For Quick Alerts
ALLOW NOTIFICATIONS  
For Daily Alerts
 

RCB vs KKR: ಈ ಮೈಲಿಗಲ್ಲುಗಳ ಮೇಲೆ ಕಣ್ಣಿಟ್ಟಿದ್ದಾರೆ ಕೊಹ್ಲಿ, ದಿನೇಶ್ ಕಾರ್ತಿಕ್

IPL 2022, RCB vs KKR: Players records and approaching milestones

ಇದೇ ಮಾರ್ಚ್ 26ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಎಲ್ಲಾ ತಂಡಗಳು ತಮ್ಮ ಚೊಚ್ಚಲ ಪಂದ್ಯವನ್ನು ಆಡಿ ಮುಗಿಸಿವೆ. ಹೀಗೆ ತಮ್ಮ ಪ್ರಥಮ ಪಂದ್ಯಗಳಲ್ಲಿ ರಾಜಸ್ತಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟನ್ಸ್ ಜಯ ಸಾಧಿಸಿದ್ದರೆ, ಲಕ್ನೋ ಸೂಪರ್ ಜಯಂಟ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೋಲನ್ನು ಕಂಡು ಟೂರ್ನಿಯಲ್ಲಿ ಕೆಟ್ಟ ಆರಂಭ ಪಡೆದುಕೊಂಡಿವೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಟೂರ್ನಿಯಲ್ಲಿ ತಮ್ಮ ದ್ವಿತೀಯ ಪಂದ್ಯದಲ್ಲಿ ಮಾರ್ಚ್ 30ರಂದು ಸೆಣಸಾಟ ನಡೆಸುತ್ತಿದ್ದು, ಟೂರ್ನಿಯಲ್ಲಿನ ತನ್ನ ಪ್ರಥಮ ಪಂದ್ಯದಲ್ಲಿ ದೊಡ್ಡ ಮೊತ್ತ ಪೇರಿಸಿದ ಹೊರತಾಗಿಯೂ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಕೋಲ್ಕತ್ತಾ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಯಶಸ್ಸಿನ ಹಾದಿಗೆ ತಲುಪುವ ನಿರೀಕ್ಷೆಯಲ್ಲಿದ್ದರೆ, ಅತ್ತ ಟೂರ್ನಿಯಲ್ಲಿನ ತನ್ನ ಪ್ರಥಮ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆಯಲಿರುವ ತನ್ನ ದ್ವಿತೀಯ ಪಂದ್ಯದಲ್ಲಿಯೂ ಗೆದ್ದು ತನ್ನ ಗೆಲುವಿನ ನಾಗಾಲೋಟವನ್ನು ಆರಂಭಿಸುವ ಯೋಚನೆಯಲ್ಲಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಇಂದು ( ಮಾರ್ಚ್ 30 ) ಮುಂಬೈನ ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದ ಮೂಲಕ ಎರಡೂ ತಂಡಗಳ ಕೆಲ ಆಟಗಾರರು ಈ ಕೆಳಕಂಡ ಮೈಲಿಗಲ್ಲುಗಳನ್ನು ಮುಟ್ಟುವ ಸಾಧ್ಯತೆಗಳಿವೆ.

• ಇದುವರೆಗೂ ಒಟ್ಟು 3985 ಐಪಿಎಲ್ ರನ್ ಕಲೆಹಾಕಿರುವ ಅಜಿಂಕ್ಯ ರಹಾನೆಗೆ 4000 ಐಪಿಎಲ್ ರನ್ ಮೈಲುಗಲ್ಲನ್ನು ಮುಟ್ಟಲು ಈ ಪಂದ್ಯದಲ್ಲಿ 15 ರನ್ ಬಾರಿಸಿಬೇಕಾದ ಅಗತ್ಯವಿದೆ.

dinesh karthik

• ಒಟ್ಟು 547 ಐಪಿಎಲ್ ಬೌಂಡರಿಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ 550 ಐಪಿಎಲ್ ಬೌಂಡರಿಗಳ ಮೈಲಿಗಲ್ಲನ್ನು ಮುಟ್ಟಲು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯದಲ್ಲಿ 3 ಬೌಂಡರಿಗಳನ್ನು ಬಾರಿಸಬೇಕಾದ ಅಗತ್ಯವಿದೆ. ಹೀಗೆ ವಿರಾಟ್ ಕೊಹ್ಲಿ ಈ ಮೈಲಿಗಲ್ಲನ್ನು ಮುಟ್ಟಿದರೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 550 ಬೌಂಡರಿ ಮೈಲಿಗಲ್ಲನ್ನು ದಾಟಿದ ಎರಡನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ. ಇದಕ್ಕೂ ಮೊದಲು ಈ ಮೈಲಿಗಲ್ಲನ್ನು ಶಿಖರ್ ಧವನ್ ದಾಟಿದ್ದು ದಾಖಲೆಯನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದಾರೆ.

• ಇದುವರೆಗೂ ಒಟ್ಟು 197 ಐಪಿಎಲ್ ಬೌಂಡರಿಗಳನ್ನು ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಶ್ರೇಯಸ್ ಅಯ್ಯರ್ ಬಾರಿಸಿದ್ದು, ಈ ಪಂದ್ಯದಲ್ಲಿ 3 ಬೌಂಡರಿಗಳನ್ನು ಬಾರಿಸಿದರೆ 200 ಐಪಿಎಲ್ ಬೌಂಡರಿಗಳ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

• ಒಟ್ಟಾರೆ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಇದುವರೆಗೂ ಒಟ್ಟು 196 ಸಿಕ್ಸರ್ ಬಾರಿಸಿರುವ ದಿನೇಶ್ ಕಾರ್ತಿಕ್ ಈ ಪಂದ್ಯದಲ್ಲಿ 4 ಸಿಕ್ಸರ್ ಬಾರಿಸಿದರೆ 200 ಟಿ ಟ್ವೆಂಟಿ ಸಿಕ್ಸರ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

• ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 26 ರನ್ ಬಾರಿಸಿದರೆ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ 800 ಐಪಿಎಲ್ ರನ್‌ಗಳನ್ನು ಬಾರಿಸಿದ ನಾಲ್ಕನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

Story first published: Wednesday, March 30, 2022, 10:48 [IST]
Other articles published on Mar 30, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+