IPL 2022: ಗುಜರಾತ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಬ್ಯಾಟಿಂಗ್ ಆಯ್ಕೆ

ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ವಾತಾವರಣದಲ್ಲಿ ತುಂಬಾನೆ ಹ್ಯುಮಿಡಿಟಿ ಜೊತೆಗೆ ಉಷ್ಣಾಂಶ ಹೆಚ್ಚಿರುವ ಕಾರಣದಿಂದಾಗಿ ನಾಯಕ ಫಾಫ್ ಡುಪ್ಲೆಸಿಸ್ ಇದೇ ಮೊದಲ ಬಾರಿಗೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಕಳೆದ ರಾಜಸ್ತಾನ್ ರಾಯಲ್ಸ್ ವಿರುದ್ಧ ಆಡಿಸಿದ ಪ್ಲೇಯಿಂಗ್ 11 ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾಡಲಾಗಿದ್ದು, ಮಹಿಪಾಲ್ ಲೊಮ್ರಾರ್‌ಗೆ ಅವಕಾಶ ನೀಡಲಾಗಿದೆ.
ಗುಜರಾತ್ ಟೈಟನ್ಸ್ ತಂಡವು ಕಳೆದ ಎಸ್‌ಆರ್‌ಎಚ್ ವಿರುದ್ಧ ಆಡಿದ ತಂಡದಲ್ಲಿ ಎರಡು ಬದಲಾವಣೆ ಮಾಡಿದ್ದು, ಯಶ್ ದಯಾಳ್ , ಅಭಿನವ್ ಮನೋಹರ್ ಬದಲು ಪ್ರದೀಪ್ ಸಂಗ್ವಾನ್ ಮತ್ತು ಸಾಯಿ ಸುದರ್ಶನ್‌ಗೆ ಸ್ಥಾನ ನೀಡಲಾಗಿದೆ.
ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ತಂಡದ ಪ್ಲೇಯಿಂಗ್ ಇಲೆವೆನ್ ಅನ್ನು ಈ ಕೆಳಗೆ ಕಾಣಬಹುದು
ಆರ್‌ಸಿಬಿ ಪ್ಲೇಯಿಂಗ್ 11
ಫಾಫ್ ಡುಪ್ಲೆಸಿಸ್(ಸಿ), ರಜತ್ ಪಾಟೀದಾರ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಮಹಿಪಾಲ್ ಲೊಮ್ರಾರ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಜೋಶ್ ಹೇಜಲ್‌ವುಡ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
ಗುಜರಾತ್ ಟೈಟನ್ಸ್ ಪ್ಲೇಯಿಂಗ್ 11
ಶುಭಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಪ್ರದೀಪ್ ಸಾಂಗ್ವಾನ್, ಅಲ್ಜಾರಿ ಜೋಸೆಫ್, ಲ್ಯುಕಿ ಫರ್ಗುಸನ್, ಮೊಹಮ್ಮದ್ ಶಮಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications