ಐಪಿಎಲ್ 2022, RCB vs PBKS: ಆರ್‌ಸಿಬಿ ತಂಡದ ಈ ನಾಲ್ಕು ಆಟಗಾರರ ಮೇಲಿದೆ ಅಭಿಮಾನಿಗಳ ಕಣ್ಣು!

ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತನ್ನ ಮೊದಲ ಪಂದ್ಯವನ್ನು ಭಾನುವಾರ ಆಡಲಿದೆ. ಟೂರ್ನಿಯ ಮೂರನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಸೆಣೆಸಾಟ ನಡೆಸುವ ಮೂಲಕ ಈ ಬಾರಿಯ ಟೂರ್ನಿಯ ಅಭಿಯಾನ ಆರಂಭಿಸಲಿದೆ. ಆರ್‌ಸಿಬಿ ತಂಡದ ನಾಯಕತ್ವವನ್ನು ಫಾಫ್ ಡು ಪ್ಲೆಸಿಸ್ ವಹಿಸಿಕೊಂಡಿದ್ದರೆ ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವವನ್ನು ಕನ್ನಡಿಗ ಮಯಾಂಕ್ ಅಗರ್ವಾಲ್ ವಹಿಸಿಕೊಂಡಿದ್ದಾರೆ.
ಆರ್‌ಸಿಬಿ ತಂಡ ಈ ಬಾರಿಯ ಟೂರ್ನಿಯಲ್ಲಿ ಮೊದಲ ಬಾರಿಗೆ ಕಣಕ್ಕಿಳಿಯುತ್ತಿರುವ ಕಾರಣ ಈ ಪಂದ್ಯದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಅಲ್ಲದೆ ಈ ಬಾರಿ ವಿರಾಟ್ ಕೊಹ್ಲಿ ಕೇವಲ ಆಟಗಾರನಾಗಿ ಮಾತ್ರವೇ ಕಣಕ್ಕಿಳಿಯುತ್ತಿದ್ದು ನಾಯಕತ್ವದ ಹೊರೆಯನ್ನು ಕಳಚಿಟ್ಟು ಆಡಲು ಸಜ್ಜಾಗಿದ್ದಾರೆ.
ಹಾಗಾದರೆ ಭಾನುವಾರ ನಡೆಯಲಿರುವ ಆರ್‌ಸಿಬಿಉ ಹಾಗೂ ಪಂಜಾಬ್ ಕಿಂಗ್ಸ್ ಪಂದ್ಯದಲ್ಲಿ ಆರ್‌ಸಿಬಿ ತಂಡದ ಯಾವೆಲ್ಲಾ ಆಟಗಾರರ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ? ಮುಂದೆ ಓದಿ

ವಿರಾಟ್ ಕೊಹ್ಲಿ
ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಸುದೀರ್ಘ ಕಾಲದ ಬಳಿಕ ತಂಡದ ನಾಯಕತ್ವದ ಜವಾಬ್ಧಾರಿಯಿಂದ ಹೊರಬಂದಿದ್ದಾರೆ. ನಾಯಕತ್ವದ ಒತ್ತಡದಿಂದ ಹೊರಬಂದಿರುವ ಕಾರಣ ಕೊಹ್ಲಿ ಬ್ಯಾಟಿಂಗ್ ಮೇಲೆ ಎಲ್ಲರ ನಿರೀಕ್ಷೆಯೂ ಹೆಚ್ಚಾಗಿದೆ. ಇತ್ತೀಚೆಗೆ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ದೊಡ್ಡ ಮೊತ್ತದ ರನ್‌ಗಳ ಬಾರದ ಕಾರಣ ಕೊಹ್ಲಿ ಐಪಿಎಲ್ ವೇದಿಕೆಯನ್ನು ಸಮರ್ಥವಾಗಿ ಬಳಸಿಕೊಳ್ಳಲು ಹಾತೊರೆಯುತ್ತಿದ್ದಾರೆ. ಇದೆಲ್ಲ ಕಾರಣಕ್ಕಾಗಿ ಆರ್‌ಸಿಬಿ ಅಭಿಮಾನಿಗಳು ಕೊಹ್ಲಿ ಬ್ಯಾಟಿಂಗ್ ಮೇಲೆ ದೊಡ್ಡ ನಿರೀಕ್ಷೆಯಿಟ್ಟುಕೊಂಡಿದ್ದಾರೆ.

ಫಾಫ್ ಡು ಪ್ಲೆಸಿಸ್
ಈ ಬಾರಿ ಆರ್‌ಸಿಬಿ ತಂಡದ ನಾಯಕತ್ವ ವಹಿಸಿಕೊಂಡಿರುವ ಫಾಫ್ ಡು ಪ್ಲೆಸಿಸ್ ಕಳೆದ ಆವೃತ್ತಿಯಲ್ಲಿ ಅಂಓಘ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆಟಗಾರನಾಗಿದ್ದ ಫಾಫ್ ಅವರನ್ನು ಈ ಭಾರಿಯೂ ಸಿಎಸ್‌ಕೆ ತನ್ನ ತೆಕ್ಕೆಗೆ ಹಾಕಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿತ್ತು. ಇದೀಗ ಆರ್‌ಸಿಬಿ ತಂಡದಲ್ಲಿಯೂ ತಮ್ಮ ಅದ್ಭುತ ಬ್ಯಾಟಿಂಗ್ ಫಾರ್ಮ್ ಅನ್ನು ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ. ಅಲ್ಲದೆ ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ನಾಯಕತ್ವ ಕೂಡ ವಹಿಸಿಕೊಂಡಿರುವುದು ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.

ಹರ್ಷಲ್ ಪಟೇಲ್
ಕಳೆದ ಭಾರಿಯ ಐಪಿಎಲ್ ಟೂರ್ನಿಯಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ್ದ ಹರ್ಷಲ್ ಪಟೇಲ್ ಟೂರ್ನಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ತನ್ನದಾಗಿಸಿಕೊಂಡಿದ್ದರು. ಈ ಬಾರಿಯ ಆವೃತ್ತಿಗೂ ಹರ್ಷಲ್ ಪಟೇಲ್ ಅವರನ್ನು ಆರ್‌ಸಿಬಿ ಮತ್ತೆ ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಈ ಬಾರಿಯ ಟೂರ್ನಿಯಲ್ಲಿ ಹರ್ಷಲ್ ಪಟೇಲ್ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದು ಬಹಳ ಮುಖ್ಯವಾಗಲಿದೆ. ಹರ್ಷಲ್ ಪಟೇಲ್‌ಗೆ ಮತ್ತೋರ್ವ ಭಾರತೀಯ ವೇಗಿ ಮೊಹಮ್ಮದ್ ಸಿರಾಜ್ ಕೂಡ ಸಾಥ್ ನೀಡಲಿದ್ದಾರೆ.


ವನಿಂದು ಹಸರಂಗ
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಫ್ರಾಂಚೈಸಿ ಶ್ರೀಲಂಕಾದ ಆಲ್‌ರೌಂಡರ್ ವನಿಂದು ಹಸರಂಗಾ ಅವರನ್ನು ಮತ್ತೊಮ್ಮೆ ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದೆ. ಯುಜುವೇಂದ್ರ ಚಾಹಲ್ ಬದಲಿಗೆ ತಂಡದ ಪ್ರಮುಖ ಸ್ಪಿನ್ನರ್ ಆಗಿ ಹಸರಂಗಾ ಜವಾಬ್ಧಾರಿ ವಹಿಸಿಕೊಳ್ಳಲಿದ್ದಾರೆ. ಹೀಗಾಗಿ ಹಸರಂಗಾ ಅವರು ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದು ಕೂಡ ಕುತೂಹಲಕಾರಿ ಅಂಶವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications