IPL 2022 : ಈತ ಭವಿಷ್ಯದ ಆಟಗಾರ: ಯುವ ಆಟಗಾರನನ್ನು ಕೊಂಡಾಡಿದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಮೂರನೇ ಗೆಲುವು ಸಾಧಿಸಲುವಲ್ಲಿ ಯಶಸ್ವಿಯಾಗಿದೆ. ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಹಣಾಹಣಿ ನಡೆಸಿದ್ದು ಈ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ತಂಡ ಅದ್ಭುತ ಪ್ರದರ್ಶನ ನೀಡಿ ಮಿಂಚಿದೆ. ಸರ್ವಾಂಗೀಣ ಪ್ರದರ್ಶನ ನೀಡಿದ ಆರ್‌ಸಿಬಿ ಎಲ್ಲಾ ವಿಭಾಗದಲ್ಲಿಯೂ ಮುಂಬೈ ಇಂಡಿಯನ್ಸ್ ವಿರುದ್ಧ ಮೇಲುಗೈ ಸಾಧಿಸಿದ್ದು ಸುಲಭ ಗೆಲುವು ದಕ್ಕಿಸಿಕೊಂಡಿದೆ.
ಈ ಪಂದ್ಯದಲ್ಲಿ ಆರ್‌ಸಿಬಿ ತಂಡದ ಪರವಾಗಿ ಯುವ ಆಟಗಾರ ಅನುಜ್ ರಾವತ್ ನೀಡಿದ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ. ಮುಂಭೈ ಇಂಡಿಯನ್ಸ್ ವಿರುದ್ಧ 7 ವಿಕೆಟ್‌ಗಳ ಅಂತರದ ಸುಲಭ ಗೆಲುವು ಸಾಧಿಸಿದ ಬಳಿಕ ಮಾತನಾಡಿದ ನಾಯಕ ಫಾಫ್ ಡು ಪ್ಲೆಸಿಸ್ ಅನುಜ್ ರಾವತ್ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಈ ಯುವ ಆಟಗಾರ ಭವಿಷ್ಯದಲ್ಲಿ ಗುಣಮಟ್ಟದ ಆಟಗಾರ ಎನಿಸಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಪ್ರಶಂಸಿಸಿದ್ದಾರೆ. ಈ ಸಂದರ್ಭದಲ್ಲಿ ಬೌಲಿಂಗ್ ವಿಭಾಗದ ಪ್ರದರ್ಶನದ ಬಗ್ಗೆಯೂ ಫಾಫ್ ಹೊಗಳಿಕೆಯ ಮಾತುಗಳನ್ನು ಆಡಿದರು.
ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಾಳಿ ಮುಂಬೈ ಇಂಡಿಯನ್ಸ್ ತಂಡವನ್ನು 152 ರನ್‌ಗಳಿಗೆ ನಿಯಂತ್ರಿಸಲು ಯಶಸ್ವಿಯಾಯಿತು. ಇದನ್ನು ಬೆನ್ನಟ್ಟಿದ ಆರ್‌ಸಿಬಿ ಪರವಾಗಿ ಯುವ ಆಟಗಾರ ಅನುಜ್ ರಾವತ್ ಅಮೋಘ ಪ್ರದರ್ಶನ ನೀಡಿದರು. 47 ಎಸೆತಗಳನ್ನು ಎದುರಿಸಿದ ಅನುಜ್ ರಾವತ್ ಮ್ಯಾಚ್ ವಿನ್ನಿಂಗ್ 66 ರನ್‌ಗಳ ಕೊಡುಗೆ ನೀಡಿದ್ದಾರೆ. ಇನ್ನು ತಂಡದ ಮಾಜಿ ನಾಯಕ ವಿರಾಟ ಕೊಹ್ಲಿ ಕೂಡ 48 ರನ್‌ಗಳ ನಿರ್ಣಾಯಕ ಕೊಡುಗೆ ನೀಡಿದ್ದಾರೆ.
"ಈ ಚೇಸಿಂಗ್ ಅದ್ಭುತವಾಗಿತ್ತು. ನಾನು ಈ ಟೂರ್ನಮೆಂಟ್‌ನ ಆರಂಭಕ್ಕೂ ಮುನ್ನವೇ ಅನುಜ್ ಬಗ್ಗೆ ಮಾತನಾಡಿದ್ದೆ. ಆತನಲ್ಲಿ ಉತ್ತಮ ಆಟಗಾರನಾಗುವ ಸಾಮರ್ಥ್ಯವಿದೆ. ಆಟದ ವಿಚಾರವಾಗಿ ನಾವು ಸಾಕಷ್ಟು ಚರ್ಚೆಗಳನ್ನು ನಡೆಸುತ್ತೇವೆ. ಆತ ಅಂಗಳಕ್ಕಿಳಿದು ಅದ್ಭುತವಾದ ಹೋರಾಟವನ್ನು ಪ್ರದರ್ಶಿಸಿದ್ದಾರೆ. ಆತ ಭವಿಷ್ಯದಲ್ಲಿ ಅತ್ಯುತ್ತಮ ಆಟಗಾರನಾಗಲಿದ್ದಾರೆ" ಎಂದು ಫಾಫ್ ಡು ಪ್ಲೆಸಿಸ್ ಹೇಳಿಕೆ ನೀಡಿದ್ದಾರೆ.

ಈ ಪಂದ್ಯದ ಆರಂಭದಲಲ್ಇ ಆರ್‌ಸಿಬಿ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡಿತ್ತು. ಎದುರಾಳಿ ಮುಂಬೈ ಇಂಡಿಯನ್ಸ್ ತಂಡ 79 ರನ್‌ಗಳಿಗೆ 6 ವಿಕೆಟ್ ಕಳೆದುಕೊಳ್ಳುವಂತೆ ಮಾಡಿತ್ತು ಆರ್‌ಸಿಬಿ ಬೌಲಿಂಗ್ ವಿಭಾಗ. ಆದರೆ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ಪರವಾಗಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಪರಿಣಾಮವಾಗಿ ಮುಂಬೈ ಇಂಡಿಯನ್ಸ್ 150ರ ಗಡಿದಾಟಲು ಕಾರಣವಾಯಿತು. 37 ಎಸೆತ ಎದುರಿಸಿದ ಸೂರ್ಯಕುಮಾರ್ ಯಾದವ್ 68 ರನ್‌ಗಳಿಸಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಹಾಗೂ 6 ದೊಡ್ಡ ಸಿಕ್ಸರ್‌ಗಳನ್ನು ಒಳಗೊಂಡಿತ್ತು.
ಆರ್‌ಸಿಬಿ ಕಣಕ್ಕಿಳಿದ ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಡೇವಿಡ್ ವಿಲ್ಲಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್
ಬೆಂಚ್: ಶೆರ್ಫೇನ್ ರುದರ್ಫೋರ್ಡ್, ಕರ್ಣ್ ಶರ್ಮಾ, ಸಿದ್ದಾರ್ಥ್ ಕೌಲ್, ಚಾಮ ವಿ ಮಿಲಿಂದ್, ರಜತ್ ಪಾಟಿದಾರ್, ಮಹಿಪಾಲ್ ಲೊಮ್ರೋರ್, ಜೇಸನ್ ಬೆಹ್ರೆಂಡಾರ್ಫ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ರಮಣದೀಪ್ ಸಿಂಗ್, ಮುರುಗನ್ ಅಶ್ವಿನ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ, ಬಾಸಿಲ್ ಥಂಪಿ
ಬೆಂಚ್: ಫ್ಯಾಬಿಯನ್ ಅಲೆನ್, ಅನ್ಮೋಲ್ಪ್ರೀತ್ ಸಿಂಗ್, ರಿಲೆ ಮೆರೆಡಿತ್, ಮಯಾಂಕ್ ಮಾರ್ಕಂಡೆ, ಟಿಮ್ ಡೇವಿಡ್, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್, ಟೈಮಲ್ ಮಿಲ್ಸ್, ಡೇನಿಯಲ್ ಸಾಮ್ಸ್, ಸಂಜಯ್ ಯಾದವ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications