Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2022: ಕೆಕೆಆರ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

RCB

ಮುಂಬೈನ ಡಾ. ಡಿ ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ದುಕೊಂಡಿದೆ. ಇಬ್ಬನಿ ಬೀಳುವ ಕಾರಣದಿಂದ ಚೇಸಿಂಗ್‌ಗೆ ಬಹುತೇಕ ತಂಡಗಳು ಆಯ್ಕೆ ಆರ್‌ಸಿಬಿ ಕೂಡ ಫೀಲ್ಡಿಂಗ್ ಆಯ್ದುಕೊಂಡಿದೆ.

ರಾಯಲ್‌ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಪ್ ಡುಪ್ಲೆಸಿಸ್ ಕಳೆದ ಪಂಜಾಬ್ ಕಿಂಗ್ಸ್ ವಿರುದ್ಧ ಆಡಿಸಿದ ಪ್ಲೇಯಿಂಗ್ 11 ತಂಡವನ್ನೇ ಮುಂದುವರಿಸಿದ್ದು, ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಕೆಕೆಆರ್ ತಂಡವು ಕಳೆದ ಸಿಎಸ್‌ಕೆ ವಿರುದ್ಧ ಆಡಿದ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಶಿವಂ ಮಾವಿ ಬದಲು ನ್ಯೂಜಿಲೆಂಡ್‌ನ ಅನುಭವಿ ಬೌಲರ್ ಟಿಮ್ ಸೌಥಿಯನ್ನು ಆಡುವ ಹನ್ನೊಂದರ ಬಳಗದಲ್ಲಿ ಸೇರಿಸಿದ್ದಾರೆ.

ಆರ್‌ಸಿಬಿ ಮತ್ತು ಕೆಕೆಆರ್ ತಂಡದ ಪ್ಲೇಯಿಂಗ್ ಇಲೆವೆನ್‌ ಅನ್ನು ಈ ಕೆಳಗೆ ಕಾಣಬಹುದು

ಆರ್‌ಸಿಬಿ ಪ್ಲೇಯಿಂಗ್ 11
ಫಾಫ್ ಡುಪ್ಲೆಸಿಸ್(ಸಿ), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಶೆರ್ಫೇನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್

ಕೆಕೆಆರ್ ಪ್ಲೇಯಿಂಗ್ 11
ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಆ್ಯಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ

Story first published: Wednesday, March 30, 2022, 19:08 [IST]
Other articles published on Mar 30, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+