ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆರ್‌ಸಿಬಿ vs ಆರ್‌ಆರ್: ಬೇಡದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡ ಆರ್‌ಸಿಬಿ ವೇಗಿ

IPL 2022: RCB Pacer Mohammed Siraj creates unwanted record history of IPL

ಐಪಿಎಲ್ 15ನೇ ಆವೃತ್ತಿಯಲ್ಲಿ ಆರ್‌ಸಿಬಿ ತಂಡದ ಹೋರಾಟ ಅಂತ್ಯವಾಗಿದೆ. ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಅನುಭವಿಸುವ ಮೂಲಕ 15ನೇ ಆವೃತ್ತಿಯಲ್ಲಿ ತನ್ನ ಅಭಿಯಾನವನ್ನು ಅಂತ್ಯಗೊಳಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ರಾಜಸ್ಥಾನ್ ರಾಯಲ್ಸ್ ತಂಡ ಆರ್‌ಸಿಬಿಯನ್ನು ಸಂಪೂರ್ಣವಾಗಿ ಹಿಂದಿಕ್ಕಿದ್ದು ಭರ್ಜರಿ ಗೆಲುವು ಸಾಧಿಸಿ ಐಪಿಎಲ್ ಇತಿಹಾಸದಲ್ಲಿ ಎರಡನೇ ಬಾರಿಗೆ ಫೈನಲ್ ಪ್ರವೇಶ ಪಡೆದುಕೊಂಡಿದೆ.

ಈ ಪಂದ್ಯದಲ್ಲಿ ಆರ್‌ಸಿಬಿ ವೇಗದ ಬೌಲರ್ ಮೊಹಮ್ಮದ್ ಮತ್ತೊಮ್ಮೆ ದುಬಾರಿಯಾಗಿ ಪರಿಣಮಿಸಿದರು. ಮಾತ್ರವಲ್ಲದೆ ಐಪಿಎಲ್‌ನಲ್ಲಿ ಸಿರಾಜ್ ಕೆಟ್ಟ ದಾಖಲೆಯೊಂದನ್ನು ಕೂಡ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ಸಿಕ್ಸರ್ ನೀಡಿದ ಬೌಲರ್ ಎಂಬ ಬೇಡದ ದಾಖಲೆ ಈಗ ಮೊಹಮ್ಮದ್ ಸಿರಾಜ್ ಹೆಸರಿಗೆ ವರ್ಗವಾಗಿದೆ.

RCB vs RR: ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಈ ತಂಡಕ್ಕೆ ಸೋಲಿನ ಭೀತಿ ಇದೆ ಎಂದ ಸ್ಮಿತ್RCB vs RR: ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಈ ತಂಡಕ್ಕೆ ಸೋಲಿನ ಭೀತಿ ಇದೆ ಎಂದ ಸ್ಮಿತ್

ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್‌ರೌಂಡರ್ ಡೇಯ್ನ್ ಬ್ರಾವೋ ಹೆಸರಿನಲ್ಲಿತ್ತು. 2018ರ ಆವೃತ್ತಿಯಲ್ಲಿ ಬ್ರಾವೋ 29 ಸಿಕ್ಸರ್‌ಗಳನ್ನು ನೀಡಿದ್ದರು. ದುರದೃಷ್ಟವಶಾತ್ ಈ ಬಾರಿಯ ಆವೃತ್ತಿಯಲ್ಲಿ ಇಬ್ಬರು ಆರ್‌ಸಿಬಿಯ ಬೌಲರ್‌ಗಳು ಡೇಯ್ನ್ ಬ್ರಾವೋ ಅವರ ಈ ದಾಖಲೆಯನ್ನು ಮುರಿದಿದ್ದಾರೆ. ಆರ್‌ಸಿಬಿ ತಂಡದ ಸ್ಪಿನ್ನರ್ ವನಿಂದು ಹಸರಂಗ ಕೂಡ ಈ ಬಾರಿಯ ಆವೃತ್ತಿಯೊಂದರಲ್ಲಿಯೇ 30 ಸಿಕ್ಸರ್‌ಗಳನ್ನು ನೀಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್‌ಗಳನ್ನು ಗಳಿಸಿತ್ತು. ರಜತ್ ಪಾಟಿದಾರ್ ಮಾತ್ರವೇ ಅರ್ಧ ಶತಕ ಗಳಿಸಿ ಆರ್‌ಸಿಬಿ ತಂಡಕ್ಕೆ ಆಸರೆಯಾಗಿದ್ದರು. ಉಳಿದಂತೆ ದೊಡ್ಡ ಮೊತ್ತದ ಕೊಡುಗೆ ಯಾವ ಆಟಗಾರನಿಂದಲೂ ಆರ್‌ಸಿಬಿ ತಂಡಕ್ಕೆ ದೊರೆಯಲಿಲ್ಲ.

ಇನ್ನು ಈ ಮೊತ್ತವನ್ನು ಬೆನ್ನಟ್ಟಿದ ಆರ್‌ಆರ್ ತಂಡಕ್ಕೆ ಅದ್ಭುತ ಆರಂಭ ದೊರೆಯಿತು. ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಜೋಸ್ ಬಟ್ಲರ್ ಮತ್ತೊಂದು ಭರ್ಜರಿ ಶತಕವನ್ನು ದಾಖಲಿಸಿದ್ದಾರೆ. 60 ಎಸೆತಗಳನ್ನು ಎದುರಿಸಿದ ಜೋಸ್ ಬಟ್ಲರ್ ಅಜೇಯ 106 ರನ್‌ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇನ್ನೂ 11 ಎಸೆತಗಳು ಬಾಕಿಯಿರುವಂತೆಯೇ ಈ ಪಂದ್ಯದಲ್ಲಿ ಆರ್‌ಆರ್ ತಂಡ ಗೆದ್ದು ಬೀಗಿದೆ.

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಹಾಲ್
ಬೆಂಚ್: ಕರುಣ್ ನಾಯರ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕಾರ್ಬಿನ್ ಬಾಷ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಡೇರಿಲ್ ಮಿಚೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ ಜುರೆಲ್, ಶುಭಂ ಗರ್ವಾ

RCB ಅಭಿಮಾನಿಗಳು ಮತ್ತೊಂದು ವರ್ಷ ಕಾಯಲು ರೆಡಿ | Oneindia Kannada

ಆರ್‌ಸಿಬಿ ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
ಬೆಂಚ್: ಆಕಾಶ್ ದೀಪ್, ಅನೀಶ್ವರ್ ಗೌತಮ್, ಶೆರ್ಫೇನ್ ರುದರ್ಫೋರ್ಡ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ಚಾಮ ವಿ ಮಿಲಿಂದ್, ಜೇಸನ್ ಬೆಹ್ರೆನ್ಡಾರ್ಫ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಫಿನ್ ಅಲೆನ್, ಸಿದ್ದಾರ್ಥ್ ಕೌಲ್

Story first published: Saturday, May 28, 2022, 9:41 [IST]
Other articles published on May 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X