RCB vs SRH: ಈ ಮೈಲಿಗಲ್ಲುಗಳತ್ತ ವಿಲಿಯಮ್ಸನ್, ದಿನೇಶ್ ಕಾರ್ತಿಕ್ ಮತ್ತು ಮ್ಯಾಕ್ಸ್‌ವೆಲ್ ಚಿತ್ತ

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಟವನ್ನು ನಡೆಸಲಿವೆ. ಈ ಪಂದ್ಯ ಇಂದು ( ಏಪ್ರಿಲ್ 23 ) ಸಂಜೆ 7.30ಕ್ಕೆ ಮುಂಬೈನ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೇ ಮೊದಲ ಬಾರಿಗೆ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂದ್ಯವನ್ನು ಆಡುತ್ತಿದ್ದು ಹೊಸ ಅನುಭವವನ್ನು ಹೊಂದಲಿದೆ.
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿನ ತಮ್ಮ ತಮ್ಮ ಚೊಚ್ಚಲ ಪಂದ್ಯಗಳಲ್ಲಿ ಸೋಲುವುದರ ಮೂಲಕ ಕಳಪೆ ಆರಂಭವನ್ನು ಪಡೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಂತರದ ಪಂದ್ಯಗಳಲ್ಲಿ ಸಾಲುಸಾಲು ಗೆಲುವುಗಳನ್ನು ಕಂಡು ಯಶಸ್ಸಿನ ಹಾದಿಯಲ್ಲಿವೆ. ಅದರಲ್ಲಿಯೂ ಮೊದಲೆರಡು ಪಂದ್ಯಗಳಲ್ಲಿ ಸೋಲನ್ನು ಕಂಡು ಭಾರಿ ನಿರಾಸೆಯನ್ನು ಉಂಟುಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ನಂತರ ನಡೆದ 4 ಪಂದ್ಯಗಳಲ್ಲಿ ಸಾಲುಸಾಲಾಗಿ ಜಯವನ್ನು ಸಾಧಿಸಿದೆ.
ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 6 ಪಂದ್ಯಗಳಲ್ಲಿ ಕಣಕ್ಕಿಳಿದು 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಉಳಿದೆರಡು ಪಂದ್ಯಗಳಲ್ಲಿ ಸೋಲನ್ನು ಕಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಇತ್ತ ಈ ಬಾರಿ ನೂತನ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿ ಇಲ್ಲಿಯವರೆಗೂ 7 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 5 ಪಂದ್ಯಗಳಲ್ಲಿ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲಿ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ. ಹೀಗೆ ಯಶಸ್ಸಿನ ಹಾದಿಯಲ್ಲಿರುವ ಈ ಎರಡೂ ತಂಡಗಳ ಮುಖಾಮುಖಿ ಪಂದ್ಯದಲ್ಲಿ ಯಾವ ತಂಡ ಜಯ ಸಾಧಿಸಲಿದೆ ಎಂಬುದು ಕುತೂಹಲವನ್ನು ಮೂಡಿಸಿದ್ದು, ಈ ಪಂದ್ಯದಲ್ಲಿ ಇತ್ತಂಡಗಳ ಕೆಲ ಆಟಗಾರರು ದಾಖಲೆ ಮತ್ತು ಮೈಲಿಗಲ್ಲುಗಳನ್ನು ನಿರ್ಮಿಸುವ ಅಂಚಿನಲ್ಲಿದ್ದಾರೆ. ಹೀಗೆ ಈ ಪಂದ್ಯದಲ್ಲಿ ಆಟಗಾರರು ನಿರ್ಮಿಸಬಹುದಾದ ಮೈಲಿಗಲ್ಲುಗಳ ಕುರಿತಾದ ವಿವರ ಕೆಳಕಂಡಂತಿದೆ.

ಈ ಮೈಲಿಗಲ್ಲುಗಳತ್ತ ಆಟಗಾರರ ಚಿತ್ತ
* ಐಪಿಎಲ್ ಇತಿಹಾಸದಲ್ಲಿ 49 ಸಿಕ್ಸರ್ ಬಾರಿಸಿರುವ ನಿಕೋಲಸ್ ಪೂರನ್ ಈ ಪಂದ್ಯದಲ್ಲಿ 1 ಸಿಕ್ಸರ್ ಬಾರಿಸಿದರೆ 50 ಸಿಕ್ಸರ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ
* ಐಪಿಎಲ್ ಇತಿಹಾಸದಲ್ಲಿ 150 ವಿಕೆಟ್ ಕಬಳಿಸಿರುವ ಭುವನೇಶ್ವರ್ ಕುಮಾರ್ ಈ ಪಂದ್ಯದಲ್ಲಿ ಇನ್ನೊಂದು ವಿಕೆಟ್ ಪಡೆದರೆ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿ ಅತಿ ಹೆಚ್ಚು ಐಪಿಎಲ್ ವಿಕೆಟ್ ಪಡೆದ ಆರನೇ ಬೌಲರ್ ಎನಿಸಿಕೊಳ್ಳಲಿದ್ದಾರೆ.
* 199 ಐಪಿಎಲ್ ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ ಇನ್ನೊಂದು ಪಂದ್ಯದಲ್ಲಿ ಕಣಕ್ಕಿಳಿದರೆ 200 ಐಪಿಎಲ್ ಪಂದ್ಯಗಳನ್ನಾಡಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
* ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ 146 ಸಿಕ್ಸರ್ ಸಿಡಿಸಿರುವ ಕೇನ್ ವಿಲಿಯಮ್ಸನ್ ಈ ಪಂದ್ಯದಲ್ಲಿ 4 ಸಿಕ್ಸರ್ ಬಾರಿಸಿದರೆ 150 ಟಿ ಟ್ವೆಂಟಿ ಸಿಕ್ಸರ್ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
* ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ 7969 ರನ್ ಕಲೆಹಾಕಿರುವ ಗ್ಲೇನ್ ಮ್ಯಾಕ್ಸ್‌ವೆಲ್ ಈ ಪಂದ್ಯದಲ್ಲಿ 31 ರನ್ ಬಾರಿಸಿದರೆ 8000 ಟಿ ಟ್ವೆಂಟಿ ರನ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ ಬಳಗ
1 ಫಾಫ್ ಡು ಪ್ಲೆಸಿಸ್ (ನಾಯಕ), 2 ಅನುಜ್ ರಾವತ್, 3 ವಿರಾಟ್ ಕೊಹ್ಲಿ, 4 ಗ್ಲೆನ್ ಮ್ಯಾಕ್ಸ್‌ವೆಲ್, 5 ಸುಯಶ್ ಪ್ರಭುದೇಸಾಯಿ, 6 ಶಹಬಾಜ್ ಅಹ್ಮದ್, 7 ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), 8 ವನಿಂದು ಹಸರಂಗ, 9 ಹರ್ಷಲ್ ಪಟೇಲ್, 10, ಜೋಶ್ ಹಜಲ್‌ವುಡ್, ಸಿರಾಜ್.

ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ
1 ಕೇನ್ ವಿಲಿಯಮ್ಸನ್ (ನಾಯಕ), 2 ಅಭಿಷೇಕ್ ಶರ್ಮಾ, 3 ರಾಹುಲ್ ತ್ರಿಪಾಠಿ, 4 ಐಡೆನ್ ಮಾರ್ಕ್ರಾಮ್, 5 ನಿಕೋಲಸ್ ಪೂರನ್ (ವಿಕೆಟ್ ಕೀಪರ್), 6 ಶಶಾಂಕ್ ಸಿಂಗ್, 7 ಜೆ ಸುಚಿತ್ / ಶ್ರೇಯಸ್ ಗೋಪಾಲ್, 8 ಭುವನೇಶ್ವರ್ ಕುಮಾರ್, 9 ಮಾರ್ಕೊ ಜಾನ್ಸೆನ್, 10, ಟಿ ನಟರಾಜನ್, 11 ಉಮ್ರಾನ್ ಮಲಿಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications