RCB vs RR: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಬೇಕೆಂದರೆ ಈ ಮೂವರನ್ನು ತಂಡದಿಂದ ಹೊರಗಿಡಿ!

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಟೂರ್ನಿಯಲ್ಲಿ ಈಗಾಗಲೇ ತಲಾ 2 ಪಂದ್ಯಗಳನ್ನು ಆಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇಂದಿನ ( ಏಪ್ರಿಲ್ 5 ) ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.
ಈ ಪಂದ್ಯ ಈ ಬಾರಿಯ ಐಪಿಎಲ್ ಟೂರ್ನಿಯ 13ನೇ ಪಂದ್ಯವಾಗಿದ್ದು, ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 2 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೊದಲನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತು ದ್ವಿತೀಯ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಗೆದ್ದು ಬೀಗಿದೆ. ಅತ್ತ ರಾಜಸ್ತಾನ್ ರಾಯಲ್ಸ್ ಕೂಡ ಟೂರ್ನಿಯಲ್ಲಿ ಇಲ್ಲಿಯವರೆಗೆ ಒಟ್ಟು 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ತನ್ನ ಮೊದಲನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ದ್ವಿತೀಯ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ.
ಹೀಗೆ ಟೂರ್ನಿಯಲ್ಲಿ ಇಲ್ಲಿಯವರೆಗೆ ತಾನಾಡಿರುವ ಎರಡೂ ಪಂದ್ಯಗಳಲ್ಲಿಯೂ ಜಯ ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ಈ ಮುಖಾಮುಖಿಯಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಜಯಗಳಿಸಿ ತನ್ನ ಗೆಲುವಿನ ನಾಗಾಲೋಟ ಮುಂದುವರಿಸುತ್ತಾ ಅಥವಾ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಮೇಲೇರುತ್ತಾ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಚರ್ಚೆಗಳ ಜತೆಗೆ ಈ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಡ್ರೀಮ್ ಟೀಮ್ ರಚಿಸುತ್ತಿದ್ದು, ಈ ತಂಡಗಳಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರಿಗೆ ಸ್ಥಾನವನ್ನು ನೀಡುತ್ತಿದ್ದಾರೆ. ಹೀಗೆ ಕ್ರಿಕೆಟ್ ಪ್ರೇಮಿಗಳು ರಚಿಸುತ್ತಿರುವ ಡ್ರೀಮ್ ಟೀಮ್‌ನಲ್ಲಿ ಯಾವ ಆಟಗಾರರಿಗೆ ಸ್ಥಾನ ನೀಡಬೇಕು, ಯಾರಿಗೆ ನಾಯಕತ್ವ ಹಾಗೂ ಉಪ ನಾಯಕತ್ವ ನೀಡಬೇಕು ಮತ್ತು ಯಾವ ಆಟಗಾರರನ್ನು ಡ್ರೀಮ್ ಟೀಮ್‌ನಿಂದ ಹೊರಗಿಡಬೇಕು ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಈ ಮೂವರನ್ನು ತಂಡದಿಂದ ಹೊರಗಿಡಿ
• ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮೊದಲನೇ ಪಂದ್ಯದಲ್ಲಿ 20 ಎಸೆತಗಳಿಗೆ 21 ರನ್ ಕಲೆಹಾಕಿದ್ದ ಅನುಜ್ ರಾವತ್ ದ್ವಿತೀಯ ಪಂದ್ಯದಲ್ಲಿ ಶೂನ್ಯಕ್ಕೆ ಪೆವಿಲಿಯನ್ ಸೇರಿದ್ದರು. ಹೀಗೆ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಅನೂಜ್ ರಾವತ್ ರಾಜಸ್ತಾನ್ ರಾಯಲ್ಸ್ ಬಲಿಷ್ಠ ಬೌಲಿಂಗ್ ಮುಂದೆ ಅಬ್ಬರಿಸುವುದು ತುಸು ಕಷ್ಟವೆಂದೇ ಹೇಳಬಹುದು. ಹೀಗಾಗಿ ಅನುಜ್ ರಾವತ್ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ ನಿರ್ಧಾರ.
• ರಾಜಸ್ಥಾನ್ ರಾಯಲ್ಸ್ ತಂಡದ ಮೊದಲೆರಡು ಪಂದ್ಯಗಳಲ್ಲಿ ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಒಟ್ಟು 13 ಎಸೆತಗಳಲ್ಲಿ 17 ರನ್ ಬಾರಿಸಿರುವ ರಿಯಾನ್ ಪರಾಗ್ ಅವರನ್ನು ರಾಜಸ್ಥಾನ್ ರಾಯಲ್ಸ್ ಮೇಲಿನ ಕ್ರಮಾಂಕದಲ್ಲಿ ಕಣಕ್ಕಿಳಿಸುವುದು ಅನುಮಾನ. ಹೀಗಾಗಿ ರಿಯಾನ್ ಪರಾಗ್ ಅವರಿಂದ ತಂಡಕ್ಕೆ ಹೆಚ್ಚೇನು ಅಂಕಗಳು ಬರದ ಕಾರಣ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ.
• ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದು 3 ಓವರ್ ಮಾಡಿ 48 ರನ್ ನೀಡಿ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದೇ ಇದ್ದ ನಾಥನ್ ಕೌಲ್ಟರ್ ನೈಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ಮುಂಬೈ ಇಂಡಿಯನ್ಸ್ ವಿರುದ್ಧದ ತನ್ನ ದ್ವಿತೀಯ ಪಂದ್ಯದಲ್ಲಿ ತಂಡದಿಂದ ಕೈಬಿಟ್ಟಿತ್ತು. ಹಾಗೂ ನಾಥನ್ ಕೌಲ್ಟರ್ ನೈಲ್ ಬದಲಾಗಿ ನವದೀಪ್ ಸೈನಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೀರನ್ ಪೊಲಾರ್ಡ್ ಸೇರಿದಂತೆ 2 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ನಾಥನ್ ಕೌಲ್ಟರ್ ನೈಲ್ ಈ ಪಂದ್ಯದಲ್ಲಿ ಮತ್ತೆ ತಂಡ ಸೇರುವುದು ಅನುಮಾನವಾಗಿದ್ದು, ಇವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರ ಹಾಕುವುದು ಉತ್ತಮ.

ನಾಯಕ ಮತ್ತು ಉಪನಾಯಕನ ಸ್ಥಾನ ಇವರಿಗೆ ನೀಡಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯಕ್ಕೆ ನೀವು ರಚಿಸಿರುವ ಡ್ರೀಮ್ ಟೀಮ್‌ನಲ್ಲಿ ಜೋಸ್ ಬಟ್ಲರ್ ಅಥವಾ ವನಿಂದು ಹಸರಂಗ ಅವರಿಗೆ ನಾಯಕತ್ವವನ್ನು ನೀಡುವುದು ಉತ್ತಮ ಆಯ್ಕೆ ಹಾಗೂ ಉಪನಾಯಕ ಸ್ಥಾನವನ್ನು ಫಾಫ್ ಡು ಪ್ಲೆಸಿಸ್ ಅಥವಾ ಸಂಜು ಸ್ಯಾಮ್ಸನ್ ಅವರಿಗೆ ನೀಡುವುದು ಉತ್ತಮ.

ನಿಮ್ಮ ಡ್ರೀಮ್ ಟೀಮ್ ಇಲೆವೆನ್ ಹೀಗಿರಲಿ
ಇಂದಿನ ಪಂದ್ಯಕ್ಕಾಗಿ ನೀವು ರಚಿಸಲಿರುವ ಡ್ರೀಮ್ ತಂಡ ಹೀಗಿದ್ದರೆ ಉತ್ತಮ
ತಂಡ 1: ಕೀಪರ್ - ಜೋಸ್ ಬಟ್ಲರ್ (ನಾಯಕ), ಸಂಜು ಸ್ಯಾಮ್ಸನ್, ದಿನೇಶ್ ಕಾರ್ತಿಕ್
ಬ್ಯಾಟ್ಸ್‌ಮನ್‌ಗಳು - ಫಾಫ್ ಡು ಪ್ಲೆಸಿಸ್ (ಉಪನಾಯಕ), ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್
ಆಲ್‌ರೌಂಡರ್‌ಗಳು - ವನಿಂದು ಹಸರಂಗ, ಶಹಬಾಜ್ ಅಹಮದ್ ಬೌಲರ್‌ಗಳು - ಯುಜುವೇಂದ್ರ ಚಹಾಲ್, ಹರ್ಷಲ್ ಪಟೇಲ್, ಟ್ರೆಂಟ್ ಬೌಲ್ಟ್
ತಂಡ 2: ಕೀಪರ್ಸ್: ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ಉಪನಾಯಕ)
ಬ್ಯಾಟ್ಸ್‌ಮನ್‌ಗಳು - ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್
ಆಲ್ ರೌಂಡರ್ಸ್ - ವನಿಂದು ಹಸರಂಗಾ (ನಾಯಕ),
ಬೌಲರ್‌ಗಳು - ಯುಜುವೇಂದ್ರ ಚಹಾಲ್, ಹರ್ಷಲ್ ಪಟೇಲ್, ಪ್ರಸಿದ್ಧ್ ಕೃಷ್ಣ, ನವದೀಪ್ ಸೈನಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications