RCB vs CSK Preview : ಆರ್‌ಸಿಬಿಗೆ ಚೆನ್ನೈ ಸವಾಲು: ಪ್ರಿವ್ಯೂ, ಪಿಚ್ ರಿಪೋರ್ಟ್, ಹವಾಮಾನ ವರದಿ, ಸಂಭಾವ್ಯ ತಂಡ

ಐಪಿಎಲ್ 15ನೇ ಆವೃತ್ತಿಯಲ್ಲಿ ಬುಧವಾರ ಮತ್ತೊಂದು ಕುತೂಹಲಕಾರಿ ಪಂದ್ಯ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಎರಡನೇ ಬಾರಿಗೆ ಈ ಬಾರಿಯ ಆವೃತ್ತಿಯಲ್ಲಿ ಮುಖಾಮುಖಿಯಾಗಲಿದೆ. ಆರ್‌ಸಿಬಿ ಉತ್ತಮ ಪ್ರದರ್ಶನ ನೀಡಿದ ಬಳಿಕ ಹ್ಯಾಟ್ರಿಕ್ ಸೋಲು ಅನುಭವಿಸಿದ್ದು ಹಿನ್ನಡೆಗೆ ಕಾರಣವಾಗಿದೆ. ಹೀಗಾಗಿ ಸಿಎಸ್‌ಕೆ ವಿರುದ್ಧದ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಈ ಬಾರಿಯ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುದ್ದ ಸಂದರ್ಭದಲ್ಲಿ ಆರ್‌ಸಿಬಿ ಭಾರೀ ಅಂತರದ ಸೋಲು ಅನುಭವಿಸಿತ್ತು. ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿದ್ದ ಆರ್‌ಸಿಬಿ ತಂಡದ ಗೆಲುವಿನ ಓಟಕ್ಕೆ ತಡೆಯೊಡ್ಡಿತ್ತು ಸಿಎಸ್‌ಕೆ. ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 9ನೇ ಸ್ಥಾನದಲ್ಲಿದ್ದರೂ ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಮೂರನೇ ಗೆಲುವು ಸಂಪಾದಿಸಿದೆ. ರವೀಂದ್ರ ಜಡೇಜಾ ನಾಯಕತ್ವವನ್ನು ಎಂಎಸ್ ಧೋನಿಗೆ ಮರಳಿಸಿರುವುದು ತಂಡದಲ್ಲಿ ಹೊಸ ಚೈತನ್ಯ ಮೂಡಿಸಿದಂತೆ ಭಾಸವಾಗುತ್ತಿದೆ. ಹೀಗಾಗಿ ಆರ್‌ಸಿಬಿ ಮತ್ತೊಮ್ಮೆ ಸಿಎಸ್‌ಕೆ ಕಠಿಣ ಸವಾಲಾಗುವುದರಲ್ಲಿ ಅನುಮಾನವಿಲ್ಲ.

ಸ್ಕ್ವಾಡ್‌ಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ಚಾಮ ವಿ ಮಿಲಿಂದ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೋಶ್ ಹೇಜಲ್‌ವುಡ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮುಖೇಶ್ ಚೌಧರಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ಮೊಯಿನ್ ಅಲಿ, ಡ್ವೈನ್ ಪ್ರಿಟೋರಿಯಸ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ
ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಮೇ 4 ರಂದು ಬುಧವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್
ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ಈ ಹಿಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದೆ. ಮತ್ತೊಂದೆಡೆ ಆರ್‌ಸಿಬಿ ತಂಡ ಈ ಮೈದಾನದಲ್ಲಿ ಆಡಿದ ಅಂತಿಮ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಅನುಭವಿಸಿದೆ. ಅಂತಿಮ ಪಂದ್ಯವನ್ನು ಗಮನಿಸಿದಾಗ ಈ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚಿನ ನೆರವು ನೀಡುವುದು ಸ್ಪಷ್ಟವಾಗಿದೆ. ಆರಂಭದಲ್ಲಿ ಸ್ಪಿನ್ನರ್‌ಗಳು ಪಿಚ್‌ನ ಲಾಭವನ್ನು ಪಡೆಯಲು ಯಶಸ್ವಿಯಾಗಿದ್ದರು. ಆದರೆ ಈ ಹಂತದಲ್ಲಿ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡುತ್ತಿಲ್ಲ. ಟಾಸ್ ಗೆದ್ದ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

ಸಂಭಾವ್ಯ ಆಡುವ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಮಹಿಪಾಲ್ ಲೊಮ್ರೋರ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಡ್ವೈನ್ ಪ್ರಿಟೋರಿಯಸ್, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ, ಮಹೇಶ್ ತೀಕ್ಷಣ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications