RCB vs PBKS: ಪಂಜಾಬ್ ಕಿಂಗ್ಸ್ ಎದುರು ಮಂಡಿಯೂರಿದ ಆರ್‌ಸಿಬಿ; ಪ್ಲೇಆಫ್ ಹಾದಿ ಕಠಿಣ

Virat Kohli ಔಟ್ ಆದ ಮೇಲೆ ಮಾಡಿದ್ದೇನು | Oneindia Kannada

ಪ್ರಸ್ತುತ ನಡೆಯುತ್ತಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಆರ್‌ಸಿಬಿ ವಿರುದ್ಧ ಪಂಜಾಬ್ ಕಿಂಗ್ಸ್ 54 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಆರ್‌ಸಿಬಿಯ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ 54 ರನ್‌ಗಳ ಜಯ ದಾಖಲಿಸಿ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದೆ. ಇನ್ನು ಈ ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರನೇ ಪರಾಭವ ಕಂಡಿದ್ದು, ನಾಲ್ಕನೇ ಸ್ಥಾನದಲ್ಲಿ ಮುಂದುವರೆದಿದೆ. ಮುಂದಿನ ಪಂದ್ಯವನ್ನು ಆರ್‌ಸಿಬಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಮೊದಲು ಬೌಲಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕಳಪೆ ಬೌಲಿಂಗ್ ಪ್ರದರ್ಶನದಿಂದ ಪಂಜಾಬ್ ಕಿಂಗ್ಸ್ ಬೃಹತ್ ಮೊತ್ತ ಗಳಿಸಿತು. ಅದರಂತೆ ಬೌಲಿಂಗ್‌ನಲ್ಲಿಯೂ ಮಯಾಂಕ್ ಅಗರ್ವಾಲ್ ಬಳಗ ಉತ್ತಮ ಪ್ರದರ್ಶನ ನೀಡಿ ಗೆಲುವು ದಾಖಲಿಸಿತು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿತು. ಆರ್‌ಸಿಬಿ ಗೆಲ್ಲಲು 210 ರನ್‌ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಫಾಪ್ ಡು ಪ್ಲೆಸಿಸ್ ಬಳಗ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್‌ ಮಾತ್ರ ಗಳಿಸಿ ಸೋಲೊಪ್ಪಿಕೊಂಡಿತು.

ಪಂಜಾಬ್ ಕಿಂಗ್ಸ್ ಬ್ಯಾಟಿಂಗ್
ಮೊದಲು ಬ್ಯಾಟಿಂಗ್ ಮಾಡಿರುವ ಪಂಜಾಬ್ ಕಿಂಗ್ಸ್ ಜಾನಿ ಬೇರ್‌ಸ್ಟೋವ್ (66) ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್ (70) ಅವರ ಅರ್ಧ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 210 ರನ್‌ಗಳ ಟಾರ್ಗೆಟ್ ನೀಡಿದೆ.

ಪಂಜಾಬ್ ಕಿಂಗ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಶಿಖರ್ ಧವನ್ ಮತ್ತು ಜಾನಿ ಬೇರ್‌ಸ್ಟೋವ್ ಅವರಿಂದ ಉತ್ತಮ ಆರಂಭ ಮಾಡಿದರು. ಮೊದಲ 5 ಓವರ್‌ಗಳಲ್ಲಿ 60 ರನ್ ಜೊತೆಯಾಟ ನೀಡಿದರು. ಜಾನಿ ಬೇರ್‌ಸ್ಟೋವ್ ಆರ್‌ಸಿಬಿ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ನಂತರ ಶಿಖರ್ ಧವನ್ 21 ರನ್ ಗಳಿಸಿ ಮ್ಯಾಕ್ಸ್‌ವೆಲ್ ಎಸೆತದಲ್ಲಿ ಬೌಲ್ಡ್ ಆದರು.

RCB vs PBKS: ಆರ್‌ಸಿಬಿ ಗೆಲ್ಲಲು ಬೃಹತ್ ಗುರಿ ನೀಡಿದ ಪಂಜಾಬ್ ಕಿಂಗ್ಸ್RCB vs PBKS: ಆರ್‌ಸಿಬಿ ಗೆಲ್ಲಲು ಬೃಹತ್ ಗುರಿ ನೀಡಿದ ಪಂಜಾಬ್ ಕಿಂಗ್ಸ್

ಮೂರನೇ ಕ್ರಮಾಂಕದಲ್ಲಿ ಬಂದ ಭಾನುಕಾ ರಾಜಪಕ್ಸ ಹೆಚ್ಚು ಹೊತ್ತು ನಿಲ್ಲದೆ 1 ರನ್ ಗಳಿಸಿ ಔಟಾದರು. ನಂತರ ಬಂದ ಮಯಾಂಕ್ ಅಗರ್ವಾಲ್ 19 ರನ್ ಗಳಿಸಿ ತಂಡದ ಹೆಚ್ಚಾಗಲು ಸಹಕರಿಸಿದರು. ಜಾನಿ ಬೇರ್‌ಸ್ಟೋವ್ 29 ಎಸೆತಗಳಲ್ಲಿ 66 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮಯಾಂಕ್ ಔಟಾದ ನಂತರ ಜಿತೇಶ್ ಶರ್ಮ 9 ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಹರ್ಪ್ರೀತ್ ಬ್ರಾರ್ ಹೆಚ್ಚು ಹೊತ್ತು ನಿಲ್ಲದೆ ಒಂದು ಸಿಕ್ಸರ್ ಬಾರಿಸಿ ಔಟಾದರು.

ಇನ್ನುಳಿದಂತೆ ಕೊನೆಯಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ ಆರ್‌ಸಿಬಿ ಬೌಲರ್‌ಗಳ ವಿರುದ್ಧ ಅಬ್ಬರಿಸಿದರು. ಕೊನೆಯ ಓವರ್‌ನಲ್ಲಿ 70 ರನ್ ಗಳಿಸಿ ಔಟಾದರೆ, ರಿಷಿ ಧವನ್ 7 ರನ್ ಗಳಿಸಿ ವಿಕೆಟ್ ನೀಡಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‌ಗಳಾದ ಹರ್ಷಲ್ ಪಟೇಲ್ 4 ಓವರ್ ಬೌಲಿಂಗ್ ಮಾಡಿ 34 ರನ್ ನೀಡಿ 4 ವಿಕೆಟ್ ಪಡೆದರು. ಅದೇ ರೀತಿ ವನಿಂದು ಹಸರಂಗಾ ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 15 ರನ್ ನೀಡಿ 2 ವಿಕೆಟ್ ಪಡೆದರು. ಇನ್ನುಳಿದಂತೆ ಗ್ಲೆನ್ ಮ್ಯಾಕ್ಸ್‌ವೆಲ್, ಶಬಾಜ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.

ಜೋಶ್ ಹೆಜಲ್‌ವುಡ್ 4 ಓವರ್‌ಗಳಲ್ಲಿ 64 ರನ್ ನೀಡಿ ಯಾವುದೇ ವಿಕೆ ಟ್ ಪಡೆಯದೇ ದುಬಾರಿಯಾದರು. ಇವರ ಜೊತೆಗೆ ಮೊಹಮ್ಮದ್ ಸಿರಾಜ್ 2 ಓವರ್‌ಗಳಲ್ಲಿ 36 ರನ್ ನೀಡಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟಿಂಗ್
ಪಂಜಾಬ್ ಕಿಂಗ್ಸ್ ನೀಡಿದ ಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಿದ ಆರ್‌ಸಿಬಿಯ ಆರಂಭಿಕರಾದ ಫಾಫ್ ಮತ್ತು ಕೊಹ್ಲಿ ಅವರಿಂದ ಉತ್ತಮ ಜೊತೆಯಾಟ ಬರಲಿಲ್ಲ. ಡುಪ್ಲೆಸಿಸ್ ಅವರು 10 ರನ್ ಗಳಿಸಿ ಔಟಾದರು. ಕೊಹ್ಲಿ ಅಬ್ಬರಿಸುವ ಮುನ್ಸೂಚನೆ ಕೊಟ್ಟರೂ ಅದೃಷ್ಟ ಮತ್ತೆ ಕೈಕೊಟ್ಟಿತು. 20 ರನ್ ಗಳಿಸಿ ರಬಾಡಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಲೊಮ್ರೋರ್ ಕೇವಲ 6 ರನ್ ಮಾತ್ರ ಗಳಿಸಿದರು.

ರಜತ್ ಪಾಟಿದಾರ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಜೊತೆಗೂಡಿ ಸ್ವಲ್ಪ ಪ್ರತಿರೋಧ ಒಡ್ಡಿದರು. 26 ರನ್ ಗಳಿಸಿ ಪಾಟಿದಾರ್ ವಿಕೆಟ್ ಚೆಲ್ಲಿದರು. ಗ್ಲೆನ್ ಮ್ಯಾಕ್ಸ್‌ವೆಲ್ 22 ಎಸೆತಗಳಲ್ಲಿ 35 ರನ್ ಬಾರಿಸಿ ಔಟಾದರೆ, ದಿನೇಶ್ ಕಾರ್ತಿಕ್ 11 ಎಸೆತಗಳಲ್ಲಿ 11 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಬಂದ ಬಾಲಂಗೋಚಿ ಬ್ಯಾಟ್ಸ್‌ಮನ್‌ಗಳು ತಂಡವನ್ನು ಗೆಲ್ಲಿಸಲಾಗಲಿಲ್ಲ.

ಪಂಜಾಬ್ ಕಿಂಗ್ಸ್ ಬೌಲಿಂಗ್
ಪಂಜಾಬ್ ಕಿಂಗ್ಸ್ ತಂಡದ ಪರ ಕಗಿಸೊ ರಬಾಡ 4 ಓವರ್‌ಗಳಲ್ಲಿ 21 ರನ್ ನೀಡಿ 3 ಪ್ರಮುಖ ವಿಕೆಟ್ ಕಬಳಿಸಿದರು. ರಿಷಿ ಧವನ್ 36 ರನ್ ನೀಡಿ 2 ವಿಕೆಟ್ ಹಾಗೂ ರಾಹುಲ್ ಚಹಾರ್ 37 ರನ್ ನೀಡಿ 2 ವಿಕೆಟ್ ಪಡೆದುಕೊಂಡರು. ಇನ್ನುಳಿದಂತೆ ಹರ್ಪ್ರೀತ್ ಬ್ರಾರ್ ಮತ್ತು ಅರ್ಶದೀಪ್ ಸಿಂಗ್ ತಲಾ 1 ವಿಕೆಟ್ ಪಡೆದರು.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, May 13, 2022, 23:32 [IST]
Other articles published on May 13, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X