LSG vs RCB Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

ಐಪಿಎಲ್‌ನಲ್ಲಿ ಮಂಗಳವಾರ ಮತ್ತೊಂದು ಕುತೂಹಲಕಾರಿ ಪಂದ್ಯ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ ತಂಡಗಳ ಮಧ್ಯೆ ಈ ಕದನ ನಡೆಯಲಿದ್ದು ತೀವ್ರ ಪೈಪೋಟಿ ನಡೆಯುವುದರಲ್ಲಿ ಅನುಮಾನವಿಲ್ಲ. ಎರಡೂ ತಂಡಗಳು ಕೂಡ ಅದ್ಭುತ ಪ್ರದರ್ಶನ ನೀಡುತ್ತಿದ್ದು ಟೂರ್ನಿಯಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಈ ಬಾರಿಯ ಅಂಕಪಟ್ಟಿಯಲ್ಲಿ ಎರಡು ಹಾಗೂ ಮೂರನೇ ಸ್ಥಾನದಲ್ಲಿದೆ. ಎರಡೂ ತಂಡಗಳು ಕೂಡ ಆರು ಪಂದ್ಯಗಳನ್ನು ಆಡಿದ್ದು ನಾಲ್ಕು ಗೆಲುವು ಹಾಗೂ ಎರಡು ಸೋಲು ಅನುಭವಿಸಿದೆ. ಹೀಗಾಗಿ ನೆಟ್‌ರನ್‌ರೇಟ್‌ನಲ್ಲಿ ಎಲ್‌ಎಸ್‌ಜಿ ತಂಡ ಮುಂದಿದ್ದು ಎರಡನೇ ಸ್ಥಾನದಲ್ಲಿದೆ. ಎರಡು ತಂಡಗಳಿಗೂ ಕೂಡ ತಮ್ಮ ಸ್ಥಾನವನ್ನು ಉತ್ತಮಪಡಿಸಿಕೊಳ್ಳಲು ಆವಕಾಶವಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಕಳೆದ ಪಂದ್ಯದಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದು ಭರ್ಜರಿ ಶತಕ ಸಿಡಿಸಿದ್ದಾರೆ. ಇತ್ತ ಆರ್‌ಸಿಬಿ ತಂಡದ ಬೌಲಿಂಗ್ ವಿಭಾಗ ಕಳೆದ ಪಂದ್ಯದಲ್ಲಿ ಮಿಂಚಿದ್ದು ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ಯಾವ ರೀತಿಯ ಕದನ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ಸಂಪೂರ್ಣ ಸ್ಕ್ವಾಡ್‌ಗಳು
ಆರ್‌ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ಚಾಮ ವಿ ಮಿಲಿಂದ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೋಶ್ ಹೇಜಲ್‌ವುಡ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಎವಿನ್ ಲೂಯಿಸ್, ಆಂಡ್ರ್ಯೂ ಟೈ, ಮನೀಶ್ ಪಾಂಡೆ, ಶಹಬಾಜ್ ನದೀಮ್, ಮನನ್ ವೋಹ್ರಾ, ಕೈಲ್ ಮೇಯರ್ಸ್, ಅಂಕಿತ್ ರಾಜ್‌ಪೂತ್, ಮೊಹ್ಸಿನ್ ಖಾನ್, ಕರಣ್ ಶರ್ಮಾ, ಮಯಾಂಕ್ ಯಾದವ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ
ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 19 ರಂದು ಮಂಗಳವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಡಿವೈ ಪಾಟೀಲ್ ಕ್ರೀಡಾಂಗಣ ಈ ಬಾರಿಯ ಟೂರ್ನಿಯಲ್ಲಿ ಬ್ಯಾಟರ್‌ಗಳಿಗೆ ಸಾಕಷ್ಟು ನೆರವು ನೀಡುತ್ತಿರುವುದನ್ನು ಗಮನಿಸಿದ್ದೇವೆ. ಹೀಗಾಗಿ ಮತ್ತೊಂದು ಹೈಸ್ಕೋರ್ ಪಂದ್ಯ ನಡೆದರೆ ಅಚ್ಚರಿಯಿಲ್ಲ. ಪಿಚ್ ಹಸಿರಿನಿಂದ ಕೂಡಿದ್ದು ವೇಗಿಗಳಿಗೆ ನೆರವು ನೀಡುವ ಸಾಧ್ಯತೆ ಹೆಚ್ಚಿದೆ.

ಸಂಭಾವ್ಯ ಆಡುವ ಬಳಗ
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಆಯುಷ್ ಬಡೋನಿ, ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮದ್ ಸಿರಾಗ್, ಜೋಶ್ ಹ್ಯಾಜಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications