Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆರ್‌ಸಿಬಿ vs ಸಿಎಸ್‌ಕೆ: ಚೆನ್ನೈ ಸೂಪರ್ ಕಿಂಗ್ಸ್‌ಗೆ 174 ರನ್‌ಗಳ ಗುರಿ ನೀಡಿದ ಆರ್‌ಸಿಬಿ

IPL 2022, RCB vs CSK: Royal Challengers Bangalore Sets Target Of 174 Runs To Chennai Super Kings

ಐಪಿಎಲ್‌ನಲ್ಲಿ ಇಂದು ನಡೆಯುತ್ತಿರುವ 49ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಕಾದಾಟದಲ್ಲಿ ಆರ್‌ಸಿಬಿ ಸವಾಲಿನ ಮೊತ್ತವನ್ನು ಪೇರಿಸುವಲ್ಲಿ ಯಶಸ್ವಿಯಾಗಿದೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಆರ್‌ಸಿಬಿ ತಂಡ 8 ವಿಕೆಟ್ ಕಳೆದುಕೊಂಡು 173ರನ್ ಗಳಿಸಿದೆ. ಆರ್‌ಸಿಬಿ ಪರವಾಗಿ ಮಹಿಪಾಳ್ ಲ್ಯಾಮ್ರೋರ್ 42 ರನ್‌ಗಳ ಕೊಡುಗೆ ನೀಡುವ ಮೂಲಕ ಮಿಂಚಿದರು.

ಇನ್ನು ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಈ ಪಂದ್ಯದಲ್ಲಿಯೂ ಆರ್‌ಸಿಬಿ ಪರವಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಂತಿಮ ಹಂತದಲ್ಲಿ ಡಿಕೆ 17 ಎಸೆತಗಳಲ್ಲಿ 26 ರನ್‌ಗಳಿಸಿ ತಂಡ ಸವಾಲಿನ ಮೊತ್ತ ಪೇರಿಸಲು ಕಾರಣವಾದರು. ರಜತ್ ಪಾಟೀದಾರ್ ಕೂಡ 21 ರನ್‌ಗಳ ಕೊಡುಗೆ ನೀಡಿದರು.

ಇನ್ನು ಈ ಪಂದ್ಯದಲ್ಲಿ ಆರಂಭಿಕ ಜೊಡಿಯಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ ಅವರಿಂದ ಉತ್ತಮ ಜೊತೆಯಾಟ ಬಂದಿದೆ. ಮೊದಲ ವಿಕೆಟ್‌ಗೆ ಈ ಜೋಡಿ 62 ರನ್‌ಗಳ ಕೊಡುಗೆ ನೀಡಿದ್ದಾರೆ. ಫಾಪ್ ಡು ಪ್ಲೆಸಿಸ್ 22 ಎಸೆತಗಳಲ್ಲಿ 38 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಕೊಹ್ಲಿ 33 ಎಸೆತಗಳಲ್ಲಿ 30 ರನ್‌ಗಳಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಅನುಜ್ ರಾವತ್, ಡೇವಿಡ್ ವಿಲ್ಲಿ, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಸುಯಶ್ ಪ್ರಭುದೇಸಾಯಿ, ಜೇಸನ್ ಬೆಹ್ರೆಂಡಾರ್ಫ್, ಚಾಮ ವಿ ಮಿಲಿಂದ್, ಫಿನ್ ಅಲೆನ್, ಶೆರ್ಫೇನ್ ರುದರ್ಫೋರ್ಡ್, ಆಕಾಶ್ ದೀಪ್, ಅನೀಶ್ವರ್ ಗೌತಮ್

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಎಂಎಸ್ ಧೋನಿ (ಸಿ & ವಿಕೆ), ರವೀಂದ್ರ ಜಡೇಜಾ, ಡ್ವೈನ್ ಪ್ರಿಟೋರಿಯಸ್, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ, ಮಹೇಶ್ ತೀಕ್ಷಣ
ಬೆಂಚ್: ಶಿವಂ ದುಬೆ, ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡಾನ್, ತುಷಾರ್ ದೇಶಪಾಂಡೆ, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮಥೀಶ ಪತಿರಾನ, ಭಗತ್ ವರ್ಮಾ, ರಾಜವರ್ಧನ್ ಹಂಗರ್ಗೇಕರ್, ಕೆಎಂ ಆಸಿಫ್, ಮಿಚೆಲ್ ಸ್ಯಾಂಟ್ನರ್

Story first published: Wednesday, May 4, 2022, 23:23 [IST]
Other articles published on May 4, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+