ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

MI vs DC: ಆರ್‌ಸಿಬಿ ಅಭಿಮಾನಿಗಳಿಗೆ ಬೇಸರ ಮೂಡಿಸಿದ ರೋಹಿತ್ ಶರ್ಮಾ ಹೇಳಿಕೆ

IPL 2022: RCB Fans Angry To Rohit Sharmas Statement On Mumbai Indians vs Delhi Capitals Match

ಐಪಿಎಲ್ 2022ರ 15ನೇ ಋತುವಿನ 67ನೇ ಪಂದ್ಯದಲ್ಲಿ ತಮ್ಮ ಪ್ಲೇ-ಆಫ್ ಅರ್ಹತೆಯ ಭರವಸೆಯನ್ನು ಜೀವಂತವಾಗಿರಿಸಲು ಆರ್‌ಸಿಬಿ ತಂಡ ಗುರುವಾರ ಗುಜರಾತ್ ಟೈಟನ್ಸ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಇದೇ ವೇಳೆ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿ 73 ರನ್‌ಗಳ ಬ್ಯಾಟಿಂಗ್‌ನ ಮಾಸ್ಟರ್‌ಕ್ಲಾಸ್ ಪ್ರದರ್ಶಿಸಿದರು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಆರ್‌ಸಿಬಿಗೆ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಹೀಗಾಗಿ ಮೊದಲು ಬೌಲಿಂಗ್ ಮಾಡಿದ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ಬೌಲರ್‌ಗಳು ಗುಜರಾತ್ ಟೈಟನ್ಸ್ ಅಗ್ರ ಕ್ರಮಾಂಕದ ಬ್ಯಾಟಿಂಗ್ ಬಲವನ್ನು ಮುರಿದರು. ಪ್ಲೇಆಫ್ ಹಂತಕ್ಕೆ ತಲುಪಬೇಕಿದ್ದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆದ್ದು, ಕನಸು ಜೀವಂತವಾಗಿರಿಸಿಕೊಂಡಿದ್ದಾರೆ.

ಆದರೆ ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದ ಮೊದಲ ತಂಡ ಮುಂಬೈ ಇಂಡಿಯನ್ಸ್ ಅವರ ಕೈಯಲ್ಲಿ ಆರ್‌ಸಿಬಿ ಭವಿಷ್ಯವಿದೆ. ಹೌದು, ಬೆಂಗಳೂರು ತಂಡ ನಿರ್ಣಾಯಕ ಪಂದ್ಯ ಗೆದ್ದರೂ, ನಾಳಿನ ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಸೋಲಲೇಬೇಕಿದೆ.

ಮುಂಬೈ ಇಂಡಿಯನ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ಸೋಲಬೇಕು

ಮುಂಬೈ ಇಂಡಿಯನ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ಸೋಲಬೇಕು

ಮುಂಬೈ ಇಂಡಿಯನ್ಸ್‌ನ ಪ್ರಸಕ್ತ ಐಪಿಎಲ್ ಸೀಸನ್‌ನ ಕೊನೆಯ ಪಂದ್ಯ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿದೆ. ಈ ಪಂದ್ಯದಲ್ಲಿ ಡೆಲ್ಲಿ ಗೆದ್ದರೆ ಆರ್‌ಸಿಬಿಗೆ ಪ್ಲೇಆಫ್ ಬಾಗಿಲು ಮುಚ್ಚಿದಂತಾಗುತ್ತದೆ. ಆದರೆ ಡೆಲ್ಲಿ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ನೀಡಿದ ಹೇಳಿಕೆ ರಾಯಲ್ ಚಾಲೆಂಜರ್ಸ್ ಅಭಿಮಾನಿಗಳಿಗೆ ಬೇಸರ ತರಿಸಿದೆ. ಈ ಸಂಬಂಧ ಆರ್​ಸಿಬಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

ಹೊಸ ಆಟಗಾರರಿಗೆ ಅವಕಾಶ ನೀಡುತ್ತೇವೆ ಎಂದ ರೋಹಿತ್

ಹೊಸ ಆಟಗಾರರಿಗೆ ಅವಕಾಶ ನೀಡುತ್ತೇವೆ ಎಂದ ರೋಹಿತ್

ಇನ್ನು ಕಳೆದ ಕೊನೆ ಪಂದ್ಯದ ಬಳಿಕ ಮಾತನಾಡಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ""ಮುಂದಿನ ಪಂದ್ಯದಲ್ಲಿ ನಾವು ಕೆಲವು ಹೊಸ ಆಟಗಾರರಿಗೆ ಅವಕಾಶ ನೀಡುತ್ತೇವೆ. ಇದರಿಂದ ಮುಂದಿನ ಋತುವಿನ ತಯಾರಿಯನ್ನು ಪ್ರಾರಂಭಿಸಬಹುದು,'' ಎಂದು ನೀಡಿರುವ ಹೇಳಿಕೆ ಇದೀಗ ಆರ್​ಸಿಬಿ ಅಭಿಮಾನಿಗಳಿಗೆ ಬೇಸರ ತರಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಮಾತನಾಡಿದ್ದರು.

ರೋಹಿತ್ ಶರ್ಮಾ ಅವರ ಈ ಹೇಳಿಕೆಯನ್ನು ಆರ್‌ಸಿಬಿ ಅಭಿಮಾನಿಗಳಿಗೆ ನಿಜಕ್ಕೂ ಬೇಸರ ತರಿಸಿದೆ. ಮುಂಬೈ ಇಂಡಿಯನ್ಸ್ ತನ್ನ ಕೊನೆಯ ಪಂದ್ಯದಲ್ಲಿ ದುರ್ಬಲ ತಂಡವನ್ನು ಕಣಕ್ಕಿಳಿಸಿ ಸೋಲಲು ಮತ್ತು ಆರ್‌ಸಿಬಿಗೆ ಪ್ಲೇ-ಆಫ್ ತಲುಪಲು ಸಾಧ್ಯವಾಗದಂತೆ ಮಾಡಲು ಉದ್ದೇಶಪೂರ್ವಕವಾಗಿ ಈ ರೀತಿ ಮಾಡುತ್ತಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಆರೋಪಿಸಿದ್ದಾರೆ.

ಪ್ಲೇಆಫ್ ​ಟಿಕೆಟ್ ಕಳೆದುಕೊಂಡಿರುವ ಮುಂಬೈ ಇಂಡಿಯನ್ಸ್

ಪ್ಲೇಆಫ್ ​ಟಿಕೆಟ್ ಕಳೆದುಕೊಂಡಿರುವ ಮುಂಬೈ ಇಂಡಿಯನ್ಸ್

ಮುಂಬೈ ಇಂಡಿಯನ್ಸ್ ಈ ಋತುವಿನಲ್ಲಿ 13 ಪಂದ್ಯಗಳಲ್ಲಿ 10ರಲ್ಲಿ ಸೋತಿದ್ದು, ಕೇವಲ ಮೂರರಲ್ಲಿ ಗೆದ್ದಿದೆ. ಇದು ಐಪಿಎಲ್ ಇತಿಹಾಸದಲ್ಲಿ ಮುಂಬೈ ತಂಡದ ಅತ್ಯಂತ ಕಳಪೆ ಪ್ರದರ್ಶನವಾಗಿದೆ. ಈ ಮೂಲಕ ಐಪಿಎಲ್ 2022ರಲ್ಲಿ ಲೀಗ್​ ಹಂತದಿಂದ ಹೊರನಡೆದ ಮೊದಲ ತಂಡವಾಗಿದೆ. ಮತ್ತೊಂದೆಡೆ ಆರ್‌ಸಿಬಿ 14 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸಿದೆ. ಈಗಾಗಲೇ ಆರ್‌ಸಿಬಿ ತಂಡ ಗುಜರಾತ್‌ ಟೈಟನ್ಸ್ ವಿರುದ್ಧ ಗೆದ್ದಿದ್ದು, ಮುಂಬೈ ತಂಡ ಡೆಲ್ಲಿ ತಂಡವನ್ನು ಸೋಲಿಸಿದರೆ, ಬೆಂಗಳೂರು ತಂಡಕ್ಕೆ ಪ್ಲೇಆಫ್ ಪ್ರವೇಶಿಸಲಿದೆ.

RCB ಅಭಿಮಾನಿಗಳೆಲ್ಲಾ ಈಗ Mumbai Indians ಅಭಿಮಾನಿಗಳು | Oneindia Kannada
ಮಾಡು ಇಲ್ಲವೇ ಮಡಿ ಪಂದ್ಯವನ್ನು ಗೆದ್ದ ಆರ್‌ಸಿಬಿ

ಮಾಡು ಇಲ್ಲವೇ ಮಡಿ ಪಂದ್ಯವನ್ನು ಗೆದ್ದ ಆರ್‌ಸಿಬಿ

ಉತ್ತಮ ಆರಂಭವನ್ನು ಪಡೆಯುವಲ್ಲಿ ವಿಫಲವಾದ ಗುಜರಾತ್ ಟೈಟನ್ಸ್ ತಂಡಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ತಂಡವನ್ನು ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದರು. ಹಾರ್ದಿಕ್ ಪಾಂಡ್ಯ ಅವರ 47 ಎಸೆತಗಳಲ್ಲಿ 62 ರನ್ ಸಹಾಯದಿಂದ ಆರ್‌ಸಿಬಿಗೆ 169 ರನ್‌ಗಳ ಉತ್ತಮ ಗುರಿ ನೀಡಿದರು.

ನಂತರ ಬ್ಯಾಟಿಂಗ್ ಆರಂಭಿಸಿದ ಆರ್‌ಸಿಬಿ, ಆರಂಭಿಕ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ಟೈಟನ್ಸ್ ವಿರುದ್ಧ 73 ರನ್ ಗಳಿಸಿ ಫಾರ್ಮ್‌ಗೆ ಮರಳಿದರು, ಜೊತೆಗೆ ನಾಯಕ ಫಾಫ್ ಡು ಪ್ಲೆಸಿಸ್ 44 ರನ್ ಗಳಿಸಿದರು. ಕೊನೆಯಲ್ಲಿ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್‌ವೆಲ್ ಔಟಾಗದೆ 40 ರನ್ ಗಳಿಸಿದರು ಮತ್ತು ಟೇಬಲ್-ಟಾಪ್ಪರ್‌ಗಳ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯವನ್ನು ಗೆದ್ದು ಬೀಗಿದರು.

Story first published: Friday, May 20, 2022, 23:18 [IST]
Other articles published on May 20, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X