RCB vs RR Qualifier 2: ಈ ಮೈಲಿಗಲ್ಲುಗಳ ಮೇಲೆ ಕಣ್ಣಿಟ್ಟಿದ್ದಾರೆ ಪಾಟಿದಾರ್, ಕೊಹ್ಲಿ, ಬಟ್ಲರ್

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಮುಂಬರುವ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದ ಮೂಲಕ ತೆರೆ ಬೀಳಲಿದ್ದು, ಈಗಾಗಲೇ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ. ಒಂದನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದ ಗುಜರಾತ್ ಟೈಟನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದ್ದರೆ, ಸೋತ ರಾಜಸ್ತಾನ್ ರಾಯಲ್ಸ್ ಎರಡನೇ ಕ್ವಾಲಿಫೈಯರ್ ಪಂದ್ಯವನ್ನು ಆಡಬೇಕಿದೆ.
ಇನ್ನು ಬುಧವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಎಲಿಮಿನೇಟರ್ ಪಂದ್ಯದಲ್ಲಿ 14 ರನ್‌ಗಳ ಅಂತರದಲ್ಲಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಲಗ್ಗೆ ಇಟ್ಟಿದ್ದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಈ ಎರಡನೇ ಕ್ವಾಲಿಫೈಯರ್ ಪಂದ್ಯ ಶುಕ್ರವಾರ ( ಮೇ 27 ) ನಡೆಯಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ ತಲುಪಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದ್ದರೆ, ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ.
ಹೀಗಾಗಿ ಎರಡೂ ತಂಡಗಳಿಗೂ ಈ ಪಂದ್ಯ ಬಹುಮುಖ್ಯದ್ದಾಗಿದ್ದು, ಗೆಲ್ಲುವತ್ತ ಚಿತ್ತ ನೆಟ್ಟಿವೆ. ಈಗಾಗಲೇ ಇತ್ತಂಡಗಳು ಟೂರ್ನಿಯ ಲೀಗ್ ಹಂತದಲ್ಲಿ 2 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಪ್ರಥಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 4 ವಿಕೆಟ್‍ಗಳ ಜಯ ಸಾಧಿಸಿತ್ತು ಹಾಗೂ ದ್ವಿತೀಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 29 ರನ್‌ಗಳ ಗೆಲುವನ್ನು ಕಂಡಿತ್ತು. ಹೀಗೆ ಲೀಗ್ ಹಂತದಲ್ಲಿ ಸಮಬಲ ಸಾಧಿಸಿರುವ ಎರಡೂ ತಂಡಗಳು ಟೂರ್ನಿಯಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಇತ್ತಂಡಗಳ ಆಟಗಾರರು ಈ ಕೆಳಗಿನ ಮೈಲಿಗಲ್ಲುಗಳನ್ನು ಮುಟ್ಟುವ ಸಾಧ್ಯತೆಗಳಿವೆ.

ಈ ಮೈಲಿಗಲ್ಲುಗಳ ಮೇಲೆ ವಿರಾಟ್ ಕೊಹ್ಲಿ ಕಣ್ಣು
• ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಒಂದು ಕ್ಯಾಚ್ ಪಡೆದರೆ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ 150 ಕ್ಯಾಚ್ ಹಿಡಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ. ಈ ಮೂಲಕ ಸುರೇಶ್ ರೈನಾ ಮತ್ತು ರೋಹಿತ್ ಶರ್ಮಾ ನಂತರ ಈ ದಾಖಲೆ ಮಾಡಿದ ಮೂರನೇ ಭಾರತೀಯ ಆಟಗಾರ ಎಂಬ ಖ್ಯಾತಿಗೆ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ.
• ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 4 ಬೌಂಡರಿಗಳನ್ನು ಬಾರಿಸಿದರೆ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ 950 ಬೌಂಡರಿಗಳನ್ನು ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ

ಈ ಮೈಲಿಗಲ್ಲುಗಳ ಮೇಲೆ ಪಾಟಿದಾರ್, ಸಿರಾಜ್, ಹರ್ಷಲ್ ಪಟೇಲ್ ಮತ್ತು ಫಾಫ್ ಡು ಪ್ಲೆಸಿಸ್ ಕಣ್ಣು
• ಹರ್ಷಲ್ ಪಟೇಲ್ ಈ ಪಂದ್ಯದಲ್ಲಿ 3 ವಿಕೆಟ್ ಪಡೆದರೆ ವೇಗವಾಗಿ 100 ಐಪಿಎಲ್ ವಿಕೆಟ್ ಪಡೆದ ಎರಡನೆ ಬೌಲರ್ ಎಂಬ ದಾಖಲೆ ಬರೆಯಲಿದ್ದಾರೆ. ಲಸಿತ್ ಮಾಲಿಂಗ 70 ಪಂದ್ಯಗಳಲ್ಲಿ 100 ವಿಕೆಟ್ ಪಡೆದ ದಾಖಲೆ ಬರೆದಿದ್ದರೆ, ಹರ್ಷಲ್ ಪಟೇಲ್ ಈ ಪಂದ್ಯದಲ್ಲಿ ಈ ಮೈಲಿಗಲ್ಲನ್ನು ಮುಟ್ಟಿದರೆ 77 ಪಂದ್ಯಗಳಲ್ಲಿ 100 ವಿಕೆಟ್ ಪಡೆದಂತಾಗಲಿದೆ.
• ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 50 ವಿಕೆಟ್ ಪಡೆದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಈ ಪಂದ್ಯದಲ್ಲಿ ರಜತ್ ಪಾಟಿದಾರ್ 4 ಬೌಂಡರಿಗಳನ್ನು ಬಾರಿಸಿದರೆ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ 100 ಬೌಂಡರಿಗಳನ್ನು ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಈ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ 4 ಬೌಂಡರಿಗಳನ್ನು ಬಾರಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 50 ಬೌಂಡರಿಗಳನ್ನು ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

ಈ ಮೈಲಿಗಲ್ಲು ಮುಟ್ಟುತ್ತಾರಾ ಬಟ್ಲರ್, ಸಂಜು ಸ್ಯಾಮ್ಸನ್?
• ಈ ಪಂದ್ಯದಲ್ಲಿ ಜೋಸ್ ಬಟ್ಲರ್ 2 ಸಿಕ್ಸರ್ ಬಾರಿಸಿದರೆ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ 350 ಸಿಕ್ಸರ್ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ 11 ರನ್ ಕಲೆ ಹಾಕಿದರೆ 3500 ಐಪಿಎಲ್ ರನ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications