ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: ಕಳಪೆ ಆಟ ಆಡಿದ್ರೂ ಈ ಮೂವರನ್ನು ಐಪಿಎಲ್ 2023ಕ್ಕೆ ತಂಡದಿಂದ ಕೈಬಿಡುವುದಿಲ್ಲ ಆರ್‌ಸಿಬಿ!

IPL 2022: RCB likely to retain these 3 players despite of their bad performance ahead of IPL 2023

ಕಳೆದ ಮೇ 29ರಂದು ನಡೆದ ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಜಯ ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿ, ಕಳೆದೆರೆಡು ತಿಂಗಳುಗಳ ಕಾಲ ನಡೆದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಅಂತ್ಯ ಕಂಡಿತು.

AUS vs SL: ಮೊದಲ ಟಿ20 ಪಂದ್ಯಕ್ಕೆ ಒಂದು ದಿನ ಮುಂಚೆಯೇ ಆಡುವ ಬಳಗ ಪ್ರಕಟಿಸಿದ ಆಸ್ಟ್ರೇಲಿಯಾAUS vs SL: ಮೊದಲ ಟಿ20 ಪಂದ್ಯಕ್ಕೆ ಒಂದು ದಿನ ಮುಂಚೆಯೇ ಆಡುವ ಬಳಗ ಪ್ರಕಟಿಸಿದ ಆಸ್ಟ್ರೇಲಿಯಾ

ಇನ್ನು ಈ ಬಾರಿಯ ಆವೃತ್ತಿಯಲ್ಲಿ ನೂತನ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಡಿಯಲ್ಲಿ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ತಲುಪುವಲ್ಲಿ ಯಶಸ್ವಿಯಾಯಿತಾದರೂ ಫೈನಲ್ ಪ್ರವೇಶಿಸುವಲ್ಲಿ ಎಡವಿತು. ಪ್ಲೇ ಆಫ್ ಸುತ್ತಿನ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹೀನಾಯವಾಗಿ ಸೋಲುವುದರ ಮೂಲಕ ಟೂರ್ನಿಯಿಂದ ಹೊರಬಿತ್ತು.

ಅತಿಹೆಚ್ಚು ಐಪಿಎಲ್ ಟ್ರೋಫಿ ಗೆದ್ದಿರುವ ಆಟಗಾರರ ಪಟ್ಟಿಯಲ್ಲಿ ಧೋನಿಗೆ 7ನೇ ಸ್ಥಾನ; ಇಲ್ಲಿದೆ ಟಾಪ್ 10 ಪಟ್ಟಿಅತಿಹೆಚ್ಚು ಐಪಿಎಲ್ ಟ್ರೋಫಿ ಗೆದ್ದಿರುವ ಆಟಗಾರರ ಪಟ್ಟಿಯಲ್ಲಿ ಧೋನಿಗೆ 7ನೇ ಸ್ಥಾನ; ಇಲ್ಲಿದೆ ಟಾಪ್ 10 ಪಟ್ಟಿ

ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯ ಪ್ರವೇಶಿಸುವ ಅವಕಾಶವನ್ನು ಕೊಂಚ ಹಿನ್ನಡೆ ಅನುಭವಿಸಿ ಕೈ ತಪ್ಪಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂಬರುವ ಐಪಿಎಲ್ ಆವೃತ್ತಿಯಲ್ಲಿ ಮತ್ತಷ್ಟು ಉತ್ತಮ ಪ್ರದರ್ಶನ ನೀಡುವ ಗುರಿಯನ್ನು ಹೊಂದಿದೆ. ಆದರೆ ಈ ಬಾರಿ ಕಳಪೆ ಪ್ರದರ್ಶನ ನೀಡಿರುವ ಕೆಲ ಆಟಗಾರರನ್ನು ಮುಂಬರುವ ಮಿನಿ ಹರಾಜಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೈಬಿಡಲಿದ್ದು, ಈ ಪೈಕಿ ಈ ಕೆಳಕಂಡ ಮೂವರು ಆಟಗಾರರನ್ನು ಮಾತ್ರ ಕಳಪೆ ಪ್ರದರ್ಶನ ನೀಡಿದ್ದರೂ ಸಹ ಸ್ಥಳದಲ್ಲಿಯೇ ಉಳಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ.

1. ಮೊಹಮ್ಮದ್ ಸಿರಾಜ್

1. ಮೊಹಮ್ಮದ್ ಸಿರಾಜ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಹೆಚ್ಚು ಬೆಂಬಲವನ್ನು ಪಡೆದುಕೊಂಡಿರುವ ಆಟಗಾರನೆಂದರೆ ಅದು ಮೊಹಮ್ಮದ್ ಸಿರಾಜ್. ಕಳಪೆ ಪ್ರದರ್ಶನ ನೀಡಿದರೂ ಮತ್ತೆ ಮತ್ತೆ ಅವಕಾಶ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಸಿರಾಜ್ 2020 ಮತ್ತು 2021ರ ಐಪಿಎಲ್ ಆವೃತ್ತಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ತೀರಾ ಕಳಪೆ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್ 15 ಪಂದ್ಯಗಳನ್ನಾಡಿ ಕೇವಲ 9 ವಿಕೆಟ್ ಪಡೆದು 10.07 ಎಕಾನಮಿಯಲ್ಲಿ ರನ್ ನೀಡಿ ದುಬಾರಿಯಾದರು. ಹೀಗೆ ತೀರಾ ಕಳಪೆ ಪ್ರದರ್ಶನ ನೀಡಿದ್ದರೂ ಸಹ ಮೊಹಮ್ಮದ್ ಸಿರಾಜ್ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕಳೆದ ವರ್ಷಗಳಂತೆ ಈ ವರ್ಷವೂ ಸಹ ಬೆಂಬಲ ನೀಡಿ ತಂಡದಲ್ಲಿಯೇ ಉಳಿಸಿಕೊಳ್ಳುವ ಸಾಧ್ಯತೆಗಳಿವೆ.

2. ಆಕಾಶ್ ದೀಪ್

2. ಆಕಾಶ್ ದೀಪ್

ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಪದಾರ್ಪಣೆ ಮಾಡಿದ ಆಕಾಶ್ ದೀಪ್ 5 ಪಂದ್ಯಗಳನ್ನಾಡಿ 5 ವಿಕೆಟ್ ಪಡೆದರು ಹಾಗೂ ಒಂದು ಮೇಡನ್ ಓವರ್ ಕೂಡ ಹಾಕಿದರು. ಆದರೆ ಆಕಾಶ್ ದೀಪ್ 10.88ರ ಎಕಾನಮಿಯಲ್ಲಿ ರನ್ ನೀಡಿದ್ದು ದುಬಾರಿಯಾದರು. ಆದರೂ ಸಹ ಈ ಯುವ ಕ್ರಿಕೆಟಿಗನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ಅವಕಾಶ ನೀಡಿ ತಂಡದಲ್ಲಿಯೇ ಉಳಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ.

Rishab Pant ವಿಕೆಟ್ ಕೀಪಿಂಗ್ ಆಯ್ಕೆ ಮಾಡಿಕೊಳ್ಳೋದಕ್ಕೆ ಇರೋ ಬಲವಾದ ಕಾರಣ ಏನು? | Oneindia Kannada
3. ಸಿದ್ಧಾರ್ಥ್ ಕೌಲ್

3. ಸಿದ್ಧಾರ್ಥ್ ಕೌಲ್

ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಸಿದ್ಧಾರ್ಥ್ ಕೌಲ್ ಇಡೀ ಟೂರ್ನಿಯಲ್ಲಿ ಕೇವಲ 1 ಪಂದ್ಯದಲ್ಲಿ ಮಾತ್ರ ಅವಕಾಶ ಪಡೆದರು. ತಂಡದ ಲೀಗ್ ಹಂತದ ಅಂತಿಮ ಪಂದ್ಯ ಗುಜರಾತ್ ಟೈಟನ್ಸ್ ವಿರುದ್ಧ ಇತ್ತು ಹಾಗೂ ಈ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ರಮುಖವಾಗಿತ್ತು. ಹೀಗಾಗಿ ಆ ಪಂದ್ಯದಲ್ಲಿ ವಿಕೆಟ್ ಕಬಳಿಸುವ ಸಲುವಾಗಿ ಮೊಹಮ್ಮದ್ ಸಿರಾಜ್ ಬದಲು ಸಿದ್ಧಾರ್ಥ್ ಕೌಲ್ ಅವರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳಲಾಗಿದೆ ಎಂಬ ಹೇಳಿಕೆಯನ್ನು ನಾಯಕ ಫಾಫ್ ಡು ಪ್ಲೆಸಿಸ್ ನೀಡಿದ್ದರು. ಆದರೆ ಈ ಪಂದ್ಯದಲ್ಲಿ ಯಾವುದೇ ವಿಕೆಟ್ ಪಡೆಯದೇ ಸಿದ್ಧಾರ್ಥ್ ಕೌಲ್ 43 ರನ್ ಬಿಟ್ಟುಕೊಟ್ಟು ದುಬಾರಿಯಾದರು. ಆದರೆ ಸಿದ್ಧಾರ್ಥ್ ಕೌಲ್ ಐಪಿಎಲ್ ಲೀಗ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಕಾರಣದಿಂದಾಗಿ ಮುಂದಿನ ಆವೃತ್ತಿಗೆ ಈತನನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತಂಡದಲ್ಲಿಯೇ ಉಳಿದುಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ.

Story first published: Monday, June 6, 2022, 19:06 [IST]
Other articles published on Jun 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X