ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಮನೀಶ್ ಪಾಂಡೆ ಅಲ್ಲ ಮುಂಬೈನ ಈ ಆಟಗಾರ ಆಗಲಿದ್ದಾರೆ ಆರ್‌ಸಿಬಿ ನಾಯಕ!

IPL 2022: RCB franchise keen to buy Shreyas Iyer in the mega auction and likely to made him captain

ಈ ವರ್ಷ ನಡೆಯಲಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಶುರುವಾಗುವುದಕ್ಕೂ ಮುನ್ನವೇ ಭಾರೀ ದೊಡ್ಡ ಮಟ್ಟದ ನಿರೀಕ್ಷೆ ಹಾಗೂ ಕುತೂಹಲಗಳನ್ನು ಹುಟ್ಟುಹಾಕಿದೆ. ಹೌದು, ಈ ವರ್ಷ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 2 ನೂತನ ತಂಡಗಳ ಸೇರ್ಪಡೆಯಾಗುತ್ತಿರುವುದರಿಂದ ಟೂರ್ನಿ ಆರಂಭಕ್ಕೂ ಮುನ್ನ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಭಾರತದ ಸೋಲಿಗೆ ಕಾರಣನಾದ ದ.ಆಫ್ರಿಕಾದ ಈ ಆಟಗಾರನನ್ನು ಕನ್ನಡಿಗನಿಗೆ ಹೋಲಿಸಿ ಹೊಗಳಿದ ರವಿಶಾಸ್ತ್ರಿಭಾರತದ ಸೋಲಿಗೆ ಕಾರಣನಾದ ದ.ಆಫ್ರಿಕಾದ ಈ ಆಟಗಾರನನ್ನು ಕನ್ನಡಿಗನಿಗೆ ಹೋಲಿಸಿ ಹೊಗಳಿದ ರವಿಶಾಸ್ತ್ರಿ

ಟೂರ್ನಿಯಲ್ಲಿ ಈ ಬಾರಿ ಟ್ರೋಫಿಗೋಸ್ಕರ ಹತ್ತು ತಂಡಗಳ ನಡುವೆ ಸೆಣಸಾಟ ನಡೆಯಲಿದ್ದು, ಲಕ್ನೋ ಮತ್ತು ಅಹ್ಮದಾಬಾದ್ ತಂಡಗಳು ಈ ಬಾರಿ ಟೂರ್ನಿ ಸೇರಿಕೊಳ್ಳುತ್ತಿರುವ ನೂತನ ತಂಡಗಳಾಗಿವೆ. ಕಳೆದ ವರ್ಷ ನಡೆದ ಫ್ರಾಂಚೈಸಿಗಳ ಹರಾಜು ಪ್ರಕ್ರಿಯೆಯಲ್ಲಿ ಲಕ್ನೋ ಮತ್ತು ಅಹಮದಾಬಾದ್ ಫ್ರಾಂಚೈಸಿಗಳು ನೂತನ ತಂಡಗಳಾಗಿ ಹೊರಹೊಮ್ಮಿದ ನಂತರ ಅಸ್ತಿತ್ವದಲ್ಲಿರುವ ತಂಡಗಳ ಆಟಗಾರರ ರಿಟೆನ್ಷನ್ ಪ್ರಕ್ರಿಯೆ ನಡೆಯಿತು. ಹೊಸ ಫ್ರಾಂಚೈಸಿಗಳ ಸೇರ್ಪಡೆಯಾದ ಕಾರಣ ಟೂರ್ನಿ ಆರಂಭಕ್ಕೂ ಮುನ್ನ ಮೆಗಾ ಹರಾಜು ಪ್ರಕ್ರಿಯೆ ನಡೆಸಬೇಕಾಗಿರುವ ಸಲುವಾಗಿ ಈ ಆಟಗಾರರ ರಿಟೆನ್ಷನ್ ಪ್ರಕ್ರಿಯೆಯನ್ನು ನಡೆಸಲಾಯಿತು.

ಟೆಸ್ಟ್ ನಾಯಕತ್ವಕ್ಕೆ ಕೊಹ್ಲಿ ವಿದಾಯ: ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗೆದ್ದಿದ್ದೆಷ್ಟು, ಸೋತಿದ್ದೆಷ್ಟು?ಟೆಸ್ಟ್ ನಾಯಕತ್ವಕ್ಕೆ ಕೊಹ್ಲಿ ವಿದಾಯ: ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗೆದ್ದಿದ್ದೆಷ್ಟು, ಸೋತಿದ್ದೆಷ್ಟು?

ಹೀಗೆ ನಡೆದ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಅಸ್ತಿತ್ವದಲ್ಲಿರುವ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ರಿಟೇನ್ ಮಾಡಿಕೊಂಡು ಉಳಿದ ಆಟಗಾರರನ್ನು ತಂಡದಿಂದ ಕೈಬಿಟ್ಟಿವೆ. ಹೀಗೆ ತಮ್ಮ ಫ್ರಾಂಚೈಸಿಗಳಿಂದ ರಿಟೈನ್ ಆಗದೇ ಹೊರಬಿದ್ದ ಆಟಗಾರರಲ್ಲಿ ಈ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳಲ್ಲಿ ತಂಡಗಳನ್ನು ನಾಯಕನಾಗಿ ಮುನ್ನಡೆಸಿದ್ದ ಆಟಗಾರರು ಕೂಡ ಇದ್ದಾರೆ. ಹೀಗಾಗಿ ನಾಯಕತ್ವದ ಸಾಮರ್ಥ್ಯವಿರುವ ಈ ಆಟಗಾರರನ್ನು ನೂತನವಾಗಿ ಸೇರ್ಪಡೆಗೊಳ್ಳುತ್ತಿರುವ ಲಕ್ನೋ ಮತ್ತು ಅಹಮದಾಬಾದ್ ಸೇರಿದಂತೆ ಅಸ್ತಿತ್ವದಲ್ಲಿರುವ ಉಳಿದ ತಂಡಗಳು ಕೂಡ ಖರೀದಿಸುವ ಯೋಜನೆಯಲ್ಲಿವೆ. ಹೀಗೆ ಸದ್ಯ ನಾಯಕನಿಲ್ಲದೇ ಇರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ನಾಯಕತ್ವ ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿರುವ ಆಟಗಾರರನ್ನು ಖರೀದಿಸಲಿದೆ. ಈ ಹಿಂದೆ ಹೊರಬಿದ್ದಿದ್ದ ಸುದ್ದಿಯೊಂದರ ಪ್ರಕಾರ ಮನೀಷ್ ಪಾಂಡೆ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಲಿದ್ದು ನಾಯಕನ ಜವಾಬ್ದಾರಿಯನ್ನು ನೀಡಲಿದೆ ಎನ್ನಲಾಗುತ್ತಿತ್ತು. ಆದರೆ ಸದ್ಯ ಈ ಕುರಿತಾಗಿ ಹೊರಬಿದ್ದಿರುವ ನೂತನ ಮಾಹಿತಿಯೊಂದರ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಮೂಲದ ಈ ಆಟಗಾರನನ್ನು ಮೆಗಾ ಹರಾಜಿನಲ್ಲಿ ಖರೀದಿಸಿ ನಾಯಕತ್ವವನ್ನು ನೀಡಲು ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿದೆ ಎನ್ನಲಾಗುತ್ತಿದೆ. ಅದರ ಕುರಿತಾದ ವಿವರಗಳು ಈ ಕೆಳಕಂಡಂತಿವೆ..

ಶ್ರೇಯಸ್ ಅಯ್ಯರ್ ಹೆಗಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕತ್ವ

ಶ್ರೇಯಸ್ ಅಯ್ಯರ್ ಹೆಗಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕತ್ವ

ಈ ಬಾರಿ ರಿಟೆನ್ಷನ್ ಪ್ರಕ್ರಿಯೆಯಲ್ಲಿ ರಿಟೈನ್ ಆಗದೇ ಹೊರಬಿದ್ದ ಆಟಗಾರರ ಪೈಕಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕನಾಗಿದ್ದ ಶ್ರೇಯಸ್ ಅಯ್ಯರ್ ಕೂಡ ಒಬ್ಬರು. ಹೌದು, ಮೂಲತಃ ಮಹಾರಾಷ್ಟ್ರದ ಮುಂಬೈನ ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ನಿಭಾಯಿಸಿದ ಅನುಭವ ಹೊಂದಿದ್ದು, ಇತ್ತೀಚೆಗಷ್ಟೇ ನಡೆದ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯಿಂದ ರಿಟೈನ್ ಆಗದೇ ಇದೀಗ ಮೆಗಾ ಹರಾಜಿನಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಶ್ರೇಯಸ್ ಅಯ್ಯರ್ ಅವರನ್ನು ಮೆಗಾ ಹರಾಜಿನಲ್ಲಿ ಖರೀದಿಸಲಿದ್ದು, ನಾಯಕ ಸ್ಥಾನವನ್ನು ನೀಡುವುದು ಖಚಿತ ಎಂದು ವರದಿಯೊಂದು ತಿಳಿಸಿದೆ.

ಶ್ರೇಯಸ್ ಅಯ್ಯರ್ ಮೇಲೆ ಸುರಿಯಲಿದೆ ಹಣದ ಹೊಳೆ

ಶ್ರೇಯಸ್ ಅಯ್ಯರ್ ಮೇಲೆ ಸುರಿಯಲಿದೆ ಹಣದ ಹೊಳೆ

ಇನ್ನು ಮೂಲಗಳು ತಿಳಿಸಿರುವ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶ್ರೇಯಸ್ ಅಯ್ಯರ್ ಅವರನ್ನು ಈ ಬಾರಿಯ ಹರಾಜು ಪ್ರಕ್ರಿಯೆಯಲ್ಲಿ ಟಾರ್ಗೆಟ್ ಮಾಡಲಿದ್ದು, ಆತನ ಮೇಲೆ ಹಣದ ಹೊಳೆ ಹರಿಸಲು ಸಿದ್ಧವಾಗಿದೆಯಂತೆ. ಅಷ್ಟೇ ಅಲ್ಲದೇ ಶ್ರೇಯಸ್ ಅಯ್ಯರ್ ಮೇಲೆ ಉಳಿದ ತಂಡಗಳು ಕೂಡ ಕಣ್ಣಿಟ್ಟಿದ್ದು, ಹರಾಜು ಪ್ರಕ್ರಿಯೆಯಲ್ಲಿ ಫ್ರಾಂಚೈಸಿಗಳ ನಡುವೆ ಜಿದ್ದಾಜಿದ್ದಿ ಏರ್ಪಡಲಿದೆ.

ಶ್ರೇಯಸ್ ಅಯ್ಯರ್ ಐಪಿಎಲ್ ಅಂಕಿಅಂಶದ ವಿವರ

ಶ್ರೇಯಸ್ ಅಯ್ಯರ್ ಐಪಿಎಲ್ ಅಂಕಿಅಂಶದ ವಿವರ

ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಶ್ರೇಯಸ್ ಅಯ್ಯರ್ ಇದುವರೆಗೂ ಒಟ್ಟು 87 ಪಂದ್ಯಗಳನ್ನಾಡಿದ್ದು 2375 ರನ್ ಕಲೆಹಾಕಿದ್ದಾರೆ. ಈ ಪೈಕಿ 12 ಪಂದ್ಯಗಳಲ್ಲಿ ಅಜೇಯನಾಗಿ ಉಳಿದಿರುವ ಶ್ರೇಯಸ್ ಅಯ್ಯರ್ ಇನ್ನಿಂಗ್ ಒಂದರಲ್ಲಿ ಗರಿಷ್ಠ 96 ರನ್ ಗಳಿಸಿದ್ದು, 16 ಅರ್ಧಶತಕಗಳನ್ನು ಬಾರಿಸಿದ್ದಾರೆ.

Story first published: Monday, January 17, 2022, 17:24 [IST]
Other articles published on Jan 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X