ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RR vs DC: ಈ ತಂಡ ಗೆದ್ದರೆ ಆರ್‌ಸಿಬಿಗೆ ಇದೆ ಎರಡನೇ ಸ್ಥಾನ ಪಡೆದು ಪ್ಲೇಆಫ್ ಪ್ರವೇಶಿಸುವ ಅವಕಾಶ!

IPL 2022: RCB will have high chances of finish at top 2 if DC wins against RR

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 58ನೇ ಪಂದ್ಯ ಇಂದು ( ಮೇ 11 ) ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ನಡೆಯಲಿದೆ. ಸದ್ಯ ರಾಜಸ್ಥಾನ್ ರಾಯಲ್ಸ್ ಇಲ್ಲಿಯವರೆಗೂ 11 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ರಾಜೀನಾಮೆ ಘೋಷಿಸಿ ಮತ್ತೆ ತಂಡ ಸೇರಿದ ಐವರು ಕ್ರಿಕೆಟಿಗರು ಇವರೇ!ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ರಾಜೀನಾಮೆ ಘೋಷಿಸಿ ಮತ್ತೆ ತಂಡ ಸೇರಿದ ಐವರು ಕ್ರಿಕೆಟಿಗರು ಇವರೇ!

ರಾಜಸ್ಥಾನ್ ರಾಯಲ್ಸ್ ಯಾರ ಮೇಲೂ ಅವಲಂಬಿತವಾಗದೇ ಪ್ಲೇಆಫ್ ಪ್ರವೇಶಿಸಬೇಕೆಂದರೆ ಇನ್ನೆರಡು ಪಂದ್ಯಗಳಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ಉಳಿದ ಎಲ್ಲಾ ಮೂರೂ ಪಂದ್ಯಗಳಲ್ಲಿಯೂ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಹೊಂದಲಿದೆ. ಹೀಗಾಗಿ ಇತ್ತಂಡಗಳ ನಡುವೆ ಇಂದು ಮುಂಬೈನ ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎರಡೂ ತಂಡಗಳೂ ಸಹ ಗೆಲ್ಲುವತ್ತ ಚಿತ್ತ ನೆಟ್ಟಿವೆ.

ಬಾಲಿವುಡ್ ಸ್ಟಾರ್ ನಟ ಯಾರು ಎಂಬುದೇ ನನಗೆ ಗೊತ್ತಿಲ್ಲ ಎಂದ ಐಪಿಎಲ್ ಸ್ಟಾರ್ ಕ್ರಿಕೆಟಿಗ!ಬಾಲಿವುಡ್ ಸ್ಟಾರ್ ನಟ ಯಾರು ಎಂಬುದೇ ನನಗೆ ಗೊತ್ತಿಲ್ಲ ಎಂದ ಐಪಿಎಲ್ ಸ್ಟಾರ್ ಕ್ರಿಕೆಟಿಗ!

ಇನ್ನು ಇತ್ತಂಡಗಳ ನಡುವಿನ ಈ ಪಂದ್ಯದ ಫಲಿತಾಂಶ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸುವಲ್ಲಿ ದೊಡ್ಡ ಪರಿಣಾಮವನ್ನು ಬೀರಲಿದ್ದು, ಯಾರೇ ಗೆದ್ದರೂ ಫಾಫ್ ಡು ಪ್ಲೆಸಿಸ್ ಪಡೆಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಹೆಚ್ಚಾಗಲಿದೆ. ಆದರೆ ಇತ್ತಂಡಗಳಲ್ಲಿ ಈ ಒಂದು ತಂಡ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತ ಮುಗಿಯುವ ಹೊತ್ತಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಳ್ಳಲಿದೆ ಹಾಗೂ ಈ ಮೂಲಕ ಫೈನಲ್ ಪ್ರವೇಶಿಸಲು ಎರಡು ಅವಕಾಶಗಳನ್ನು ಆರ್‌ಸಿಬಿ ಹೊಂದಲಿದೆ. ಈ ಕುರಿತಾದ ಮತ್ತಷ್ಟು ವಿವರ ಈ ಕೆಳಕಂಡಂತಿದೆ..

ರಾಜಸ್ಥಾನ್ ರಾಯಲ್ಸ್ ಗೆದ್ದರೆ?

ರಾಜಸ್ಥಾನ್ ರಾಯಲ್ಸ್ ಗೆದ್ದರೆ?

ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆದ್ದರೆ ಪ್ಲೇಆಫ್ ರೇಸ್‌ನಿಂದ ಡೆಲ್ಲಿ ಕ್ಯಾಪಿಟಲ್ಸ್ ಹೊರಗುಳಿಯಲಿದ್ದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಅವಕಾಶಗಳು ಮತ್ತಷ್ಟು ಹೆಚ್ಚಾಗಲಿದೆ ಹಾಗೂ ರಾಜಸ್ಥಾನ್ ರಾಯಲ್ಸ್ ಎರಡನೇ ಸ್ಥಾನಕ್ಕೆ ಏರುವ ಸಾದ್ಯತೆಗಳಿರಲಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಗೆಲುವಿನಿಂದ ಆರ್‌ಸಿಬಿ ಎರಡನೇ ಸ್ಥಾನಕ್ಕೇರುವ ಸಾಧ್ಯತೆಗಳಿಗೆ ಕಲ್ಲು ಬೀಳಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ?

ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಂಡಿದ್ದು, ಇನ್ನುಳಿದ ಎರಡು ಪಂದ್ಯಗಳಲ್ಲಿ ಗೆದ್ದರೆ 18 ಅಂಕಗಳನ್ನು ಪಡೆದುಕೊಳ್ಳಲಿದ್ದು ಅಂಕಪಟ್ಟಿಯಲ್ಲಿ ಏರಿಕೆ ಕಾಣಲಿದೆ. ಇನ್ನು ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ರಾಜಸ್ಥಾನ್ ರಾಯಲ್ಸ್ ಕೂಡ ಆರ್‌ಸಿಬಿಯಷ್ಟೇ ಅಂಕಗಳನ್ನು ಪಡೆದುಕೊಳ್ಳಲಿದೆ. ಹೀಗಾಗಿ ಡೆಲ್ಲಿ ಗೆಲುವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಳ್ಳುವ ಅವಕಾಶ ಹೆಚ್ಚಿದೆ. ರಾಜಸ್ಥಾನ್ ಇಂದಿನ ಪಂದ್ಯದಲ್ಲಿ ಸೋತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಉಳಿದ ಎರಡು ಪಂದ್ಯಗಳಲ್ಲಿ ಬೃಹತ್ ಗೆಲುವನ್ನು ದಾಖಲಿಸಿ ನೆಟ್ ರನ್ ರೇಟ್‌ನ್ನು ರಾಜಸ್ಥಾನ್ ತಂಡಕ್ಕಿಂತ ಹೆಚ್ಚಿಸಿಕೊಂಡರೆ ಮಾತ್ರ ಎರಡನೇ ಸ್ಥಾನ ಪಡೆಯುವ ಅವಕಾಶವಿರಲಿದೆ.

ಲಕ್ನೋ ಸೂಪರ್ ಜೈಂಟ್ಸ್ ಉಳಿದ ಪಂದ್ಯಗಳೂ ಸಹ ಪರಿಣಾಮ ಬೀರಲಿದೆ

ಲಕ್ನೋ ಸೂಪರ್ ಜೈಂಟ್ಸ್ ಉಳಿದ ಪಂದ್ಯಗಳೂ ಸಹ ಪರಿಣಾಮ ಬೀರಲಿದೆ

ಈಗಾಗಲೇ 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತಿರುವ ಲಕ್ನೋ ಸೂಪರ್ ಜೈಂಟ್ಸ್ 16 ಅಂಕಗಳನ್ನು ಹೊಂದಿ ಅಂಕಪಟ್ಟಿಯಲ್ಲಿ ಸದ್ಯ ಎರಡನೇ ಸ್ಥಾನದಲ್ಲಿದ್ದು, ಇನ್ನು ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯಗಳ ಪೈಕಿ ರಾಜಸ್ಥಾನ್ ರಾಯಲ್ಸ್ ವಿರುದ್ಧವೂ ಲಕ್ನೋ ಸೆಣಸಾಡಲಿದ್ದು, ತನ್ನ ಮುಂದಿನ ಈ ಎರಡೂ ಪಂದ್ಯಗಳಲ್ಲಿ ಗೆದ್ದರೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಉಳಿಸಿಕೊಳ್ಳಲಿದೆ. ಅಥವಾ ಲಕ್ನೋ ಸೂಪರ್ ಜೈಂಟ್ಸ್ ಒಂದರಲ್ಲಿ ಗೆದ್ದು, ರಾಜಸ್ಥಾನ್ ರಾಯಲ್ಸ್ ಒಂದರಲ್ಲಿ ಗೆದ್ದರೆ, ಆರ್‌ಸಿಬಿಗೆ ಉಳಿದ ಎರಡೂ ಪಂದ್ಯಗಳನ್ನು ಒಳ್ಳೆಯ ರನ್ ರೇಟ್ ಬರುವ ಹಾಗೆ ಗೆದ್ದರೆ ಅಂಕಪಟ್ಟಿಯಲ್ಲ ಎರಡನೇ ಸ್ಥಾನ ಸಿಗುವುದಂತೂ ಪಕ್ಕಾ.

Story first published: Wednesday, May 11, 2022, 16:23 [IST]
Other articles published on May 11, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X