RCB vs GT: ಈ ಆವೃತ್ತಿಯಲ್ಲಿ ಆರ್‌ಸಿಬಿಗೆ ಅಂತಿಮ ಅವಕಾಶ!: ಪ್ರಿವ್ಯೂ, ಪಿಚ್ ರಿಪೋರ್ಟ್, ಸಂಭಾವ್ಯ ಪ್ಲೇಯಿಂಗ್ XI

ಐಪಿಎಲ್ 15ನೇ ಆವೃತ್ತಿಯಲ್ಲಿ ಕೆಲ ಅದ್ಭುತ ಪಂದ್ಯಗಳಲ್ಲಿ ಭರ್ಜರಿಯಾಗಿ ಗೆದ್ದು ಪ್ಲೇಆಫ್ ಹಂತಕ್ಕೇರುವ ನೆಚ್ಚಿನ ತಂಡಗಳಲ್ಲಿ ಒಂದಾಗಿದ್ದ ಆರ್‌ಸಿಬಿ ತಂಡದ ಸ್ಥಿತಿ ಈಗ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಲೀಗ್ ಹಂತದ ಅಂತಿಮ ಒಂದು ಪಂದ್ಯ ಮಾತ್ರವೇ ಆರ್‌ಸಿಬಿ ತಂಡಕ್ಕೆ ಬಾಕಿಯಿದ್ದು ಈ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದರೆ ಮಾತ್ರವೇ ಪ್ಲೇಆಫ್ ಹಂತಕ್ಕೇರುವ ಅವಕಾಶದಲ್ಲಿ ಮೇಲುಗೈ ಸಾಧಿಸಲಿದೆ. ಇಲ್ಲವಾದರೆ ಆರ್‌ಸಿಬಿ ಪ್ಲೇಆಫ್‌ನಿಂದಲೇ ಹೊರಬೀಳುವುದು ಖಚಿತ.
ಆರ್‌ಸಿಬಿ ತಂಡಕ್ಕೆ ಈ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟನ್ಸ್ ತಂಡ ಮುಖಾಮುಖಿಯಾಗಿದೆ. ಟೂರ್ನಿಯಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ಈಗಾಗಲೇ ಪ್ಲೇಆಫ್ ಹಂತಕ್ಕೆ ಪ್ರವೇಶ ಗಿಟ್ಟಿಸಿಕೊಂಡಿದೆ. ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿರುವ ಏಕೈಕ ತಂಡವಾಗಿದೆ ಗುಜರಾತ್ ಟೈಟನ್ಸ್. ಅಲ್ಲದೆ ಆರ್‌ಸಿಬಿ ತಂಡ ಮೊದಲ ಸುತ್ತಿನಲ್ಲಿ ಮುಖಾಮುಖಿಯಾದಾಗಲೂ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಸೋಲು ಅನುಭವಿಸಿತ್ತು. ಹೀಗಾಗಿ ಈ ಹಣಾಹಣಿ ಆರ್‌ಸಿಬಿ ಪಾಲಿಗೆ ಅಗ್ನಿ ಪರೀಕ್ಷೆಯಾಗಲಿದೆ ಎಂಬುದರಲ್ಲಿ ಅನುಮಾನವಿಲ್ಲ.
ಇನ್ನು ಈ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದರೂ ತಂಡದ ಪ್ಲೇಆಫ್ ಹಾದಿ ಖಚಿತವಾಗಲಾರದು. ಅದಕ್ಕಾಗಿ ಮತ್ತೊಂದು ಪಂದ್ಯದಲ್ಲಿ ಆರ್‌ಸಿಬಿ ತನ್ನ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಬೇಕಿದೆ. ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋಲು ಅನುಭವಿಸಿದರೆ ಮಾತ್ರವೇ ಈ ಅವಕಾಶ ದೊರೆಯಲಿದೆ. ಯಾಕೆಂದರೆ ಆರ್‌ಸಿಬಿ ನೆಟ್ ರನ್‌ರೇಟ್‌ನಲ್ಲಿ ಭಾರೀ ಹಿಂದಿರುವುದು ತಂಡಕ್ಕೆ ಹಿನ್ನಡೆಯಾಗಲಿದೆ.
ಇನ್ನು ಈ ಮಹತ್ವದ ಪಂದ್ಯದ ಕೆಲ ಪ್ರಮುಖ ಮಾಹಿತಿಗಳನ್ನು ನೋಡೋಣ.

ಸ್ಕ್ವಾಡ್‌ಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ಚಾಮ ವಿ ಮಿಲಿಂದ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೋಶ್ ಹೇಜಲ್‌ವುಡ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಮೇ 19 ರಂದು ಗುರುವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ. ಆರ್‌ಸಿಬಿ ತಂಡಕ್ಕೆ ಈ ಪಂದ್ಯ ಅತ್ಯಂತ ನಿರ್ಣಾಯಕವಾಗಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಸ್ವರ್ಗ ಎನಿಸಿಕೊಂಡಿದೆ. ಆರ್‌ಸಿಬಿ ಹಾಗೂ ಜಿಟಿ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಕಾರಣ ದೊಡ್ಡ ಮೊತ್ತವನ್ನು ಇಲ್ಲಿ ನಿರೀಕ್ಷಿಸಲಾಗುತ್ತಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಪರಿಣಾಮ ಬೀಳುವ ಕಾರಣ ಬ್ಯಾಟರ್‌ಗಳು ಇದರ ಲಾಭ ಪಡೆಯಲಿದ್ದಾರೆ.

ಸಂಭಾವ್ಯ ಆಡುವ ಬಳಗ
ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಲ್, ಮೊಹಮ್ಮದ್ ಶಮಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications