For Quick Alerts
ALLOW NOTIFICATIONS  
For Daily Alerts
 

RCB vs LSG: ಫಾಫ್ ಪವರ್, ಜೋಶ್ ಸೂಪರ್: ಲಕ್ನೋ ವಿರುದ್ಧ ಆರ್‌ಸಿಬಿಗೆ ಭರ್ಜರಿ ಗೆಲುವು

IPL 2022: RCB vs LSG Highlights: Royal Challengers Bangalore beat LSG by 18 runs
RCB ಯ ಬೌಲಿಂಗ್ ಮತ್ತು ಬ್ಯಾಟಿಂಗ್ ದಾಳಿಗೆ ಲಕ್ನೋ ಧೂಳೀಪಟ | Oneindia Kannada

ಐಪಿಎಲ್‌ನ 15ನೇ ಆವೃತ್ತಿಯಲ್ಲಿ ಆರ್‌ಸಿಬಿಯ ಗೆಲುವಿನ ಓಟ ಮುಂದುವರಿದಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿಯಾಗಿ ಗೆದ್ದು ಬೀಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಆರ್‌ಸಿಬಿ ಅದ್ಭುತವಾಗಿ ಮೇಲುಗೈ ಸಾಧಿಸಿದ್ದು ಅಂಕಪಟ್ಟಿಯಲ್ಲಿಯೂ ಮೇಲಕ್ಕೇರುವಲ್ಲಿ ಯಶಸ್ವಿಯಾಗಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿರುವ ಆರ್‌ಸಿಬಿ ಪ್ರಮುಖ ಆಟಗಾರರ ವೈಫಲ್ಯದ ಹೊರತಾಗಿಯೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಇದರ ಪರಿಣಾಮವಾಗಿ ಆರ್‌ಸಿಬಿ ಲಕ್ನೋ ತಂಡಕ್ಕೆ 182 ರನ್‌ಗಳ ಗುರಿ ನಿಗದಿಪಡಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಈ ಸವಾಲಿನ ಗುರಿ ಬೆನ್ನಟ್ಟಲು ಹೋದ ರಾಹುಲ್ ಪಡೆ ನಿರಾಸೆ ಅನುಭವಿಸಿದೆ. ಬ್ಯಾಟಿಂಗ್‌ನಲ್ಲಿ ಆರ್‌ಸಿಬಿ ನಾಯಕ ಫಾರ್ ಡು ಪ್ಲೆಸಿಸ್ ಅಮೋಘ ಪ್ರದರ್ಶನ ನಿಡಿ ಮಿಂಚಿದರೆ ಬೌಲಿಂಗ್‌ನಲ್ಲಿ ಜೋಶ್ ಹೇಜಲ್‌ವುಡ್ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆಘಾತ ನೀಡಿದರು.

ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಫಾಪ್: ಈ ಪಂದ್ಯದಲ್ಲಿ ಆರ್‌ಸಿಬಿ ಪರವಾಗಿ ನಾಯಕ ಫಾಫ್ ಡು ಪ್ಲೆಸಿಸ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದು ಶತಕದ ಅಂಚಿನಲ್ಲಿ ಎಡವಿದ್ದಾರೆ. 64 ಎಸೆತಗಳನ್ನು ಎದುರಿಸಿದ ಫಾಫ್ ಡು ಪ್ಲೆಸಿಸ್ 96 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ಶಹ್ಬಾಜ್ ಅಹ್ಮದ್ 26 ರನ್‌ಗಳ ಕೊಡುಗೆ ನೀಡಿದರೆ ದಿನೇಶ್ ಕಾರ್ತಿಕ್ ಅಜೇಯ 13 ರನ್‌ಗಳನ್ನು ಗಳಿಸಿದರು. ಆದರೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗೋಲ್ಡನ್ ಡಕ್ ಆಗುವ ಮೂಲಕ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡು ಮತ್ತೊಮ್ಮೆ ನಿರಾಸೆ ಅನುಭವಿಸಿದ್ದಾರೆ. ಆರಂಭಿಕ ಆಟಗಾರ ಅನುಜ್ ರಾವತ್ ಕೂಡ ವೈಫಲ್ಯ ಅನುಭವಿಸಿದ್ದಾರೆ.

ಹಿನ್ನಡೆ ಅನುಭವಿಸಿದ ಲಕ್ನೋ: ಇನ್ನು ಆರ್‌ಸಿಬಿ ತಂಡ ನೀಡಿದ 182 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಲಕ್ನೋ ತಂಡ ಆರಂಭದಲ್ಲಿಯೇ ಹಿನ್ನಡೆ ಅನುಭವಿಸಿತು. ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಹಾಗೂ ಮನೀಶ್ ಪಾಂಡೆ ವಿಕೆಟ್‌ಅನ್ನು ಅಗ್ಗಕ್ಕೆ ಪಡೆಯುವಲ್ಲಿ ಆರ್‌ಸಿಬಿ ಯಶಸ್ವಿಯಾಯಿತು. ಬಳಿಕ ಟೂರ್ನಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಕೆಎಲ್ ರಾಹುಲ್ ಕೂಡ ವಿಕೆಟ್ ಒಪ್ಪಿಸಿ ಹೊರನಡೆದರು.

ಲಕ್ನೋ ಪರ ಮಿಂಚಿದ ಕೃನಾಲ್ ಪಾಂಡ್ಯ: ಇನ್ನು ಲಕ್ನೋ ಸೂಪರ್ ಜೈಂಟ್ಸ್ ಪರವಾಗಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೃನಾಲ್ ಪಾಂಡ್ಯ ಉತ್ತಮ ಪ್ರದರ್ಶನ ನೀಡಿದರು. 28 ಎಸೆತ ಎದುರಿಸಿದ ಪಾಂಡ್ಯ 42 ರನ್‌ಗಳಿಸಿದರು. ಉಳಿದಂತೆ ಲಕ್ನೀ ಆಟಗಾರರಿಂದ ಹೇಳಿಕೊಳ್ಳುವಂತಾ ಪ್ರದರ್ಶನ ಬಾರಲಿಲ್ಲ. ದೀಪಕ್ ಹೂಡಾ ಹಾಗೂ ಆಯುಷ್ ಬದೋನಿ ತಲಾ 13 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಸ್ಟೋಯ್ನಿಸ್ 24 ರನ್‌ಗಳಸಿದರು. ಜೇಸನ್ ಹೋಲ್ಡರ್ 16 ರನ್‌ಗಳಿಸಿ ಔಟಾದರರು. ಈ ಮೂಲಕ ಆರ್‌ಸಿಬಿ ಈ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ.

ಬೌಲಿಂಗ್‌ನಲ್ಲಿ ಹೇಜಲ್‌ವುಡ್ ಕಮಾಲ್: ಇನ್ನು ಆರ್‌ಸಿಬಿ ತಂಡದ ಪರವಾಗಿ ಬೌಲಿಂಗ್‌ನಲ್ಲಿ ಮಿಂಚಿದ್ದು ಜೋಶ್ ಹೇಜಲ್‌ವುಡ್. ನಾಲ್ಕು ಓವರ್‌ಗಳಲ್ಲಿ ಹೇಜಲ್‌ವುಡ್ ನಾಲ್ಕು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ವಿಂಟನ್ ಡಿಕಾಕ್, ಮನೀಶ್ ಪಾಂಡೆ, ಆಯುಷ್ ಬದೋನಿ ಹಾಗೂ ಮಾರ್ಕಸ್ ಸ್ಟೋಯ್ನಿಸ್ ವಿಕೆಟ್‌ಗಳು ಹೇಜಲ್ವುಡ್ ಪಾಲಾಯಿತು. ಉಳಿದಂತೆ ಹರ್ಷಲ್ ಪಟೇಲ್ 2 ವಿಕೆಟ್ ಪಡೆದರೆ ಮ್ಯಾಕ್ಸ್‌ವೆಲ್ ಹಾಗೂ ಸಿರಾಜ್ ತಲಾ ಒಂದು ವಿಕೆಟ್ ಸಂಪಾದಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್(ನಾಯಕ ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಮನೀಶ್ ಪಾಂಡೆ, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್

Story first published: Wednesday, April 20, 2022, 0:14 [IST]
Other articles published on Apr 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+