For Quick Alerts
ALLOW NOTIFICATIONS  
For Daily Alerts
 

IPL 2022: ರಾಜಸ್ಥಾನ್ ವಿರುದ್ಧ ಗೆದ್ದು ಡ್ರೆಸಿಂಗ್ ರೂಮ್‌ನಲ್ಲಿ ಕುಣಿದು ಕುಪ್ಪಳಿಸಿದ ಆರ್‌ಸಿಬಿ ಆಟಗಾರರು; ವಿಡಿಯೋ

IPL 2022: RCB celebrate victory over RR with unique song in dressing room
Dinesh Karthik ಆಟ ನೋಡಿ ಕ್ಷಮೆಯಾಚಿಸಿದ ಅಭಿಮಾನಿಗಳು | Oneindia Kannada

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೂತನ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿನ ತನ್ನ ಎರಡನೇ ಗೆಲುವನ್ನು ಕಂಡಿದೆ. ಟೂರ್ನಿಯಲ್ಲಿನ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಬೃಹತ್ ಮೊತ್ತ ಕಲೆಹಾಕಿಯೂ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ದ್ವಿತೀಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಜಯ ಸಾಧಿಸಿ ಗೆಲುವಿನ ಖಾತೆ ತೆರೆದಿತ್ತು. ನಂತರ ಏಪ್ರಿಲ್ 5ರಂದು ಅಂಕಪಟ್ಟಿಯಲ್ಲಿ ಅಗ್ರಸ್ತಾನದಲ್ಲಿರುವ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಪಂದ್ಯದಲ್ಲಿಯೂ ಸಹ ಗೆಲುವು ಸಾಧಿಸಿದ್ದು, ಟೂರ್ನಿಯಲ್ಲಿ ಇಲ್ಲಿಯವರೆಗೂ 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಇನ್ನು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡು ಎದುರಾಳಿ ತಂಡಕ್ಕೆ ಬ್ಯಾಟ್ ಮಾಡುವ ಅವಕಾಶ ನೀಡಿದ ಆರ್‌ಸಿಬಿ 18 ಓವರ್‌ಗಳ ತನಕ ರಾಜಸ್ಥಾನ್ ರಾಯಲ್ಸ್ ಮೇಲೆ ಹಿಡಿತವನ್ನು ಸಾಧಿಸಿತ್ತು. ಆದರೆ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರರಾದ ಜೋಸ್ ಬಟ್ಲರ್ ಮತ್ತು ಶಿಮ್ರಾನ್ ಹೆಟ್ಮಾಯೆರ್ ಅಂತಿಮ ಎರಡು ಓವರ್‌ಗಳಲ್ಲಿ ಅಬ್ಬರಿಸಿ 43 ರನ್ ಚಚ್ಚಿದ ಪರಿಣಾಮ ರಾಜಸ್ಥಾನ್ ರಾಯಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 170 ರನ್‌ಗಳ ಪೈಪೋಟಿಯುತ ಗುರಿಯನ್ನು ನೀಡಿತ್ತು.

ಇನ್ನು ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಫಾಫ್ ಡು ಪ್ಲೆಸಿಸ್ ಮತ್ತು ಅನುಜ್ ರಾವತ್ 55 ರನ್‌ಗಳ ಜೊತೆಯಾಟವನ್ನು ಆಡಿದರು. ಡು ಪ್ಲೆಸಿಸ್ 29 ರನ್ ಗಳಿಸಿ ಔಟ್ ಆದರೆ ಅನುಜ್ ರಾವತ್ 26 ರನ್ ಗಳಿಸಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕರು ಜವಾಬ್ದಾರಿಯುತ ಆರಂಭವನ್ನು ಕಟ್ಟಿಕೊಟ್ಟರೆ ತಂಡದ ಮಧ್ಯಮ ಕ್ರಮಾಂಕ ಅಕ್ಷರಶಃ ನೆಲಕಚ್ಚಿತು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 5 ರನ್ ಗಳಿಸಿ ರನ್ ಔಟ್ ಆದರೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡೇವಿಡ್ ವಿಲ್ಲಿ ಶೂನ್ಯ ಮತ್ತು ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರುದರ್ ಫೋರ್ಡ್ 5 ರನ್ ಗಳಿಸಿದರು. ಹೀಗೆ 6.6 ಓವರ್‌ಗಳಲ್ಲಿ 55 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 12.3 ಓವರ್‌ಗಳಲ್ಲಿ 87 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಹಬಾಜ್ ಅಹ್ಮದ್ ಮತ್ತು ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ ಆಸರೆಯಾದರು. 67 ರನ್‌ಗಳ ಜತೆಯಾಟವಾಡಿದ ಈ ಜೋಡಿ ರಾಜಸ್ಥಾನ್ ರಾಯಲ್ಸ್ ಬೌಲರ್‌ಗಳ ಆರ್ಭಟವನ್ನು ತಗ್ಗಿಸಿದರು. ಶಹಬಾಜ್ ಅಹ್ಮದ್ 26 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸಹಿತ 45 ರನ್ ಕಲೆಹಾಕಿದರೆ, ಅಜೇಯರಾಗಿ ಉಳಿದ ದಿನೇಶ್ ಕಾರ್ತಿಕ್ 23 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 44 ರನ್ ಚಚ್ಚಿದರು. ಇನ್ನು ಶಹಬಾಜ್ ಅಹ್ಮದ್ ಔಟ್ ಆದ ಬಳಿಕ ಕಣಕ್ಕಿಳಿದ ಹರ್ಷಲ್ ಪಟೇಲ್ 4 ಎಸೆತಗಳಲ್ಲಿ 1 ಸಿಕ್ಸರ್ ಸಹಿತ 9 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು 19.1 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 173 ರನ್ ಗಳಸಿ 4 ವಿಕೆಟ್‌ಗಳ ಜಯ ಸಾಧಿಸಿತು.

rcb

ಇನ್ನು ಗೆಲುವಿನ ಸಂಭ್ರಮಾಚರಣೆಯನ್ನು ತುಂಬಾ ವಿಭಿನ್ನವಾಗಿ ಆಚರಿಸುವುದಕ್ಕೆ ಹೆಸರುವಾಸಿಯಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಪಂದ್ಯ ಮುಕ್ತಾಯವಾದ ನಂತರವೂ ಸಹ ವಿಭಿನ್ನವಾಗಿ ಸಂಭ್ರಮವನ್ನು ಆಚರಿಸಿದ್ದು, ಆರ್‌ಸಿಬಿ ಉತ್ತಮ ತಂಡ ಎಂದು ವಿಶೇಷ ಹಾಡನ್ನು ಹಾಡುವ ಮೂಲಕ ತಂಡದ ಆಟಗಾರರು ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಗೆಲುವಿನ ನಂತರದ ಡ್ರೆಸಿಂಗ್ ರೂಮ್ ಸಂಭ್ರಮಾಚರಣೆ ಎಂದು ಬರೆದುಕೊಂಡಿದೆ.

ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡು ಪ್ಲೆಸಿಸ್ ಸೇರಿದಂತೆ ಇತರೆ ಆಟಗಾರರು ಕುಣಿದಿದ್ದು, ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಹೆಜ್ಜೆ ಹಾಕಿದ್ದಾರೆ. ಇನ್ನು ಈ ವಿಡಿಯೋದಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ ಮಾತನಾಡಿದ್ದು, ಪಂದ್ಯದಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಜೋಡಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Story first published: Wednesday, April 6, 2022, 12:48 [IST]
Other articles published on Apr 6, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+