LSG vs RCB: ಸಿಡಿದ ಫಾರ್ ಡು ಪ್ಲೆಸಿಸ್; ಲಕ್ನೋಗೆ 182 ರನ್‌ಗಳ ಗುರಿ ನೀಡಿದ ಆರ್‌ಸಿಬಿ

ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳುರು ನಡುವಿನ ಪಂದ್ಯ ಮುಂಬೈನ ಡಿವೈ ಪಾಟೀಲ್ ಕ್ರಿಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿರುವ ಆರ್‌ಸಿಬಿ ಪ್ರಮುಖ ಆಟಗಾರರ ವೈಫಲ್ಯದ ಹೊರತಾಗಿಯೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಇದರ ಪರಿಣಾಮವಾಗಿ ಆರ್‌ಸಿಬಿ ಲಕ್ನೋ ತಂಡಕ್ಕೆ 182 ರನ್‌ಗಳ ಸವಾಲಿನ ಗುರಿ ನಿಗದಿಪಡಿಸುವಲ್ಲಿ ಯಶಸ್ವಿಯಾಗಿದೆ.
ಈ ಪಂದ್ಯದಲ್ಲಿ ಆರ್‌ಸಿಬಿ ಪರವಾಗಿ ನಾಯಕ ಫಾಫ್ ಡು ಪ್ಲೆಸಿಸ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದು ಶತಕದ ಅಂಚಿನಲ್ಲಿ ಎಡವಿದ್ದಾರೆ. 64 ಎಸೆತಗಳನ್ನು ಎದುರಿಸಿದ ಫಾಫ್ ಡು ಪ್ಲೆಸಿಸ್ 96 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ಶಹ್ಬಾಜ್ ಅಹ್ಮದ್ 26 ರನ್‌ಗಳ ಕೊಡುಗೆ ನೀಡಿದರೆ ದಿನೇಶ್ ಕಾರ್ತಿಕ್ ಅಜೇಯ 13 ರನ್‌ಗಳನ್ನು ಗಳಿಸಿದರು. ಆದರೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗೋಲ್ಡನ್ ಡಕ್ ಆಗುವ ಮೂಲಕ ಶೂನ್ಯಕ್ಕೆ ವಿಕೆಟ್ ಕಳೆದುಕೊಮಡು ಮತ್ತೊಮ್ಮೆ ನಿರಾಸೆ ಅನುಭವಿಸಿದ್ದಾರೆ. ಆರಂಭಿಕ ಆಟಗಾರ ಅನುಜ್ ರಾವತ್ ಕೂಡ ವೈಫಲ್ಯ ಅನುಭವಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್(ನಾಯಕ ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಮನೀಶ್ ಪಾಂಡೆ, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications