ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

MI vs PBKS: ಟಿ20 ಕ್ರಿಕೆಟ್‌ನಲ್ಲಿ ಅತಿ ದೊಡ್ಡ ದಾಖಲೆ ಬರೆದ ರೋಹಿತ್ ಶರ್ಮಾ

IPL 2022: Rohit Sharma is the second Indian cricketer to reach an important milestone in T20 cricket

ಐಪಿಎಲ್‌ನಲ್ಲಿ ಬುಧವಾರ ನಡೆದ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ ಮತ್ತೊಂದು ಸೋಲು ಕಂಡಿದೆ. ಈ ಮೂಲಕ ಈ ಬಾರಿಯ ಐಪಿಎಲ್‌ನಲ್ಲಿ ಆಡಿದ ಐದು ಪಂದ್ಯಗಳನ್ನು ಕೂಡ ಮುಂಬೈ ಇಂಡಿಯನ್ಸ್ ಸೋತಂತಾಗಿದೆ. ಈ ಮಧ್ಯೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್‌ನಲ್ಲಿ ಅಮೋಘ ಸಾಧನೆಯೊಂದನ್ನು ಮಾಡಿದ್ದು ಈ ಸಾಧನೆ ಮಾಡಿದ ಭಾರತದ ಕೇವಲ 2ನೇ ಆಟಗಾರ ಎನಿಸಿಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 28 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆದರೆ ಇದಕ್ಕೂ ಮುನ್ನ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ 10,000 ರನ್‌ಗಳಿಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಕಗಿಸೋ ರಬಾಡ ಎಸೆತವನ್ನು ಸಿಕ್ಸರ್‌ಗೆ ಅಟ್ಟುವ ಮೂಲಕ ಈ ಸಾಧನೆ ಮಾಡಿದ್ದಾರೆ. ಆದರೆ ಮುಂದಿನ ಎಸೆತದಲ್ಲಿಯೇ ಟಾಪ್ ಎಡ್ಜ್ ಆಗುವ ಮೂಲಕ ರೋಹಿತ್ ಶರ್ಮಾ ತಮ್ಮ ವಿಕೆಟ್ ಕಳೆದುಕೊಂಡರು.

IPL 2022: ಸತತ 5 ಪಂದ್ಯ ಸೋತ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌IPL 2022: ಸತತ 5 ಪಂದ್ಯ ಸೋತ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌

ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ ರೋಹಿತ್ ಶರ್ಮಾ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ 10,000 ರನ್‌ಗಳ ಮೈಲಿಗಲ್ಲನ್ನು ದಾಟಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡಿದ್ದರು. ಇನ್ನು ವಿಶ್ವ ಕ್ರಿಕೆಟ್‌ನಲ್ಲಿ ಈ ಸಾಧನೆಯನ್ನು ಕೇವಲ 7 ಆಟಗಾರರು ಮಾತ್ರವೇ ಮಾಡಿದ್ದಾರೆ. ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಶೋಯೆಬ್ ಮಲಿಕ್, ಕಿರಾನ್ ಪೊಲಾರ್ಡ್, ಆರೋನ್ ಫಿಂಚ್ ಹಾಗೂ ಡೇವಿಡ್ ವಾರ್ನರ್ ಈ ಸಾಧನೆ ಮಾಡಿರುವ ಇತರ ಕ್ರಿಕೆಟಿಗರಾಗಿದ್ದಾರೆ.

ಟಿ20 ಮಾದರಿಯ ಅತ್ಯುತ್ತಮ ಹಿಟ್ಟರ್‌ಗಳಲ್ಲಿ ಒಬ್ಬರು ಎನಿಸಿಕೊಂಡಿರುವ ರೋಹಿತ್ ಶರ್ಮಾ ಟಿ20 ಮಾದರಿಯಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಯನ್ನೂ ಹೊಂದಿದ್ದಾರೆ. 2007ರಲ್ಲಿ ಮೊದಲ ಆವೃತ್ತಿಯ ಸೈಯ್ಯರ್ ಮುಷ್ತಾಕ್ ಅಲಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಮುಂಬೈ ಪರವಾಗಿ ರೋಹಿತ್ ಶರ್ಮಾ ಈ ಸಾಧನೆ ಮಾಡಿದ್ದರು ರೋಹಿತ್ ಶರ್ಮಾ.

ರಶೀದ್ ಖಾನ್‌ರನ್ನ SRH ರೀಟೈನ್ ಮಾಡದೆ ಇರಲು, ಕಾರಣ ತಿಳಿಸಿದ ಮುತ್ತಯ್ಯ ಮುರಳೀಧರನ್ರಶೀದ್ ಖಾನ್‌ರನ್ನ SRH ರೀಟೈನ್ ಮಾಡದೆ ಇರಲು, ಕಾರಣ ತಿಳಿಸಿದ ಮುತ್ತಯ್ಯ ಮುರಳೀಧರನ್

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿಯೂ ರೋಹಿತ್ ಶರ್ಮಾ ಟಿ20 ಮಾದರಿಯಲ್ಲಿ ಅದ್ಭುತ ಸಾಧನೆ ಮಾಡಿದ್ದು ಕೆಲ ಮಹತ್ವದ ದಾಖಲೆಗಳನ್ನು ಹೊಂದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 4 ಶತಕ ಬಾರಿಸಿದ ಸಾಧನೆ ಮಾಡಿದ್ದಾರೆ ರೋಹಿತ್ ಶರ್ಮಾ. ಅಲ್ಲದೆ ಈ ಮಾದರಿಯಲ್ಲಿ ಅತಿ ವೇಗದ ಶತಕ(35 ಎಸೆತಗಳಲ್ಲಿ) ಬಾರಿಸಿದ ಜಂಟಿ ದಾಖಲೆಯನ್ನು ಕೂಡ ರೋಹಿತ್ ಶರ್ಮಾ ಹೊಂದಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಅತೊ ಹೆಚ್ಚು ಸಿಕ್ಸರ್ ಬಾರಿಸಿದ ಭಾತೀಯ ಆಟಗಾರ ಎನಿಸಿಕೊಂಡಿದ್ದಾರೆ ರೋಹಿತ್ ಶರ್ಮಾ. 427 ಸಿಕ್ಸರ್‌ಗಳು ರೋಹಿತ್ ಶರ್ಮಾ ಬ್ಯಾಟ್‌ನಿಂದ ಸಿಡಿದಿದೆ. ಇನ್ನು ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ 3ನೇ ಸ್ಥಾನದಲ್ಲಿದ್ದು 5,700ಕ್ಕೂ ಅಧಿಕ ರನ್‌ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಸೇರಿದ್ದು 40 ಅರ್ಧ ಶತಕಗಳಿದೆ.

Story first published: Thursday, April 14, 2022, 18:01 [IST]
Other articles published on Apr 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X