RCB vs LSG: ಎಲಿಮಿನೇಟರ್ ಪಂದ್ಯಕ್ಕೆ ಮಳೆ ಕಾಟ? ಇಲ್ಲಿದೆ ಹವಾಮಾನ ವರದಿ ಮತ್ತು ಸಂಭಾವ್ಯ ಆಡುವ ಬಳಗ

IPL 2022 ಇಂದಿನ playoff ಪಂದ್ಯಕ್ಕೆ ಮಳೆ ಕಾಟ | Oneindia Kannada

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಂಡ ತಂಡಗಳ ಪೈಕಿ ಗುಜರಾತ್ ಟೈಟನ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ಒಂದನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೆಣಸಾಟ ನಡೆಸಿದರೆ, ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಆರ್‌ಸಿಬಿಗೆ ಮತ್ತೆ ಬರ್ತಿದ್ದೇನೆ ಎಂದ ಎಬಿಡಿ: ಯಾವ ಪಾತ್ರ ಎಂಬುದರ ಕುರಿತು ಸುಳಿವು ಕೊಟ್ಟ ಮಿ.360!ಆರ್‌ಸಿಬಿಗೆ ಮತ್ತೆ ಬರ್ತಿದ್ದೇನೆ ಎಂದ ಎಬಿಡಿ: ಯಾವ ಪಾತ್ರ ಎಂಬುದರ ಕುರಿತು ಸುಳಿವು ಕೊಟ್ಟ ಮಿ.360!

ಹೌದು, ಇಂದು ( ಮೇ 25 ) ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಇತ್ತಂಡಗಳು ಸೆಣಸಾಡಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದ್ದರೆ, ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ.

IPL 2022: ಗಾಯಕ್ಕೊಳಗಾದ ಹರ್ಷಲ್ ಲಕ್ನೋ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆಡ್ತಾರಾ, ಇಲ್ವಾ?IPL 2022: ಗಾಯಕ್ಕೊಳಗಾದ ಹರ್ಷಲ್ ಲಕ್ನೋ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆಡ್ತಾರಾ, ಇಲ್ವಾ?

ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದಲ್ಲಿ ಲಕ್ನೋ ಸೂಪರ್ ಜೈಂಟ್ಸ್ 18 ಅಂಕಗಳನ್ನು ಪಡೆದುಕೊಂಡಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 16 ಅಂಕಗಳನ್ನು ಪಡೆದುಕೊಂಡಿತ್ತು. ಹೀಗಾಗಿ ಪಂದ್ಯ ಮಳೆಗೆ ಆಹುತಿಯಾದರೆ ಹೆಚ್ಚು ಅಂಕ ಪಡೆದುಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ಈ ಪಂದ್ಯದಲ್ಲಿ ವಿಜೇತ ತಂಡವಾಗಿ ಹೊರಹೊಮ್ಮಲಿದೆ. ಇನ್ನು ಇಂದು ನಡೆಯಲಿರುವ ಮಹತ್ವದ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳುವ ಕಾರಣ ಎರಡೂ ತಂಡಗಳು ಸಹ ಗೆಲ್ಲುವತ್ತ ಚಿತ್ತ ನೆಟ್ಟಿವೆ. ಹೀಗಾಗಿ ಬಲಿಷ್ಠ ಆಡುವ ಬಳಗದೊಂದಿಗೆ ಎರಡೂ ತಂಡಗಳು ಕಣಕ್ಕಿಳಿಯಲಿದ್ದು, ಪಂದ್ಯದಲ್ಲಿ ಕಣಕ್ಕಿಳಿಯುವ ಸಂಭಾವ್ಯ ಆಡುವ ಬಳಗ, ಪಿಚ್ ವರದಿ ಮತ್ತು ಹವಾಮಾನ ವರದಿಯ ಮಾಹಿತಿ ಈ ಕೆಳಕಂಡಂತಿದೆ ಓದಿ.

ಸಂಭಾವ್ಯ ಆಡುವ ಬಳಗಗಳು

ಸಂಭಾವ್ಯ ಆಡುವ ಬಳಗಗಳು

ರಾಯಲ್ ಚಾಲೆಂಜರ್ಸ್ ಸಂಭಾವ್ಯ ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್‌), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವನಿಂದು ಹಸರಂಗ ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಜೋಶ್ ಹ್ಯಾಜಲ್‌ವುಡ್.

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್‌), ಕೆಎಲ್ ರಾಹುಲ್ (ನಾಯಕ), ಎವಿನ್ ಲೂಯಿಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ಮೊಹ್ಸಿನ್ ಖಾನ್, ಅವೇಶ್ ಖಾನ್ ಮತ್ತು ರವಿ ಬಿಷ್ಣೋಯ್.

ಪಿಚ್ ವರದಿ

ಪಿಚ್ ವರದಿ

ಈಡನ್ ಗಾರ್ಡನ್ಸ್ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳ ಪಾಲಿಗೆ ಅಷ್ಟೇನೂ ಸಹಕಾರಿಯಾಗಿಲ್ಲ. ಚೆಂಡು ನಿಧಾನವಾಗಿ ಪಿಚ್ ಬೀಳುತ್ತಿರುವ ಕಾರಣ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಪರದಾಡುತ್ತಿದ್ದಾರೆ. ಹೀಗಾಗಿ ಬ್ಯಾಟ್ಸ್‌ಮನ್‌ಗಳು ಬೇಗನೆ ದೊಡ್ಡ ಹೊಡೆತಗಳನ್ನು ಬಾರಿಸುವ ಬದಲು ವಿಕೆಟ್ ಕಾಯ್ದುಕೊಂಡು ನೆಲಕಚ್ಚಿ ನಿಂತ ನಂತರ ರನ್ ಬಾರಿಸಬಹುದಾಗಿದೆ. ಇನ್ನು ಈ ಪಿಚ್ ಬ್ಯಾಟ್ಸ್‌ಮನ್‌ಗಳಿಗಿಂತ ಬೌಲರ್‌ಗಳಿಗೆ ಹೆಚ್ಚು ಸಹಕಾರಿಯಾಗಿದೆ.

ಹವಾಮಾನ ವರದಿ

ಹವಾಮಾನ ವರದಿ

ಕಳೆದ ಕೆಲ ದಿನಗಳಿಂದ ಕೋಲ್ಕತ್ತಾ ನಗರದಲ್ಲಿ ಧಾರಾಕಾರ ಮಳೆಯಾಗಿದ್ದು, ಇಲ್ಲಿನ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಒಂದನೇ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯಗಳು ಮಳೆಗೆ ಆಹುತಿಯಾಗಿವೆ ಎನ್ನಲಾಗುತ್ತಿತ್ತು. ಆದರೆ ಒಂದನೇ ಕ್ವಾಲಿಫೈಯರ್ ಪಂದ್ಯ ಯಾವುದೇ ಮಳೆ ಅಡ್ಡಿ ಇಲ್ಲದೇ ಯಶಸ್ವಿಯಾಗಿ ನಡೆದಿದ್ದು, ಇದೀಗ ಎಲ್ಲರ ಚಿತ್ತ ಈ ಎಲಿಮಿನೇಟರ್ ಪಂದ್ಯದತ್ತ ಇದೆ. ಇನ್ನು ಅಕ್ಕ್ಯುವೆದರ್ ವೆಬ್ ತಾಣ ತಿಳಿಸಿರುವ ಪ್ರಕಾರ ಕೋಲ್ಕತ್ತಾ ನಗರದಲ್ಲಿ ಮಧ್ಯಾಹ್ನದ ವೇಳೆ 34° ಸೆಲ್ಸಿಯಸ್ ಉಷ್ಣಾಂಶವಿರಲಿದ್ದು, ರಾತ್ರಿ ಸಮಯಕ್ಕೆ ಇದು 28° ಸೆಲ್ಸಿಯಸ್‌ಗೆ ಕುಸಿಯಲಿದೆ ಎಂದು ತಿಳಿಸಿದೆ. ಹಾಗೂ ಮಧ್ಯಾಹ್ನದ ವೇಳೆ ನಗರದಲ್ಲಿ ಗುಡುಗು ಸಹಿತ 65% ಮಳೆಯಾಗುವ ಸಾಧ್ಯತೆಗಳಿದ್ದು, ಸಂಜೆ ಮೇಲೆ ಮಳೆಯಾಗುವ ಸಾಧ್ಯತೆ ಕೇವಲ 4% ಇದೆ. ಹೀಗಾಗಿ ಒಂದನೇ ಕ್ವಾಲಿಫೈಯರ್ ಪಂದ್ಯದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಈ ಎಲಿಮಿನೇಟರ್ ಪಂದ್ಯ ಕೂಡ ಯಾವುದೇ ಮಳೆ ಅಡ್ಡಿ ಇಲ್ಲದೆ ನಡೆಯಲಿದೆ ಎನ್ನಬಹುದು.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, May 25, 2022, 9:31 [IST]
Other articles published on May 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X