೆಂಕಟೇಶ್ ಅಯ್ಯರ್ 6 ರನ್ ಗಳಿಸಿ ಔಟ್ ಆದರೆ, ಆ್ಯರನ್ ಫಿಂಚ್ 7 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಶ್ರೇಯಸ್ ಅಯ್ಯರ್ 28 ರನ್, ಸುನಿಲ್ ನರೈನ್ 6 ರನ್, ಶೆಲ್ಡನ್ ಜಾಕ್ಸನ್ 7 ರನ್, ಪ್ಯಾಟ್ ಕಮಿನ್ಸ್ 3 ರನ್, ಅಮನ್ ಹಕೀಮ್ ಖಾನ್ 5 ರನ್ ಮತ್ತು ಉಮೇಶ್ ಯಾದವ್ ಅಜೇಯ 1 ರನ್ ಕಲೆ ಹಾಕಿದರು.
ತಂಡ ಮೊದಲ 3 ವಿಕೆಟ್‍ಗಳನ್ನು ಬೇಗನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾಗ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ರಾಣಾ 36 ಎಸೆತಗಳಲ್ಲಿ 54 ರನ್ ಬಾರಿಸಿ ಆಸರೆಯಾದರು. ಇನ್ನುಳಿದಂತೆ ಅಂತಿಮ ಹಂತದಲ್ಲಿ ಅಬ್ಬರಿಸಿದ ಆ್ಯಂಡ್ರೆ ರಸೆಲ್ 25 ಎಸೆತಗಳಲ್ಲಿ ಅಜೇಯ 49 ರನ್ ಚಚ್ಚಿ ತಂಡದ ಮೊತ್ತವನ್ನು ಹೆಚ್ಚಿಸಿದರು. 4 ಬೌಂಡರಿ ಮತ್ತು 4 ಸಿಕ್ಸರ್ ಚಚ್ಚಿದ ಆ್ಯಂಡ್ರೆ ರಸೆಲ್ ಜಗದೀಶ ಸುಚಿತ್ ಎಸೆದ ಅಂತಿಮ ಓವರ್‌ನ ಕೊನೆಯ 3 ಎಸೆತಗಳಲ್ಲಿ ಕ್ರಮವಾಗಿ 6,6,4 ಚಚ್ಚಿ ಅಬ್ಬರಿಸಿದರು.

ಇನ್ನು ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಟಿ ನಟರಾಜನ್ 3 ವಿಕೆಟ್ ಪಡೆದರೆ, ಉಮ್ರಾನ್ ಮಲಿಕ್ 2 ವಿಕೆಟ್ ಹಾಗೂ ಭುವನೇಶ್ವರ್ ಕುಮಾರ್, ಮಾರ್ಕೋ ಜೆನ್ಸೆನ್ ಮತ್ತು ಜಗದೀಶ ಸುಚಿತ್ ತಲಾ ಒಂದೊಂದು ವಿಕೆಟ್ ಪಡೆದರು.
ಆಡುವ ಬಳಗಗಳು
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಆರನ್ ಫಿಂಚ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಆಂಡ್ರೆ ರಸೆಲ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಸುನಿಲ್ ನರೈನ್, ಉಮೇಶ್ ಯಾದವ್, ಅಮನ್ ಹಕೀಮ್ ಖಾನ್, ವರುಣ್ ಚಕ್ರವರ್ತಿ
ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್ ( ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್, ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications