ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022 ರಿಟೆನ್ಷನ್: ಉಳಿದುಕೊಳ್ಳುವ ಆಟಗಾರರಿಗೆ ಕೋಟಿ ಕೋಟಿ, ನೇರಪ್ರಸಾರದ ದಿನಾಂಕ ಪ್ರಕಟ

IPL 2022 retention: Live streaming and retention price list details

ಈ ವರ್ಷ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೊರೋನಾವೈರಸ್ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡ ನಂತರ ಯುಎಇಗೆ ಸ್ಥಳಾಂತರಿಸಲ್ಪಟ್ಟಿತ್ತು. ಹೀಗೆ ಯುಎಇಗೆ ಸ್ಥಳಾಂತರಿಸಲ್ಪಟ್ಟ ನಂತರ ಯಶಸ್ವಿಯಾಗಿ ಮುಗಿದ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಫೈನಲ್ ಪಂದ್ಯದಲ್ಲಿ ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವುದರ ಮೂಲಕ ನಾಲ್ಕನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಕುಂಬ್ಳೆ ಮಾಡಿದ್ದೇ ಸರಿ; ಕೊಹ್ಲಿ - ರವಿಶಾಸ್ತ್ರಿ ಕೈಗೊಂಡಿದ್ದ ಆ ನಿರ್ಧಾರವನ್ನು ಕಿತ್ತೊಗೆದ ಕೋಚ್ ದ್ರಾವಿಡ್!ಕುಂಬ್ಳೆ ಮಾಡಿದ್ದೇ ಸರಿ; ಕೊಹ್ಲಿ - ರವಿಶಾಸ್ತ್ರಿ ಕೈಗೊಂಡಿದ್ದ ಆ ನಿರ್ಧಾರವನ್ನು ಕಿತ್ತೊಗೆದ ಕೋಚ್ ದ್ರಾವಿಡ್!

ಇನ್ನು 8 ತಂಡಗಳೊಂದಿಗೆ ನಡೆದ ಕೊನೆಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇದಾಗಿದ್ದು ಮುಂಬರುವ ವರ್ಷ 2 ನೂತನ ತಂಡಗಳಾದ ಲಖನೌ ಮತ್ತು ಅಹಮದಾಬಾದ್ ಸೇರ್ಪಡೆಯಿಂದ 10 ತಂಡಗಳೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯಲಿದೆ. ಹೀಗಾಗಿ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ ತಂಡಗಳ ನಡುವಿನ ಹಣಾಹಣಿ ಮತ್ತಷ್ಟು ಕುತೂಹಲ ಮತ್ತು ರೋಚಕತೆಯಿಂದ ಕೂಡಿರುವುದಂತೂ ಖಚಿತ.

ಈತನನ್ನು ತಂಡದಿಂದ ಕಿತ್ತೊಗೆದು ಕೆಎಸ್ ಭರತ್‌ಗೆ ಅವಕಾಶ ಕೊಡಿ ಎಂದು ಕಿಡಿಕಾರಿದ ನೆಟ್ಟಿಗರು!ಈತನನ್ನು ತಂಡದಿಂದ ಕಿತ್ತೊಗೆದು ಕೆಎಸ್ ಭರತ್‌ಗೆ ಅವಕಾಶ ಕೊಡಿ ಎಂದು ಕಿಡಿಕಾರಿದ ನೆಟ್ಟಿಗರು!

ಹೀಗೆ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಲಖನೌ ಮತ್ತು ಅಹಮದಾಬಾದ್ ತಂಡಗಳು ಸೇರ್ಪಡೆಯಾಗುತ್ತಿರುವುದರಿಂದ ಟೂರ್ನಿ ಆರಂಭಕ್ಕೂ ಮುನ್ನ ಆಟಗಾರರ ಮೆಗಾ ಹರಾಜು ನಡೆಯಲಿದೆ. ಹೀಗಾಗಿ ಸದ್ಯ ಅಸ್ತಿತ್ವದಲ್ಲಿರುವ ಫ್ರಾಂಚೈಸಿಗಳು ಯಾವ ಆಟಗಾರರನ್ನು ತಂಡದಲ್ಲಿಯೇ ಉಳಿಸಿಕೊಳ್ಳಲಿದೆ ಎಂಬ ವರದಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕೆಂದು ಬಿಸಿಸಿಐ ಸೂಚನೆ ನೀಡಿದ್ದು ಯಾವ ಫ್ರಾಂಚೈಸಿಗಳು ಯಾವ ಯಾವ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಲಿವೆ ಎಂಬ ಕುತೂಹಲ ಹೆಚ್ಚಾಗಿದೆ. ಇನ್ನು ಅಸ್ತಿತ್ವದಲ್ಲಿರುವ ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರಿಗೆ ಎಷ್ಟು ಮೊತ್ತವನ್ನು ನೀಡಲಿದೆ ಮತ್ತು ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಯಾವ ದಿನದಂದು ಎಲ್ಲಿ ವೀಕ್ಷಿಸಬೇಕು ಎಂಬುದರ ಕುರಿತ ಮಾಹಿತಿ ಈ ಕೆಳಕಂಡಂತಿದೆ ಓದಿ..

ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರಿಗೆ ಸಿಗುವ ಮೊತ್ತ ಹೀಗಿರಲಿದೆ

ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರಿಗೆ ಸಿಗುವ ಮೊತ್ತ ಹೀಗಿರಲಿದೆ

ಒಂದುವೇಳೆ ಫ್ರಾಂಚೈಸಿಯೊಂದು 4 ಆಟಗಾರರನ್ನು ಉಳಿಸಿಕೊಂಡರೆ 42 ಕೋಟಿ ಖರ್ಚು ಮಾಡಬಹುದಾಗಿದೆ. ಈ ಮೂಲಕ ಫ್ರಾಂಚೈಸಿಯೊಂದು ಉಳಿಸಿಕೊಳ್ಳಲಿರುವ ಪ್ರಥಮ ಆಟಗಾರನಿಗೆ 16 ಕೋಟಿ, ದ್ವಿತೀಯ ಆಟಗಾರನಿಗೆ 12 ಕೋಟಿ, ಮೂರನೇ ಆಟಗಾರನಿಗೆ 8 ಕೋಟಿ ಮತ್ತು ನಾಲ್ಕನೇ ಆಟಗಾರನಿಗೆ 6 ಕೋಟಿ ಸಿಗಲಿದೆ.


ಒಂದುವೇಳೆ ಫ್ರಾಂಚೈಸಿಯೊಂದು 3 ಆಟಗಾರರನ್ನು ಉಳಿಸಿಕೊಂಡರೆ 33 ಕೋಟಿ ಖರ್ಚು ಮಾಡಬಹುದಾಗಿದೆ. ಈ ಮೂಲಕ ಫ್ರಾಂಚೈಸಿಯೊಂದು ಉಳಿಸಿಕೊಳ್ಳಲಿರುವ ಪ್ರಥಮ ಆಟಗಾರನಿಗೆ 15 ಕೋಟಿ, ದ್ವಿತೀಯ ಆಟಗಾರನಿಗೆ 11 ಕೋಟಿ ಮತ್ತು ಮೂರನೇ ಆಟಗಾರನಿಗೆ 7 ಕೋಟಿ ಲಭಿಸಲಿದೆ.


ಒಂದುವೇಳೆ ಫ್ರಾಂಚೈಸಿಯೊಂದು ಇಬ್ಬರು ಆಟಗಾರರನ್ನು ಉಳಿಸಿಕೊಂಡರೆ 24 ಕೋಟಿ ಖರ್ಚು ಮಾಡಬಹುದಾಗಿದೆ. ಈ ಮೂಲಕ ಫ್ರಾಂಚೈಸಿಯೊಂದು ಉಳಿಸಿಕೊಳ್ಳಲಿರುವ ಪ್ರಥಮ ಆಟಗಾರನಿಗೆ 14 ಕೋಟಿ ಮತ್ತು ದ್ವಿತೀಯ ಆಟಗಾರನಿಗೆ 10 ಕೋಟಿ ದೊರೆಯಲಿದೆ.

ನೇರಪ್ರಸಾರದ ಮಾಹಿತಿ

ನೇರಪ್ರಸಾರದ ಮಾಹಿತಿ

ಫ್ರಾಂಚೈಸಿಗಳು ಯಾವ ಆಟಗಾರರನ್ನು ತಂಡದಲ್ಲಿಯೇ ಉಳಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐಗೆ ವರದಿ ನೀಡಲಿರುವ ಕಾರ್ಯಕ್ರಮ ನವೆಂಬರ್‌ 30ರಂದು ನಡೆಯಲಿದ್ದು ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು.

ಈ 4 ಆಟಗಾರರು ಮಾತ್ರ RCBಯಲ್ಲಿ ಸೇಫ್ | Oneindia Kannada
ರಿಟೆನ್ಷನ್ ಕುರಿತು ಉಂಟಾಗಿವೆ ಹಲವಾರು ಗೊಂದಲಗಳು

ರಿಟೆನ್ಷನ್ ಕುರಿತು ಉಂಟಾಗಿವೆ ಹಲವಾರು ಗೊಂದಲಗಳು

ಇನ್ನು ಈ ರಿಟೆನ್ಷನ್ ಕುರಿತು ಕ್ರಿಕೆಟ್ ಅಭಿಮಾನಿಗಳಲ್ಲಿ ಗೊಂದಲಗಳು ಉಂಟಾಗಿವೆ. ಅಸ್ತಿತ್ವದಲ್ಲಿರುವ ಫ್ರಾಂಚೈಸಿಗಳ ನಡೆ ಮತ್ತು ಹೇಳಿಕೆಗಳು ಈ ಗೊಂದಲಗಳಿಗೆ ಕಾರಣವಾಗಿವೆ. ಅಷ್ಟೇ ಅಲ್ಲದೆ ಆಟಗಾರರು ಮತ್ತು ಫ್ರಾಂಚೈಸಿಗಳ ನಡುವೆ ಉಂಟಾಗಿರುವ ಭಿನ್ನಮತ ಕೂಡ ಗೊಂದಲಗಳನ್ನು ಸೃಷ್ಟಿಸುತ್ತಿದ್ದು ಯಾವ ಆಟಗಾರರನ್ನು ಅಸ್ತಿತ್ವದಲ್ಲಿರುವ ಫ್ರಾಂಚೈಸಿಗಳು ಉಳಿಸಿಕೊಳ್ಳಲಿವೆ ಎಂಬುದರ ಕುರಿತ ಸ್ಪಷ್ಟ ಚಿತ್ರಣ ನವೆಂಬರ್ 30ರಂದು ಲಭಿಸಲಿದೆ.

Story first published: Saturday, November 27, 2021, 10:40 [IST]
Other articles published on Nov 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X