RCB VS RR: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ, ಓಪನರ್ ಆಗಿ ಕಣಕ್ಕಿಳಿಯಲಿರುವ ಕೊಹ್ಲಿ

ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2022ರ 39ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
ಕಳೆದ ಪಂದ್ಯದಲ್ಲಿ ಎಸ್‌ಆರ್‌ಎಚ್ ವಿರುದ್ಧ ಹೀನಾಯ ಮುಖಭಂಗ ಎದುರಿಸಿದ ಆರ್‌ಸಿಬಿ ಈ ಪಂದ್ಯದಲ್ಲಿ ಕೇವಲ ಒಂದು ಬದಲಾವಣೆ ಮಾಡಿದ್ದು, ಅನುಜ್ ರಾವತ್ ಬದಲು ರಜತ್ ಪಾಟಿದಾರ್ ಸ್ಥಾನ ಪಡೆದಿದ್ದು, ಓಪನಿಂಗ್ ಆಡಲಿದ್ದಾರೆ. ನಾಯಕ ಫಾಫ್ ಡುಪ್ಲೆಸಿಸ್ ಹೇಳಿದಂತೆ ಫಾರ್ಮ್ ವೈಫಲ್ಯ ಅನುಭವಿಸುತ್ತಿರುವ ವಿರಾಟ್ ಕೊಹ್ಲಿ ರಜತ್ ಜೊತೆಗೆ ಓಪನಿಂಗ್ ಬ್ಯಾಟಿಂಗ್‌ಗೆ ಕಣಕ್ಕಿಳಿಯಲಿದ್ದಾರೆ.
ರಾಜಸ್ತಾನ್ ರಾಯಲ್ಸ್ ತಂಡದಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಎರಡು ಬದಲಾವಣೆ ಆಗಿದ್ದು, ಕರುಣ್ ನಾಯರ್, ಕುಲ್‌ದೀಪ್ ಸೇನ್ ಬದಲು ಡರೆಲ್ ಮಿಚೆಲ್ ಮತ್ತು ಒಬೆ ಮೆಕಾಯ್‌ಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಲಾಗಿದೆ.
ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರು ಮತ್ತು ಐದನೇ ಸ್ಥಾನದಲ್ಲಿರುವ ರಾಜಸ್ತಾನ್ ಮತ್ತು ಆರ್‌ಸಿಬಿ ಪ್ಲೇ ಆಫ್ ತಲುಪಲು ಈ ಪಂದ್ಯದ ಫಲಿತಾಂಶ ಬಹುಮುಖ್ಯವಾಗಿದ್ದು ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗೆ ತಿಳಿಸಲಾಗಿದೆ.
ರಾಜಸ್ತಾನ್ ರಾಯಲ್ಸ್
ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್(ನಾಯಕ ಮತ್ತು ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಡೆರಿಲ್ ಮಿಚೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕುಲದೀಪ್ ಸೇನ್, ಪ್ರಸಿದ್ಧ್ ಕೃಷ್ಣ, ಯುಜವೇಂದ್ರ ಚಾಹಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ವನಿಂದು ಹಸರಂಗ, ಜೋಶ್ ಹೇಜಲ್‌ವುಡ್, ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications