For Quick Alerts
ALLOW NOTIFICATIONS  
For Daily Alerts
 

RCB vs SRH: ಹೈದರಾಬಾದ್ ದಾಳಿಗೆ ನಲುಗಿದ ಆರ್‌ಸಿಬಿ: 68 ರನ್‌ಗಳಿಗೆ ಆಲೌಟ್ ಆದ ಫಾಫ್ ಪಡೆ

IPL 2022, RCB vs SRH: Bangalore batting failure, SRH need 69 runs to win

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯದಲ್ಲಿ ಆರ್‌ಸಿಬಿ ತಂಡ ಅತ್ಯಂತ ಹೀನಾಯ ಪ್ರದರ್ಶನ ನೀಡಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ದಾಳಿಗೆ ಆರ್‌ಸಿಬಿ ಬ್ಯಾಟರ್‌ಗಳು ಸಂಪೂರ್ಣವಾಗಿ ತತ್ತರಿಸಿದ್ದು ಕೇವಲ 68 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಆಘಾತ ಅನುಭವಿಸಿದೆ. ಈ ಮೂಲಕ ಇಂದಿಗೆ ಸರಿಯಾಗಿ ಐದು ವರ್ಷಗಳ ಹಿಂದೆ ಆರ್‌ಸಿಬಿ ಅನುಭವಿಸಿದ್ದ ಆಘಾತವನ್ನು ಮತ್ತೊಮ್ಮೆ ನೆನಪಿಸಿದಂತಾಗಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಆರ್‌ಸಿಬಿ ತಂಡ ಎರಡನೇ ಓವನಲ್ಲಿಯೇ ದೊಡ್ಡ ಆಘಾತವನ್ನು ಅನುಭವಿಸಿತ್ತು. ಮಾರ್ಕೋ ಜಾನ್ಸನ್ ಎಸೆದ ಈ ಓವರ್‌ನಲ್ಲಿ ಆರ್‌ಸಿಬಿ ತನ್ನ ಅಗ್ರ ಕ್ರಮಾಂಕದ ಮೂವರು ದಾಂಡಿಗರನ್ನು ಕಳೆದುಕೊಂಡಿತು. ನಾಯಕ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಅನುಜ್ ರಾವತ್ ಈ ಓವರ್‌ನಲ್ಲಿ ಫೆವಿಲಿಯನ್‌ಗೆ ಸೇರಿಕೊಂಡರು. ನಂತರ ಬಂದ ಬ್ಯಾಟರ್‌ಗಳು ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾದರು. ಗ್ಲೆನ್ ಮ್ಯಾಕ್ಸ್‌ವಲ್ ಹಾಗೂ ಸುಯೇಶ್ ಪ್ರಭುದೇಸಾಯಿ ಮಾತ್ರವೇ ಈ ಪಂದ್ಯದಲ್ಲಿ ಎರಡಂಕಿ ದಾಟಿದರು, ಉಳಿದ ಎಲ್ಲಾ ಆಟಗಾರರು ಕೂಡ ಒಂದಂಕಿಗೆ ವಿಕೆಟ್ ಒಪ್ಪಿಸಿದ್ದಾರೆ. ಮೂವರು ಆಟಗಾರರು ಶೂನ್ಯ ಸಂಪಾದನೆ ಮಾಡಿದ್ದಾರೆ.

ಇಂದಿನ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗ ಸಂಪೂರ್ಣ ಶ್ರೇಯಸ್ಸು ತನ್ನದಾಗಿಸಿಕೊಂಡಿದೆ. ಮಾರ್ಕೋ ಜಾನ್ಸನ್ ಹಾಗೂ ಟಿ ನಟರಾಜನ್ ತಲಾ ಮೂರು ವಿಕೆಟ್ ಸಂಪಾದಿಸಿದರೆ ಸ್ಪಿನ್ನರ್ ಜಗದೀಶ ಸುಚಿತ್ 2 ವಿಕೆಟ್ ಹಾಗೂ ಭುವನೇಶ್ವರ್ ಕುಮಾರ್ ಹಾಗೂ ಉಮ್ರಾನ್ ಮಲಿಕ್ ತಲಾ ಒಂದು ವಿಕೆಟ್ ತನ್ನದಾಗಿಸಿಕೊಂಡಿದ್ದಾರೆ.

ಇಂದಿನ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗ ಸಂಪೂರ್ಣ ಶ್ರೇಯಸ್ಸು ತನ್ನದಾಗಿಸಿಕೊಂಡಿದೆ. ಮಾರ್ಕೋ ಜಾನ್ಸನ್ ಹಾಗೂ ಟಿ ನಟರಾಜನ್ ತಲಾ ಮೂರು ವಿಕೆಟ್ ಸಂಪಾದಿಸಿದರೆ ಸ್ಪಿನ್ನರ್ ಜಗದೀಶ ಸುಚಿತ್ 2 ವಿಕೆಟ್ ಹಾಗೂ ಭುವನೇಶ್ವರ್ ಕುಮಾರ್ ಹಾಗೂ ಉಮ್ರಾನ್ ಮಲಿಕ್ ತಲಾ ಒಂದು ವಿಕೆಟ್ ತನ್ನದಾಗಿಸಿಕೊಂಡರು.

ಈ ಮೊತ್ತವನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೇವಲ 8 ಓವರ್‌ಗಳಲ್ಲಿ ಈ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾಗಿದೆ. ಆರಂಭಿಕ ಆಟಗಾರ ಅಭಿಶೇಕ್ ಶರ್ಮಾ 28 ಎಸೆತಗಳಲ್ಲಿ 47 ರನ್‌ ಸಿಡಿಸಿ ವಿಕೆಟ್ ಕಳೆದುಕೊಂಡರೆ ನಾಯಕ ಕೇನ್ ವಿಲಿಯಮ್ಸನ್ 16 ರನ್ ಹಾಗೂ ರಾಹುಲ್ ತ್ರಿಪಾಠಿ 7 ರನ್‌ಗಳಿಸಿ ಅಜೇಯವಾಗುಳಿದರು.

ಇನ್ನು ಈ ಗೆಲುವಿನೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ. ನೆಟ್ ರನ್‌ರೇಟ್ ಕೂಡ ಹೆಚ್ಚಿಸಿಕೊಂಡಿರುವುದು ಹೈದರಾಬಾದ್ ತಂಡದ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿದೆ. ಇನ್ನು ಈ ಪಂದ್ಯದಲ್ಲಿ ಸೋಲು ಅನುಭವಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡ 4ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೆ ನೆಟ್‌ರನ್‌ರೇಟ್‌ನಲ್ಲಿ ಕೂಡ ಭಾರೀ ಹಿನ್ನಡೆ ಅನುಭವಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್

ಬೆಂಚ್: ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೇಸನ್ ಬೆಹ್ರೆಂಡಾರ್ಫ್, ಚಾಮ ವಿ ಮಿಲಿಂದ್, ರಜತ್ ಪಾಟಿದಾರ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫೇನ್ ರುದರ್ಫೋರ್ಡ್, ಆಕಾಶ್ ದೀಪ್, ಅನೀಶ್ವರ್ ಗೌತಮ್

RCB ಈ ದಿನ ಪಂದ್ಯ ಆಡ್ತಾರೆ ಅಂದ್ರೆ ಅಭಿಮಾನಿಗಳಿಗೆ ಚಿಂತೆ | Oneindia Kannada

ಸನ್‌ರೈರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್
ಬೆಂಚ್: ಸೀನ್ ಅಬಾಟ್, ರವಿಕುಮಾರ್ ಸಮರ್ಥ್, ವಾಷಿಂಗ್ಟನ್ ಸುಂದರ್, ಶ್ರೇಯಸ್ ಗೋಪಾಲ್, ಗ್ಲೆನ್ ಫಿಲಿಪ್ಸ್, ವಿಷ್ಣು ವಿನೋದ್, ಪ್ರಿಯಮ್ ಗಾರ್ಗ್, ಕಾರ್ತಿಕ್ ತ್ಯಾಗಿ, ರೊಮಾರಿಯೋ ಶೆಫರ್ಡ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ಸೌರಭ್ ದುಬೆ

Story first published: Saturday, April 23, 2022, 23:36 [IST]
Other articles published on Apr 23, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+