For Quick Alerts
ALLOW NOTIFICATIONS  
For Daily Alerts
 

RCB vs DC Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

IPL 2022: RCB vs DC Preview, Predicted Playing 11, Pitch Report, And Weather Forecast

ಐಪಿಎಲ್ 2022ರ ಆವೃತ್ತಿಯ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಶನಿವಾರ ನಡೆಯಲಿರುವ ಡಬಲ್ ಹೆಡ್ಡರ್ ಪಂದ್ಯಗಳಲ್ಲಿ ಎರಡನೇ ಪಂದ್ಯ ಇದಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಕಳೆದ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ಬಳಗ ರೋಚಕ ಸೆಣೆಸಾಟ ನಡೆಸಿ ಸೋಲು ಅನುಭವಿಸಿದ್ದು ಮತ್ತೆ ಗೆಲುವಿನ ಲಯಕ್ಕೆ ಮರಳಲು ಎದುರಿ ನೋಡುತ್ತಿದೆ ಆರ್‌ಸಿಬಿ.

ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಡೆ ಈ ಬಾರಿಯ ಆವೃತ್ತಿಯಲ್ಲಿ ಆರಂಭಿಕ ನಾಲ್ಕು ಪಂದ್ಯಗಳಲ್ಲಿ ಎರಡು ಗೆಲುವು ಹಾಗೂ ಎರಡು ಸೋಲು ಅನುಭವಿಸಿದೆ. ಗೆಲುವಿನ ಮೂಲಕ ಈ ಬಾರಿಯ ಟೂರ್ನಿ ಆರಂಭಿಸಿದ್ದರೂ ನಂತರ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿ ಆಘಾತ ಅನುಭವಿಸಿತ್ತು ಪಂತ್ ಪಡೆ. ಆದರೆ ಅಂತಿಮ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಇತ್ತ ಆರ್‌ಸಿಬಿ ಆಡಿರುವ ಐದು ಪಂದ್ಯಗಳಲ್ಲಿ ಮೂರು ಗೆಲುವು ಹಾಗೂ ಎರಡು ಸೋಲು ಅನುಭವಿಸಿದೆ.

IPL 2022: RCB vs DC Preview, Predicted Playing 11, Pitch Report, And Weather Forecast

ಸ್ಕ್ವಾಡ್‌ಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ಚಾಮ ವಿ ಮಿಲಿಂದ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೋಶ್ ಹೇಜಲ್‌ವುಡ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್

ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ: ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶ್ರೀಕರ್, ಭರತ್ ಸರ್ಫರಾಜ್ ಖಾನ್, ಲುಂಗಿ ಎನ್‌ಗಿಡಿ, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಒಸ್ತ್ವಾಲ್

RCB vs DC ಪಂದ್ಯದಲ್ಲಿ ಗೆಲುವು ಯಾರಿಗೆ | Oneindia Kannada

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 16 ರಂದು ಶನಿವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ:ವಾಂಖೆಡೆ ಕ್ರೀಡಾಂಗಣ ಯಾವಾಗಲೂ ಬ್ಯಾಟರ್‌ಗಳಿಗೆ ಹೆಚ್ಚು ನೆರವು ನಿಡುವ ಪಿಚ್ ಆಗಿದೆ. ಬೌನ್ಸ್ ಪಿಚ್‌ಅನ್ನು ಹೊಂದಿದ್ದು ಶಾರ್ಟ್ ಬೌಂಡರಿಗಳು ಬ್ಯಾಟರ್‌ಗಳಿಗೆ ಸಹಕಾರಿಯಾಗಲಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ತಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ.
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ರೋವ್ಮನ್ ಪೊವೆಲ್, ರಿಷಬ್ ಪಂತ್ (c & wk), ಸರ್ಫರಾಜ್ ಖಾನ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ಸಿ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆ), ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಆಕಾಶ್ ದೀಪ್

Story first published: Friday, April 15, 2022, 18:43 [IST]
Other articles published on Apr 15, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+