ಈತ ಅಂತಾರಾಷ್ಟ್ರೀಯ ತಂಡದ ನಾಯಕನಾಗಲಿದ್ದಾರೆ: ಯುವ ಕ್ರಿಕೆಟಿಗನ ಬಗ್ಗೆ ಭವಿಷ್ಯ ನುಡಿದ ರಿಕಿ ಪಾಂಟಿಂಗ್

ಐಪಿಎಲ್ 14ನೇ ಆವೃತ್ತಿ ಆರಂಭವಾಗಿದ್ದು ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಮೂಲಕ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್‌ಗೆ ಚಾಲನೆ ದೊರೆತಿದೆ. ಟೂರ್ನಿಯ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ರಿಕಿ ಪಾಂಟಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ರಿಕಿ ಪಾಂಟಿಂಗ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬಗ್ಗೆ ವಿಶೇಷ ಮಾತುಗಳನ್ನಾಡಿದ್ದಾರೆ. ರಿಷಬ್ ಪಂತ್ ಮುಂದಿನ ದಿನಗಳಲ್ಲಿ ಭಾರತ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುನ್ನಡೆಸಲಿದ್ದಾರೆ ಎಂದು ಪಾಂಟಿಂಗ್ ಭವಿಷ್ಯ ನುಡಿದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಮುಂಬೈ ತಂಡದ ನಾಯಕನಾಗಿ ಯಾವ ರೀತಿಯ ಸಾಧನೆ ಮಾಡಿದ್ದಾರೋ ಅಂತಾದ್ದೇ ಸಾಧನೆ ರಿಷಬ್ ಪಂಣತ್ ಮಾಡಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ ರಿಕಿ ಪಾಂಟಿಂಗ್.
ರಿಷಭ್ ಪಂತ್ ಈ ಬಾರಿಯ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವ ಮೂಲಕ ಸತತ ಎರಡನೇ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಬಾರಿಯ ಸಂಪೂರ್ಣ ಆವೃತ್ತಿಯಲ್ಲಿ ಡೆಲ್ಲಿ ತಂಡದ ನಾಯಕತ್ವ ವಹಿಸಿದ್ದ ಪಂತ್ ತಂಡವನ್ನು ಪ್ಲೇಆಫ್ ಹಂತದವರೆಗೆ ಮುನ್ನಡೆಸಿದ್ದರು.
ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಳ್ಳುವ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದ ರಿಕಿ ಪಾಂಟಿಂಗ್ ರೋಹಿತ್ ಶರ್ಮಾ ಅವರನ್ನು ಕುಡ ಹತ್ತಿರದಿಂದ ಬಲ್ಲವರಾಗಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಅವರೊಂದಿಗೆ ರಿಷಭ್ ಪಂತ್ ಅವರನ್ನು ಹೋಲಿಕೆ ಮಾಡಿರುವ ಪಾಂಟಿಂಗ್ ಇಬ್ಬರಲ್ಲಿಯೂ ಸಾಕಷ್ಟು ಸಾಮ್ಯತೆಗಳು ಇವೆ ಎಂದು ಹೇಳಿದ್ದಾರೆ.
"ಪ್ರಾಮಾಣಿಕವಾಗಿ ಹೇಳಬೇಕೆಂದರೆ ಪಂತ್ ಹಾಗೂ ರೋಹಿತ್ ಶರ್ಮಾ ಅವರಲ್ಲಿ ಸಾಕಷ್ಟು ಸಾಮ್ಯತೆಗಳನ್ನು ನಾನು ಕಂಡಿದ್ದೇನೆ. ಅವರಿಬ್ಬರು ಕೂಡ ಉತ್ತಮ ಗೆಳೆಯರು ಎಂಬುದು ನನಗೆ ಗೊತ್ತಿದೆ. ಹೀಗಾಗಿ ನಾಯಕತ್ವದ ವಿಚಾರವಾಗಿ ಸಾಕಷ್ಟು ಅಂಶಗಳನ್ನು ಈ ಇಬ್ಬರು ಹಂಚಿಕೊಂಡಿರುತ್ತಾರೆ" ಎಂದಿದ್ದಾರೆ ರಿಕಿ ಪಾಂಟಿಂಗ್.

ಡೆಲ್ಲಿ ಕ್ಯಾಪಿಟಲ್ಸ್: ರಿಷಬ್ ಪಂತ್ (ನಾಯಕ), ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಅನ್ರಿಚ್ ನಾರ್ಕಿಯಾ, ಡೇವಿಡ್ ವಾರ್ನರ್, ಖಲೀಲ್ ಅಹಮದ್, ಚೇತನ್ ಸಕರಿಯಾ, ಶ್ರೀಕರ್ ಭರತ್, ಕುಲದೀಪ್ ಯಾದವ್, ಮುಸ್ತಫಿಜುರ್ ರೆಹಮಾನ್, ಮನದೀಪ್ ಸಿಂಗ್, ಕಮಲೇಶ ನಾಗರಕೋಟಿ, ಅಶ್ವಿನ್ ಹೆಬ್ಬಾರ್, ಸರ್ಫರಾಜ್ ಖಾನ್, ಲಲಿತ್ ಯಾದವ್, ರಿಪಾಲ್ ಪಟೇಲ್, ಯಶ್ ಧುಲ್, ರೋವ್ಮನ್ ಪೊವೆಲ್, ಪ್ರವೀಣ್ ದುಬೆ, ಲುಂಗಿ ಎನ್ಗಿಡಿ, ಟಿಮ್ ಸೀಫರ್ಟ್, ವಿಕಿ ಓಸ್ಟ್ವಾಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications