ಕೊಹ್ಲಿ ರೀತಿ ರೋಹಿತ್ ಕೂಡ ನಾಯಕತ್ವದಿಂದ ಔಟ್, ಈತನೇ ಮುಂಬೈನ ನೂತನ ನಾಯಕ ಎಂದ ಮಾಜಿ ಕ್ರಿಕೆಟಿಗ!

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿಹೆಚ್ಚು ಸದ್ದು ಮಾಡುತ್ತಿರುವ ವಿಷಯವೆಂದರೆ ಅದು ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್. ಹೌದು, ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಿದ್ದು, ಮುಂಬೈ ಇಂಡಿಯನ್ಸ್ ತಂಡ ಸಾಲು ಸಾಲು ಸೋಲುಗಳನ್ನು ಕಾಣುವುದರ ಮೂಲಕ ಅತಿಕೆಟ್ಟ ಆರಂಭವನ್ನು ಪಡೆದುಕೊಂಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಟ್ರೋಫಿ ಗೆದ್ದಿರುವ ಯಶಸ್ವಿ ತಂಡ ಎನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತನ್ನ ಮೊದಲ ನಾಲ್ಕು ಪಂದ್ಯಗಳಲ್ಲಿ ಸೋಲುಂಡಿದೆ. ಮೊದಲಿಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ಮುಂಬೈ ಇಂಡಿಯನ್ಸ್ ದ್ವಿತೀಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲುಂಡು ತೃತೀಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲನ್ನು ಅನುಭವಿಸಿ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ತನ್ನ ನಾಲ್ಕನೇ ಪಂದ್ಯದಲ್ಲಿಯೂ ಸಹ ಸೋಲನ್ನು ಅನುಭವಿಸಿದೆ. ಹೀಗೆ ಸಾಲು ಸಾಲು ಪಂದ್ಯಗಳಲ್ಲಿ ಸೋತು ಕೆಟ್ಟ ಆರಂಭ ಪಡೆದು ಮುಖಭಂಗಕ್ಕೊಳಗಾಗಿರುವ ಮುಂಬೈ ಇಂಡಿಯನ್ಸ್ ಸದ್ಯ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.
ಇನ್ನು ಮುಂಬೈ ಇಂಡಿಯನ್ಸ್ ಈ ಬಾರಿಯ ಇಂಡಿಯನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಷ್ಟರ ಮಟ್ಟಿಗೆ ನೆಲಕಚ್ಚಲು ಕಾರಣಗಳೇನು ಎಂಬ ಚರ್ಚೆಗಳು ನಡೆಯುತ್ತಿದ್ದು, ಒಂದೆಡೆ ಕಳೆದ ಆವೃತ್ತಿಗಳಲ್ಲಿ ತಂಡದ ಪರ ಕಣಕ್ಕಿಳಿದಿದ್ದ ಪ್ರಮುಖ ಆಟಗಾರರು ತಂಡದಲ್ಲಿ ಇಲ್ಲದೇ ಇರುವುದೇ ತಂಡದ ಸೋಲಿಗೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದರೆ, ಮತ್ತೊಂದೆಡೆ ರೋಹಿತ್ ಶರ್ಮಾ ಕಳಪೆ ನಾಯಕತ್ವವೇ ತಂಡದ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಕುರಿತು ಟೀಕೆಗಳು ಶುರುವಾಗುತ್ತಿರುವಾಗಲೇ ಭಾರತ ಮಾಜಿ ಕ್ರಿಕೆಟಿಗರೊಬ್ಬರು ರೋಹಿತ್ ಶರ್ಮಾ ನಾಯಕತ್ವದ ಕುರಿತು ಮಾತನಾಡಿದ್ದು, ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.

ರೋಹಿತ್ ನಾಯಕತ್ವ ತ್ಯಜಿಸಲಿದ್ದಾರೆ
ರೋಹಿತ್ ಶರ್ಮಾ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿಯುವ ಮುನ್ನವೇ ನಾಯಕತ್ವವನ್ನು ತ್ಯಜಿಸಿ ವಿರಾಟ್ ಕೊಹ್ಲಿ ಹೆಜ್ಜೆ ಗುರುತನ್ನು ತುಳಿಯಲಿದ್ದಾರೆ ಎಂದು ಭಾವಿಸುತ್ತೇನೆಂದು ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಹೇಳಿಕೆ ನೀಡಿದ್ದಾರೆ. ರೋಹಿತ್ ಶರ್ಮಾ ನಾಯಕತ್ವವನ್ನು ತ್ಯಜಿಸಿ ಓರ್ವ ಆಟಗಾರನಾಗಿ ಕಣಕ್ಕಿಳಿದು ಉತ್ತಮವಾಗಿ ಬ್ಯಾಟ್ ಬೀಸುವತ್ತ ಗಮನಹರಿಸಬೇಕಿದೆ ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.

ಈತ ಮುಂಬೈನ ನೂತನ ನಾಯಕ
ಇನ್ನೂ ಮುಂದುವರೆದು ಮಾತನಾಡಿರುವ ಸಂಜಯ್ ಮಂಜ್ರೇಕರ್ ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿದ ನಂತರ ಕೀರನ್ ಪೊಲಾರ್ಡ್ ನೂತನ ನಾಯಕನಾಗಿ ಕಣಕ್ಕಿಳಿಯಬೇಕು ಎಂದು ಹೇಳಿದ್ದಾರೆ. ಕೀರನ್ ಪೊಲಾರ್ಡ್‌ರಲ್ಲಿ ಇನ್ನೂ ಸಹ ನಾಯಕತ್ವ ನಿರ್ವಹಿಸುವ ಸಾಮರ್ಥ್ಯವಿದ್ದು, ಅವರು ನಾಯಕನಾಗಿ ಹೆಚ್ಚು ರನ್ ಗಳಿಸಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಬಲ್ಲರು ಎಂದು ಸಂಜಯ್ ಮಂಜ್ರೇಕರ್ ಊಹಿಸಿದ್ದಾರೆ. ಹಾಗೂ ನಾಯಕತ್ವದ ಹೊರೆ ಇಲ್ಲದೇ ರೋಹಿತ್ ಶರ್ಮಾ ಹೆಚ್ಚು ರನ್ ಬಾರಿಸಬಹುದು ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.

ರೋಹಿತ್ ಪಾಂಡ್ಯ ರೀತಿ ಆಡಬೇಕು
ಇತ್ತೀಚೆಗಿನ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳಲ್ಲಿ ರೋಹಿತ್ ಶರ್ಮಾ ನಿಧಾನಗತಿಯಲ್ಲಿ ರನ್ ಕಲೆಹಾಕಿ ಕಡಿಮೆ ಸ್ಟ್ರೈಕ್ ರೇಟ್ ಹೊಂದಿದ್ದು, ದೊಡ್ಡ ರನ್ ಬಾರಿಸುವಲ್ಲಿ ವಿಫರಾಗುತ್ತಿದ್ದಾರೆ ಎಂದಿರುವ ಸಂಜಯ್ ಮಂಜ್ರೇಕರ್ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ರೀತಿ ಬ್ಯಾಟ್ ಬೀಸಬೇಕಿದೆ ಎಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications