ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ರಿಟೈನ್ ನಂತರ ಆರ್‌ಸಿಬಿ ಅಭಿಮಾನಿಗಳಿಗೆ ಸಿರಾಜ್ ಸಂದೇಶ, ಮ್ಯಾಕ್ಸ್‌ವೆಲ್ ಭರವಸೆ

IPL 2022 retention: Mohammed Siraj and Glenn Maxwell thanked RCB for retained them

ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಲಕ್ನೋ ಮತ್ತು ಅಹ್ಮದಾಬಾದ್ ತಂಡಗಳ ಸೇರ್ಪಡೆಯಾಗುತ್ತಿರುವ ಕಾರಣ ಟೂರ್ನಿ ಆರಂಭಕ್ಕೂ ಮುನ್ನ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಅಸ್ತಿತ್ವದಲ್ಲಿರುವ 8 ಫ್ರಾಂಚೈಸಿಗಳು ತಮ್ಮ ತಂಡದಲ್ಲಿರುವ ಯಾರಾದರೂ ಗರಿಷ್ಠ 4 ಆಟಗಾರರನ್ನು ರಿಟೇನ್ ಮಾಡಿಕೊಳ್ಳುವ ಅನುಮತಿಯನ್ನು ಬಿಸಿಸಿಐನಿಂದ ಪಡೆದುಕೊಂಡಿದ್ದವು. ಹೀಗೆ ವಿವಿಧ ಫ್ರಾಂಚೈಸಿಗಳಿಗೆ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದಕ್ಕೆ ನವೆಂಬರ್ 30ನ್ನು ಅಂತಿಮ ದಿನಾಂಕವನ್ನಾಗಿ ಘೋಷಿಸಲಾಗಿತ್ತು. ಅದರಂತೆಯೇ ಎಲ್ಲಾ 8 ಫ್ರಾಂಚೈಸಿಗಳು ತಾವು ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಿದ್ದು, ನವೆಂಬರ್‌ 30ರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಆ ಪಟ್ಟಿಗಳ ಹೆಸರುಗಳನ್ನು ಬಹಿರಂಗಪಡಿಸಲಾಗಿದೆ.

ಜಡೇಜಾ ರೀತಿ ಕೆಎಲ್ ರಾಹುಲ್ ಮತ್ತು ರಶೀದ್ ಖಾನ್ 1 ವರ್ಷ ಐಪಿಎಲ್‌ನಿಂದ ಬ್ಯಾನ್!?ಜಡೇಜಾ ರೀತಿ ಕೆಎಲ್ ರಾಹುಲ್ ಮತ್ತು ರಶೀದ್ ಖಾನ್ 1 ವರ್ಷ ಐಪಿಎಲ್‌ನಿಂದ ಬ್ಯಾನ್!?

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತಂಡದ ಪ್ರಮುಖ 3 ಆಟಗಾರರನ್ನು ಉಳಿಸಿಕೊಂಡಿದ್ದು ಉಳಿದ ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ. ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮೊಹಮ್ಮದ್ ಸಿರಾಜ್ ಈ ಮೂವರು ಆಟಗಾರರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ. ಆರ್‌ಸಿಬಿ ವಿರಾಟ್ ಕೊಹ್ಲಿಯನ್ನು 15 ಕೋಟಿ ನೀಡಿ ಉಳಿಸಿಕೊಂಡಿದ್ದರೆ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ 11 ಕೋಟಿ ಬೆಲೆ ನಿಗದಿಪಡಿಸಿದೆ. ಇನ್ನು ವೇಗಿ ಮೊಹಮ್ಮದ್ ಸಿರಾಜ್ ಅವರನ್ನು 7 ಕೋಟಿಗೆ ಆರ್‌ಸಿಬಿ ರೀಟೈನ್ ಮಾಡಿಕೊಂಡಿದೆ. ಈ ಮೂಲಕ ಒಟ್ಟು 33 ಕೋಟಿ ರೂಪಾಯಿಯನ್ನು ಆರ್‌ಸಿಬಿ ಫ್ರಾಂಚೈಸಿ ಈ ರೀಟೈನ್ ಪ್ರಕ್ರಿಯೆಗಾಗಿ ಬಳಸಿಕೊಂಡಿದೆ. ಈ ರಿಟೆನ್ಷನ್ ಪ್ರಕ್ರಿಯೆಯ ನಂತರ ಆರ್‌ಸಿಬಿ ತಂಡದ ಪರ್ಸ್‌ನಲ್ಲಿ 57 ಕೋಟಿ ರೂಪಾಯಿ ಹರಾಜು ಪ್ರಕ್ರಿಯೆಗಾಗಿ ಉಳಿದುಕೊಂಡಿದೆ.

ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಮೊಹಮ್ಮದ್ ಸಿರಾಜ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಉಳಿದುಕೊಂಡ ನಂತರ ವಿಶೇಷವಾಗಿ ವಿಡಿಯೋವೊಂದರಲ್ಲಿ ಮಾತನಾಡಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗೆ ಧನ್ಯವಾದಗಳನ್ನು ಸಲ್ಲಿಸುವುದರ ಜತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಸಂದೇಶ ಮತ್ತು ಭರವಸೆಗಳನ್ನು ಈ ಕೆಳಕಂಡಂತೆ ನೀಡಿದ್ದಾರೆ.

ದೊಡ್ಡ ಮೊತ್ತ ಪಡೆಯುತ್ತಿದ್ದ ಧೋನಿಗೆ ಈ ಸಲ ಕಡಿಮೆ ಮೊತ್ತ ಸಿಕ್ಕಿದ್ದಕ್ಕೆ ಕಾರಣ ಆ ಒಬ್ಬ ಆಟಗಾರ!ದೊಡ್ಡ ಮೊತ್ತ ಪಡೆಯುತ್ತಿದ್ದ ಧೋನಿಗೆ ಈ ಸಲ ಕಡಿಮೆ ಮೊತ್ತ ಸಿಕ್ಕಿದ್ದಕ್ಕೆ ಕಾರಣ ಆ ಒಬ್ಬ ಆಟಗಾರ!

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ಪ್ರದರ್ಶನ ನೀಡುವುದರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯಿಂದ ಮೆಚ್ಚುಗೆಯನ್ನು ಪಡೆದುಕೊಂಡು ಇದೀಗ ಫ್ರಾಂಚೈಸಿಯ ರಿಟೈನ್ ಆಯ್ಕೆಗೆ ಒಳಗಾಗಿದ್ದಾರೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನನ್ನು ರಿಟೈನ್ ಮಾಡಿಕೊಂಡದಕ್ಕೆ ಸಂತಸ ವ್ಯಕ್ತಪಡಿಸಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಮುಂದಿನ ವರ್ಷ ಮತ್ತೊಂದಷ್ಟು ಹೆಜ್ಜೆಗಳನ್ನು ಮುಂದಿಡುವುದರ ಮೂಲಕ ಟ್ರೋಫಿಯನ್ನು ಗೆಲ್ಲಲಿದ್ದೇವೆ ಎಂದು ಭರವಸೆಯನ್ನು ನೀಡಿದ್ದಾರೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುವ ಮುನ್ನಾ ನಡೆದ ಮಿನಿ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ 14.25 ಕೋಟಿ ಮೊತ್ತ ಪಡೆದಿದ್ದರು. ಹಾಗೂ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ 15 ಪಂದ್ಯಗಳನ್ನಾಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ 513 ರನ್ ಬಾರಿಸಿ ಮಿಂಚಿದ್ದರು. ಹೀಗೆ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದಾಗ ಸಾಲು ಸಾಲು ಕಳಪೆ ಪ್ರದರ್ಶನದಿಂದ ಕಂಗೆಟ್ಟಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ ನಂತರ ಯಶಸ್ಸಿನ ಹಾದಿಗೆ ಮರಳಿದ್ದಾರೆ.

ಮೊಹಮ್ಮದ್ ಸಿರಾಜ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನನ್ನು ರಿಟೈನ್ ಮಾಡಿಕೊಂಡಿರುವುದರ ಕುರಿತಾಗಿ ಮಾತನಾಡಿದ್ದು ತನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕೆ ತಮ್ಮ ಫ್ರಾಂಚೈಸಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಹಾಗೂ ಇದೇ ಸಮಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಸಂದೇಶವೊಂದನ್ನು ನೀಡಿರುವ ಮೊಹಮ್ಮದ್ ಸಿರಾಜ್ ಇದೇ ರೀತಿ ನಮ್ಮ ಮೇಲೆ ಪ್ರೀತಿ ಇಟ್ಟಿರಿ ಮತ್ತು ಪ್ರೋತ್ಸಾಹಿಸುತ್ತಿರಿ ಎಂದಿದ್ದಾರೆ.

Story first published: Wednesday, December 1, 2021, 11:36 [IST]
Other articles published on Dec 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X