RCB victory anthem for IPL 2022. 'ಗೆಲುವು ಗುರು'; ವಿಜಯ ಗೀತೆ ಬಿಡುಗಡೆಗೊಳಿಸಿದ ಆರ್‌ಸಿಬಿ: ವಿಡಿಯೋ

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಎರಡನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ. ಈ ಗೆಲುವಿನ ಸಂಭ್ರಮದಲ್ಲಿರುವ ಆರ್‌ಸಿಬಿ ಅಭಿಮಾನಿಗಳಿಗೆ ಫ್ರಾಂಚೈಸಿ ಮತ್ತೊಂದು ಉಡುಗೊರೆ ನೀಡಿದೆ. ಆರ್‌ಸಿಬಿ ತಂಡದ ವಿಜಯ ಗೀತೆಯನ್ನು ಬಿಡುಗಡೆಗೊಳಿಸಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ಫ್ರಾಂಚೈಸಿ ಹಂಚಿಕೊಂಡಿದೆ. ಈ ಹಾಡು ಆಟದ ಗೆಲ್ಲುವ ಉತ್ಸಾಹವನ್ನು ಸೂಚಿಸುತ್ತದೆ. ಜೊತೆಗೆ ಅಭಿಮಾನಿಗಳು ಹಾಗೂ ಪ್ರೇಕ್ಷಕರ ಉತ್ಸಾಹವನ್ನೂ ಹೆಚ್ಚಿಸುತ್ತದೆ.
ಆರ್‌ಸಿಬಿ ಅಭಿಮಾನಿಗಳು ಕಳೆದ ಹಲವು ವರ್ಷಗಳಿಂದ 'ಈ ಸಲ ಕಪ್ ನಮ್ದೇ' ಘೋಷವಾಕ್ಯದೊಂದಿಗೆ ಉತ್ಸಾಹದಿಂದ ಪ್ರತಿ ಆವೃತ್ತಿಗೂ ಸಿದ್ಧವಾಗುತ್ತಿದ್ದಾರೆ. ಈ ಬಾರಿ ಅಭಿಮಾನಿಗಳಿಗೆ ಆರ್‌ಸಿಬಿ ಫ್ರಾಂಚೈಸಿಯೇ ವಿಜಯ ಗೀತೆಯನ್ನು ಸಿದ್ಧಪಡಿಸಿ ಬಿಡುಗಡೆಗೊಳಿಸಿದೆ.
ಈ ಬಾರಿಯ ಟೂರ್ನಿಯಲ್ಲಿ ಆರ್‌ಸಿಬಿ ಸಾಧಾರಣ ಆರಂಭವನ್ನು ಪಡೆದಿದೆ. ಮೊದಲ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ನಡೆಸಿದ ತಂಡ 200ಕ್ಕೂ ಅಧಿಕ ರನ್ ಕಲೆ ಹಾಕಿತ್ತು. ಆದರೆ ಎದುರಾಳಿ ಪಂಜಾಬ್ ಕಿಂಗ್ಸ್ ಕೂಡ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದು ಈ ಮೊತ್ತವನ್ನು ಮೀರಿ ನಿಲ್ಲುವಲ್ಲಿ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ 88 ರನ್‌ಗಳಿಸುವ ಮೂಲಕ ಆರ್‌ಸಿಬಿ ಪರವಾಗಿ ಮಿಂಚಿದ್ದರು.
ಇನ್ನು ಮೊದಲ ಪಂದ್ಯದಲ್ಲಿ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ್ದ ಆರ್‌ಸಿಬಿ ಪಡೆ ಎರಡನೇ ಪಂದ್ಯದಲ್ಲಿ ಲಯಕ್ಕೆ ಮರಳಿತ್ತು. ತಮಡದ ಪ್ರಮುಖ ಆಟಗಾರರಾದ ವನಿಂದು ಹಸರಂಗ ಹಾಗೂ ಹರ್ಷಲ್ ಪಟೇಲ್ ಅಮೋಘ ಪ್ರದರ್ಶನ ನಡೆಸಿ ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಘಾತ ನೀಡಿದರು. ಈ ಮೂಲಕ ಎದುರಾಳಿಯನ್ನು 128 ರನ್‌ಗಳಿಗೆ ಆಲೌಟ್ ಮಾಡಿತ್ತು. ಇದನ್ನು ಬೆನ್ನಟ್ಟಿದ ಆರ್‌ಸಿಬಿ ಬ್ಯಾಟಿಂಗ್‌ನಲ್ಲಿ ಹಿನ್ನಡೆ ಅನುಭವಿಸಿದರೂ ಪ್ರಯಾಸದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಈ ಬಾರಿಯ ಟೂರ್ನಿಯಲ್ಲಿ ಆರ್‌ಸಿಬಿ ತಂಡವನ್ನು ನೂತನ ನಾಯಕ ಮುನ್ನಡೆಸುತ್ತಿದ್ದಾರೆ. ಹರಾಜು ಪ್ರಕ್ರಿಯೆಯಲ್ಲಿ ಫಾಫ್ ಡು ಪ್ಲೆಸಿಸ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿದ್ದ ಆರ್‌ಸಿಬಿ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಿದೆ. ಫಾಫ್ ನಾಯಕತ್ವದಲ್ಲಿ ಆರ್‌ಸಿಬಿ ತಂಡ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ಆರ್‌ಸಿಬಿ ಸಂಪೂರ್ಣ ಸ್ಕ್ವಾಡ್: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್(ನಾಯಕ), ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫಾನ್ ರುದರ್‌ಫೋರ್ಡ್, ಜೇಸನ್ ಬೆಹ್ರೆಂಡ್, ಜೇಸನ್ ಬೆಹ್ರಾಯ್ ಮಿಲಿಂದ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications