ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs LSG: ಎಲಿಮಿನೇಟರ್ ಪಂದ್ಯದಲ್ಲಿ ಈ ಮೈಲಿಗಲ್ಲುಗಳ ಮೇಲೆ ಕೊಹ್ಲಿ, ರಾಹುಲ್, ಸಿರಾಜ್ ಕಣ್ಣು

IPL 2022, RCB vs RR eliminator: Players approaching stats, records and milestones deatils

ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಕ್ರಮವಾಗಿ ಮೂರನೇ ಮತ್ತು ನಾಲ್ಕನೇ ಸ್ಥಾನಗಳನ್ನು ಅಂಕಪಟ್ಟಿಯಲ್ಲಿ ಪಡೆದುಕೊಳ್ಳುವುದರ ಮೂಲಕ ಪ್ಲೇ ಆಫ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಂಡಿವೆ.

ಲಕ್ನೋ ವಿರುದ್ಧದ ಎಲಿಮಿನೇಟರ್ ಪಂದ್ಯಕ್ಕೆ ಆರ್‌ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆ ಸಾಧ್ಯತೆ; ನಂಬಿಕಸ್ಥ ಆಟಗಾರ ಔಟ್!ಲಕ್ನೋ ವಿರುದ್ಧದ ಎಲಿಮಿನೇಟರ್ ಪಂದ್ಯಕ್ಕೆ ಆರ್‌ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆ ಸಾಧ್ಯತೆ; ನಂಬಿಕಸ್ಥ ಆಟಗಾರ ಔಟ್!

ಈ ಎರಡೂ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಆಯ್ಕೆಯಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಟಕ್ಕೆ ಇಳಿದರೆ, ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದಲೇ ಹೊರಬೀಳಲಿದೆ.

2008-2022 ಐಪಿಎಲ್‌ವರೆಗೆ ಕೊನೆಯ ಸ್ಥಾನ ಪಡೆದುಕೊಂಡ ತಂಡಗಳ ಪಟ್ಟಿ: 4 ಬಾರಿ ಮುಗ್ಗರಿಸಿದ ತಂಡವಿದು!2008-2022 ಐಪಿಎಲ್‌ವರೆಗೆ ಕೊನೆಯ ಸ್ಥಾನ ಪಡೆದುಕೊಂಡ ತಂಡಗಳ ಪಟ್ಟಿ: 4 ಬಾರಿ ಮುಗ್ಗರಿಸಿದ ತಂಡವಿದು!

ಹೀಗಾಗಿ ಎರಡೂ ತಂಡಗಳಿಗೂ ಸಹ ಈ ಎಲಿಮಿನೇಟರ್ ಪಂದ್ಯ ಬಹುಮುಖ್ಯದ್ದಾಗಿದ್ದು, ಗೆಲುವಿನತ್ತ ಕಣ್ಣಿಟ್ಟಿವೆ. ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡೂ ತಂಡಗಳು ಕೂಡ ಸ್ಫೋಟಕ ಬ್ಯಾಟ್ಸ್‌ಮನ್‌ಗಳು ಹಾಗೂ ಉತ್ತಮ ಬೌಲರ್‌ಗಳನ್ನು ಹೊಂದಿದ್ದು, ಈ ಪೈಕಿ ಹಲವು ಆಟಗಾರರು ಇಂದಿನ ಪಂದ್ಯದಲ್ಲಿ ವಿವಿಧ ಮೈಲಿಗಲ್ಲನ್ನು ಮುಟ್ಟುವ ಸನಿಹದಲ್ಲಿದ್ದಾರೆ. ಹೀಗೆ ಇಂದಿನ ಪಂದ್ಯದಲ್ಲಿ ಯಾವ ಆಟಗಾರರು ಯಾವ ಮೈಲಿಗಲ್ಲುಗಳನ್ನು ಮುಟ್ಟಬಹುದು ಎಂಬುದರ ಕುರಿತಾದ ವಿವರ ಮುಂದೆ ಇದೆ ಓದಿ.

ಈ ಮೈಲಿಗಲ್ಲುಗಳ ಮೇಲೆ ವಿರಾಟ್ ಕೊಹ್ಲಿ ಕಣ್ಣು

ಈ ಮೈಲಿಗಲ್ಲುಗಳ ಮೇಲೆ ವಿರಾಟ್ ಕೊಹ್ಲಿ ಕಣ್ಣು

ಕಳೆದ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ವಿರಾಟ್ ಕೊಹ್ಲಿ ಕಮ್ ಬ್ಯಾಕ್ ಮಾಡಿ ಈ ಪಂದ್ಯದಲ್ಲಿಯೂ ಕೂಡ ಅಬ್ಬರಿಸುವ ಮುನ್ಸೂಚನೆಯನ್ನು ನೀಡಿದ್ದಾರೆ. ಕೊಹ್ಲಿ ಈ ಪಂದ್ಯದಲ್ಲಿ ಈ ಕೆಳಕಂಡ ಮೈಲಿಗಲ್ಲುಗಳನ್ನು ಮುಟ್ಟುವ ಸಾಧ್ಯತೆಗಳಿವೆ..

• ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ ಒಂದೇ ಒಂದು ಕ್ಯಾಚ್ ಹಿಡಿದರೂ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ 150 ಕ್ಯಾಚ್ ಹಿಡಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ. ಈ ಮೂಲಕ ಸುರೇಶ್ ರೈನಾ ಹಾಗೂ ರೋಹಿತ್ ಶರ್ಮಾ ನಂತರ ಟಿ ಟ್ವೆಂಟಿ ಮಾದರಿಯಲ್ಲಿ 150 ಕ್ಯಾಚ್ ಹಿಡಿದ ಮೂರನೇ ಭಾರತೀಯ ಫೀಲ್ಡರ್ ಎಂದು ವಿರಾಟ್ ಕೊಹ್ಲಿ ಮೈಲಿಗಲ್ಲನ್ನು ನಿರ್ಮಿಸಲಿದ್ದಾರೆ.

• ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ ಐವತ್ತಕ್ಕೂ ಹೆಚ್ಚು ರನ್ ಬಾರಿಸಿದರೆ ಐಪಿಎಲ್ ಇತಿಹಾಸದಲ್ಲಿ 50 ಬಾರಿ ಐವತ್ತಕ್ಕಿಂತ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಮೈಲಿಗಲ್ಲನ್ನು ಮುಟ್ಟಲಿದ್ದಾರೆ. ಹಾಗೂ ಐಪಿಎಲ್ ಫ್ರಾಂಚೈಸಿಯೊಂದರ ಪರ ಇಷ್ಟು ದೊಡ್ಡ ಮಟ್ಟದ ದಾಖಲೆ ಮಾಡಿದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ.

• ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ 6 ಬೌಂಡರಿಗಳನ್ನು ಬಾರಿಸಿದರೆ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ 950 ಬೌಂಡರಿ ದಾಖಲಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

ಈ ಮೈಲಿಗಲ್ಲುಗಳನ್ನು ಮುಟ್ಟುತ್ತಾರಾ ಕೆಎಲ್ ರಾಹುಲ್?

ಈ ಮೈಲಿಗಲ್ಲುಗಳನ್ನು ಮುಟ್ಟುತ್ತಾರಾ ಕೆಎಲ್ ರಾಹುಲ್?


ಕೆಎಲ್ ರಾಹುಲ್ ಆಡಲಿರುವ ಈ ಪಂದ್ಯದ ಇನ್ನಿಂಗ್ಸ್ ತನ್ನ ನೂರನೇ ಐಪಿಎಲ್ ಇನ್ನಿಂಗ್ಸ್ ಆಗಲಿದೆ. ಇಲ್ಲಿಯವರೆಗೂ 3810 ರನ್ ಕಲೆಹಾಕಿರುವ ಕೆಎಲ್ ರಾಹುಲ್ ಮೊದಲ 100 ಇನ್ನಿಂಗ್ಸ್‌ನಲ್ಲಿ ಇಷ್ಟು ರನ್ ಗಳಿಸಿರುವ ಏಕೈಕ ಆಟಗಾರ ಎನಿಸಿಕೊಳ್ಳಲಿದ್ದಾರೆ.

• ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ 550 ಬೌಂಡರಿಗಳನ್ನು ಬಾರಿಸಲು ಕೆಎಲ್ ರಾಹುಲ್ ಇಂದಿನ ಪಂದ್ಯದಲ್ಲಿ ಹತ್ತು ಬೌಂಡರಿಗಳನ್ನು ಬಾರಿಸಬೇಕಾದ ಅಗತ್ಯವಿದೆ.

ಇತರೆ ಆಟಗಾರರ ಮೈಲಿಗಲ್ಲುಗಳು

ಇತರೆ ಆಟಗಾರರ ಮೈಲಿಗಲ್ಲುಗಳು

• ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ 2 ವಿಕೆಟ್ ಕಬಳಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 50 ವಿಕೆಟ್ ಕಿತ್ತ ಮೈಲಿಗಲ್ಲನ್ನು ನೆಡಲಿದ್ದಾರೆ.

• ದುಷ್ಮಂತ ಚಮೀರ ಈ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದರೆ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ 100 ವಿಕೆಟ್ ಪಡೆದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

• ಹರ್ಷಲ್ ಪಟೇಲ್ ಇಂದಿನ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿದರೆ 100 ಐಪಿಎಲ್ ವಿಕೆಟ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

Story first published: Wednesday, May 25, 2022, 16:19 [IST]
Other articles published on May 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X