RCB vs PBKS Playing 11: ಪ್ರಿವ್ಯೂ, ಪಿಚ್ ರಿಪೋರ್ಟ್, ಹವಾಮಾನ ವರದಿ, ಸಂಭಾವ್ಯ ಪ್ಲೇಯಿಂಗ್ XI

ಐಪಿಎಲ್ 15ನೇ ಆವೃತ್ತಿಯ ಪಂದ್ಯಗಳು ಅಂತಿಮ ಘಟ್ಟದತ್ತ ಸಾಗುತ್ತಿದೆ. ಹೀಗಾಗಿ ಪ್ರತಿ ಪಂದ್ಯಗಳು ಕೂಡ ತೀವ್ರ ಕುತೂಹಲ ಮೂಡಿಸುತ್ತಿದ್ದು ರೋಚಕತೆಯನ್ನು ಹೆಚ್ಚಿಸುತ್ತಿದೆ. ಈ ಟೂರ್ನಿಯಲ್ಲಿ ಆರ್‌ಸಿಬಿ ತನ್ನ 13ನೇ ಪಂದ್ಯವನ್ನು ಶುಕ್ರವಾರ ಆಡುತ್ತಿದ್ದು ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಆರ್‌ಸಿಬಿ ತಂಡಕ್ಕೆ ಎದುರಾಳಿಯಾಗಿ ಕಣಕ್ಕಿಳಿಯಲಿದೆ. ಇದು ಈ ಟೂರ್ನಿಯಲ್ಲಿ ಈ ಎರಡು ತಂಡಗಳ ಎರಡನೇ ಮುಖಾಮುಖಿಯಾಗಿದೆ. ಪರಸ್ಪರ ಎದುರಾಳಿಗಾಗಿ ಟೂರ್ನಿಯನ್ನು ಆರಂಭಿಸಿದ್ದ ಈ ಎರಡು ತಂಡಗಳು ಅಂತಿಮ ಹಂತದಲ್ಲಿ ಮತ್ತೆ ಮುಖಾಮುಖಿಯಾಗಿದೆ.
ಪ್ಲೇಆಫ್ ಹಂತಕ್ಕೇರುವ ದೃಷ್ಟಿಯಿಂದ ಈ ಪಂದ್ಯ ಎರಡೂ ತಂಡಗಳಿಗೂ ಬಹಳ ಮುಖ್ಯವಾಗಿದೆ. ಆದರೆ ಆರ್‌ಸಿಬಿ ಈ ಹಂತದಲ್ಲಿ ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್‌ಗಿಂತ ಮೇಲುಗೈ ಸಾಧಿಸಿರುವುದು ಸ್ಪಷ್ಟ. ಆಡಿರುವ 12 ಪಂದ್ಯಗಳಲ್ಲಿ 7 ಗೆಲುವು ಹಾಗೂ ಐದು ಸೋಲು ಅನುಭವಿಸಿರುವ ಆರ್‌ಸಿಬಿ 14 ಅಂಕಗಳನ್ನು ಖಾತೆಯಲ್ಲಿ ಹೊಂದಿದ್ದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇತ್ತ ಪಂಜಾಬ್ ಕಿಂಗ್ಸ್ ತಂಡ 11 ಪಂದ್ಯಗಳಲ್ಲಿ 5 ಗೆಲುವು ಹಾಗೂ 6 ಸೋಲು ಅನುಭವಿಸಿದ್ದು 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಹಾಗಿದ್ದರೂ ಪ್ಲೇಆಫ್ ಹಂತಕ್ಕೇರುವ ಸ್ಪರ್ಧೆಯಲ್ಲಿ ಇನ್ನೂ ಪಂಜಾಬ್ ಇರುವುದರಿಂದಾಗಿ ಕುತೂಹಲ ಮೂಡಿಸಿದೆ.
ಇನ್ನು ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಈ ಟೂರ್ನಿಯಲ್ಲಿ ತಮ್ಮ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದಾಗ ಎರಡೂ ತಂಡಗಳು ಕೂಡ ತೀವ್ರ ಪೈಪೋಟಿಯನ್ನು ನಡೆಸಿದ್ದವು. ಆರ್‌ಸಿಬಿ 206 ರನ್‌ಗಳ ಬೃಹತ್ ಗುರಿಯನ್ನು ನೀಡಿದ್ದರೂ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಗೆಲುವು ಸಾಧಿಸಿತ್ತು. ಹೀಗಾಗಿ ಈ ಸೋಲಿಗೆ ಆರ್‌ಸಿಬಿ ಸೇಡು ಹೇಗೆ ತೀರಿಸಿಕೊಳ್ಳಲಿದೆ ಎಂಬುದು ಅಭಿಮಾನಿಗಳ ಕುತೂಹಲ ಹೆಚ್ಚುವಂತೆ ಮಾಡಿದೆ.

ಸ್ಕ್ವಾಡ್‌ಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ಚಾಮ ವಿ ಮಿಲಿಂದ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೋಶ್ ಹೇಜಲ್‌ವುಡ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್
ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಒಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಭಾನುಕಾ ರಾಜಪಕ್ಸೆ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ಜಿತೇಶ್ ಶರ್ಮಾ, ಬೆನ್ನಿ ಹೋವೆಲ್, ನಾಥನ್ ಎಲ್ಲಿಸ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಮೇ 13 ರಂದು ಶುಕ್ರವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಈವರೆಗಿನ ಪಂದ್ಯಗಳನ್ನು ಗಮನಿಸಿದರೆ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಕ್ಕೆ ಸಮಾನ ನೆರವು ನೀಡಿರುವುದು ಗಮನಿಸಬಹುದು. ಆದರೆ ಮೊದಲು ಬೌಲಿಂಗ್ ನಡೆಸಿ ರನ್ ಬೆನ್ನಟ್ಟುವುದು ಇಲ್ಲಿ ಅತ್ಯುತ್ತಮ ನಿರ್ಧಾರವಾಗಬಹುದು. ಎರಡನೇ ಸರದಿಯಲ್ಲಿ ಬ್ಯಾಟಿಂಗ್ ನಡೆಸುವುದು ಸುಲಭವಾಗಲಿದೆ. 170ಕ್ಕಿಂತ ಹೆಚ್ಚಿನ ಮೊತ್ತವನ್ನು ಗಳಿಸಿದರೆ ಮೊದಲು ಬ್ಯಾಟಿಂಗ್ ನಡೆಸಿದ ತಂಡ ರಕ್ಷಣೆ ಮಾಡುವ ಅವಕಾಶವಿದೆ.

ಸಂಭಾವ್ಯ ಆಡುವ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಪಂಜಾಬ್ ಕಿಂಗ್ಸ್: ಜಾನಿ ಬೈರ್‌ಸ್ಟೋವ್, ಶಿಖರ್ ಧವನ್, ಮಯಾಂಕ್ ಅಗರ್ವಾಲ್ (ನಾಯಕ), ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ಸಂದೀಪ್ ಶರ್ಮಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications