ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RR vs CSK: ಜಡೇಜಾ, ರೋಹಿತ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರಿಯಾನ್ ಪರಾಗ್!

IPL 2022: Riyan Parag surpassed Jadeja in most catches by Indian fielders in an IPL season record

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಸನಿಹಕ್ಕೆ ಬಂದಿದ್ದು, 68ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇಂದು ( ಮೇ 20 ) ಮುಖಾಮುಖಿಯಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 5 ವಿಕೆಟ್‍ಗಳ ಜಯ ಸಾಧಿಸುವುದರ ಮೂಲಕ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ.

CSK vs RR: ಆಪದ್ಬಾಂಧವನಾದ ಅಶ್ವಿನ್, ಮಿಂಚಿದ ಜೈಸ್ವಾಲ್; ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದ ರಾಜಸ್ಥಾನ್CSK vs RR: ಆಪದ್ಬಾಂಧವನಾದ ಅಶ್ವಿನ್, ಮಿಂಚಿದ ಜೈಸ್ವಾಲ್; ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದ ರಾಜಸ್ಥಾನ್

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 150 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 151 ರನ್‌ಗಳ ಗುರಿಯನ್ನು ನೀಡಿತ್ತು. ಇನ್ನು ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅರ್ಧಶತಕ ಹಾಗೂ ರವಿಚಂದ್ರನ್ ಅಶ್ವಿನ್ 23 ಎಸೆತಗಳಲ್ಲಿ ಅಜೇಯ 44 ರನ್ ಬಾರಿಸಿದ ನೆರವಿನಿಂದ 19.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 151 ರನ್ ಕಲೆಹಾಕಿ 5 ವಿಕೆಟ್‍ಗಳ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿಕೆ ಕಂಡಿದ್ದು, ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದುಕೊಳ್ಳುವುದರ ಜೊತೆಗೆ ಕ್ವಾಲಿಫೈಯರ್ ಪಂದ್ಯಕ್ಕೂ ಕೂಡ ಲಗ್ಗೆ ಇಟ್ಟಿದೆ.

ಐಪಿಎಲ್ 2022: ಮುಂದಿನ ಆವೃತ್ತಿಯಲ್ಲಿ ಕಣಕ್ಕಿಳಿಯುತ್ತಾರಾ ಧೋನಿ?: ಗೊಂದಲಕ್ಕೆ ತೆರೆ ಎಳೆದ MSDಐಪಿಎಲ್ 2022: ಮುಂದಿನ ಆವೃತ್ತಿಯಲ್ಲಿ ಕಣಕ್ಕಿಳಿಯುತ್ತಾರಾ ಧೋನಿ?: ಗೊಂದಲಕ್ಕೆ ತೆರೆ ಎಳೆದ MSD

ಇನ್ನು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರಿಯಾನ್ ಪರಾಗ್ ವಿಶಿಷ್ಟ ದಾಖಲೆಯೊಂದರಲ್ಲಿ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾರನ್ನು ಹಿಂದಿಕ್ಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ ಈ ಕೆಳಕಂಡಂತಿದೆ.

ಐಪಿಎಲ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದ ಭಾರತೀಯ

ಐಪಿಎಲ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದ ಭಾರತೀಯ

ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ಕ್ಯಾಚ್ ಹಿಡಿದ ಭಾರತೀಯ ಫೀಲ್ಡರ್ ಎಂಬ ದಾಖಲೆಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ರಿಯಾನ್ ಪರಾಗ್ ರವೀಂದ್ರ ಜಡೇಜಾ ಹಾಗೂ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ. ಇಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 2 ಕ್ಯಾಚ್ ಕಬಳಿಸಿದ ರಿಯಾನ್ ಪರಾಗ್ ಈ ಬಾರಿಯ ಆವೃತ್ತಿಯಲ್ಲಿ ಇಲ್ಲಿಯವರೆಗೂ 15 ಕ್ಯಾಚ್‌ಗಳನ್ನು ಹಿಡಿದಿದ್ದು, ಇದು ಐಪಿಎಲ್ ಆವೃತ್ತಿಯೊಂದರಲ್ಲಿ ಭಾರತೀಯ ಆಟಗಾರ ಹಿಡಿದ ಅತಿ ಹೆಚ್ಚು ಕ್ಯಾಚ್ ಎಂಬ ದಾಖಲೆಯಾಗಿದೆ.

ಐಪಿಎಲ್ ಅವೃತ್ತಿಯೊಂದರಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದ ಭಾರತೀಯರು

ಐಪಿಎಲ್ ಅವೃತ್ತಿಯೊಂದರಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದ ಭಾರತೀಯರು

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ರಿಯಾನ್ ಪರಾಗ್ 15 ಕ್ಯಾಚ್‌ಗಳನ್ನು ಹಿಡಿದಿದ್ದರೆ, ಈ ಹಿಂದೆ 2015 ಮತ್ತು 2021 ಎರಡೂ ಐಪಿಎಲ್ ಆವೃತ್ತಿಗಳಲ್ಲಿಯೂ ರವೀಂದ್ರ ಜಡೇಜಾ ತಲಾ 13 ಕ್ಯಾಚ್‌ಗಳನ್ನು ಹಿಡಿದಿದ್ದರು ಹಾಗೂ 2012ರ ಐಪಿಎಲ್ ಆವೃತ್ತಿಯಲ್ಲಿ ರೋಹಿತ್ ಶರ್ಮಾ ಕೂಡ 13 ಕ್ಯಾಚ್‌ಗಳನ್ನು ಹಿಡಿದಿದ್ದರು.

Ashwin CSK ವಿರುದ್ಧ ಸಿಡಿದು ಪಂದ್ಯ ಗೆಲ್ಲಿಸಿದರು | OneIndia Kannada
ಅತಿ ಹೆಚ್ಚು ಕ್ಯಾಚ್ ಹಿಡಿದ ದಾಖಲೆ ಎಬಿಡಿ ಹೆಸರಿನಲ್ಲಿದೆ

ಅತಿ ಹೆಚ್ಚು ಕ್ಯಾಚ್ ಹಿಡಿದ ದಾಖಲೆ ಎಬಿಡಿ ಹೆಸರಿನಲ್ಲಿದೆ

ಇನ್ನು ವಿದೇಶಿ ಆಟಗಾರರೂ ಒಳಗೊಂಡಂತೆ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಎಂಬ ದಾಖಲೆ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದೆ. 2016ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಎಬಿ ಡಿವಿಲಿಯರ್ಸ್ 16 ಪಂದ್ಯಗಳಲ್ಲಿ 19 ಕ್ಯಾಚ್ ಹಿಡಿದಿದ್ದರು. ಇದೀಗ ರಿಯಾನ್ ಪರಾಗ್ 15 ಕ್ಯಾಚ್‌ಗಳನ್ನು ಈಗಾಗಲೇ ಹಿಡಿದಿದ್ದು ತಮ್ಮ ತಂಡ ಪ್ಲೇ ಆಫ್ ಸುತ್ತಿಗೆ ಲಗ್ಗೆ ಇಟ್ಟಿರುವುದರಿಂದ ಮುಂದಿನ ಪಂದ್ಯಗಳಲ್ಲಿ ಎಬಿ ಡಿವಿಲಿಯರ್ಸ್ ಅವರ ಈ ದಾಖಲೆಯನ್ನು ಸರಿಗಟ್ಟಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

Story first published: Saturday, May 21, 2022, 8:50 [IST]
Other articles published on May 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X