
ಐಪಿಎಲ್‌ನಲ್ಲಿ ಭಾನುವಾರ ಎರಡು ಪಂದ್ಯಗಳು ಆಯೋಜನೆಯಾಗಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದ್ದು ಕುತೂಹಲ ಮೂಡಿಸಿದೆ. ಈ ಪಂದ್ಯ ಮುಂದಿನ ಹಂತಕ್ಕೇರುವ ದೃಷ್ಟಿಯಿಂದ ಎರಡು ತಂಡಗಳಿಗೂ ಬಹಳ ಮಹತ್ವದ್ದಾಗಿದ್ದು ಯಾರ ಕೈ ಮೇಲಾಗಲಿದೆ ಎಂಬ ಪ್ರಶ್ನೆಗೆ ಕೆಲವೇ ಗಂಟೆಗಳಲ್ಲಿ ಉತ್ತರ ದೊರೆಯಲಿದೆ.
ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಎರಡನೇ ಬಾರಿ ಈ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಇದಕ್ಕೂ ಹಿಂದಿನ ಸೆಣೆಸಾಟದಲ್ಲಿ ಆರ್‌ಸಿಬಿ ಹೀನಾಯವಾಗಿ ಸೋಲು ಅನುಭವಿಸಿತ್ತು. ಹೀಗಾಗಿ ಈ ಸೋಲಿನ ಸೇಡು ತೀರಿಸಿಕೊಳ್ಳಲು ಆರ್‌ಸಿಬಿ ಉತ್ತಮ ವೇದಿಕೆ ದೊರೆತಂತಾಗಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಸತತ ಗೆಲುವುಗಳ ನಂತರ ಮತ್ತೊಮ್ಮೆ ಸೋಲಿನ ಸುಳಿಗೆ ಸಿಲುಕಿದೆ. ಹ್ಯಾಟ್ರಿಕ್ ಸೋಲು ಅನುಭವಿಸಿರುವ ಹೈದರಾಬಾದ್ ತಂಡ ಗೆಲುವಿಗಾಗಿ ಸರ್ವ ಪ್ರಯತ್ನ ನಡೆಸಲಿದೆ.
ಸ್ಕ್ವಾಡ್‌ಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ಚಾಮ ವಿ ಮಿಲಿಂದ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೋಶ್ ಹೇಜಲ್‌ವುಡ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್
ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕರಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯೊ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮೇ 8 ರಂದು ಭಾನುವಾರ ನಡೆಯಲಿದ್ದು ಮಧ್ಯಾಹ್ನ 3:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ವಾಂಖೆಡೆ ಕ್ರೀಡಾಂಗಣ ಯಾವಾಗಲೂ ಬ್ಯಾಟರ್‌ಗಳಿಗೆ ನೆರವು ನೀಡುವ ಪಿಚ್ ಆಗಿದೆ. ಪಿಚ್ ಬೌನ್ಸ್ ಆಗುವ ಸಾಧ್ಯತೆಯಿದೆ. ಇನ್ನು ಕಡಿಮೆ ಅಂತರದಲ್ಲಿ ಬೌಂಡರಿ ಇರುವ ಕಾರಣದಿಂದಾಗಿ ಬ್ಯಾಟರ್‌ಗಳು ಇದರ ನೆರವು ಪಡೆಯಲಿದ್ದಾರೆ. ಇಬ್ಬನಿ ಹೆಚ್ಚಿನ ಪ್ರಭಾವ ಬೀಳುವ ಕಾರಣದಿಂದಾಗಿ ಟಾಸ್ ಗೆದ್ದ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೋಳ್ಳಲಿದೆ. ಎಂದಿನಂತೆ ಹೈಸ್ಕೋರಿಂಗ್ ಪಂದ್ಯವನ್ನು ಈ ಮೈದಾನದಲ್ಲಿ ನಿರೀಕ್ಷಿಸಬಹುದಾಗಿದೆ.
ಸಂಭಾವ್ಯ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಮಹಿಪಾಲ್ ಲೊಮ್ರೋರ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಸೀನ್ ಅಬಾಟ್, ಶ್ರೇಯಸ್ ಗೋಪಾಲ್, ಭುವನೇಶ್ವರ್ ಕುಮಾರ್, ಕಾರ್ತಿಕ್ ತ್ಯಾಗಿ, ಉಮ್ರಾನ್ ಮಲಿಕ್