ಐಪಿಎಲ್ 2022: MI ಆರಂಭಿಕ ಆಟಗಾರರು ಯಾರೆಂದು ಬಿಚ್ಚಿಟ್ಟ ರೋಹಿತ್; ಪ್ರಮುಖ ಆಟಗಾರನೇ ಅನುಮಾನ!

ವಿಶ್ವದ ಅತಿ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಟೂರ್ನಮೆಂಟ್ ಎಂದು ಖ್ಯಾತಿಯನ್ನು ಹೊಂದಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ ಹದಿನೈದನೇ ಆವೃತ್ತಿ ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳುತ್ತಿದ್ದು, ಟೂರ್ನಿಯ ಪ್ರಥಮ ಪಂದ್ಯ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಮಾರ್ಚ್ 26ರಂದು ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಈ ಬಾರಿಯ ಐಪಿಎಲ್ ಟೂರ್ನಿ ಸಾಕಷ್ಟು ವಿಭಿನ್ನತೆಯಿಂದ ಕೂಡಿರಲಿದ್ದು, ಹೊಸ ತಂಡಗಳು, ಹೊಸ ನಿಯಮಗಳು ಹಾಗೂ ಹೊಸ ಹೊಸ ಆಟಗಾರರು ಟೂರ್ನಿಯಲ್ಲಿರಲಿದ್ದಾರೆ. ಹೌದು, ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ನಡೆದಿರುವ ಕಾರಣ ಈ ಬಾರಿ ನೂತನ ಆಟಗಾರರು ತಂಡಗಳನ್ನು ಸೇರಿದ್ದು ಟೂರ್ನಿ ಸದ್ಯ ವೀಕ್ಷಕರಲ್ಲಿ ಕುತೂಹಲವನ್ನು ಮೂಡಿಸಿದೆ.
ಇನ್ನು ಐಪಿಎಲ್ ಇತಿಹಾಸದಲ್ಲಿ ಒಟ್ಟು ಐದು ಬಾರಿ ಟ್ರೋಫಿಯನ್ನು ಎತ್ತಿ ಹಿಡಿದಿರುವ ಮುಂಬೈ ಇಂಡಿಯನ್ಸ್ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಕಾರಣ ಈ ಬಾರಿಯ ಟೂರ್ನಿಯಲ್ಲಿ ದೊಡ್ಡಮಟ್ಟದ ಕಮ್‌ಬ್ಯಾಕ್ ಮಾಡುವ ಯೋಜನೆಯಲ್ಲಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ಮುಂಬೈ ಇಂಡಿಯನ್ಸ್ ಮಾರ್ಚ್ 27ರಂದು ತನ್ನ ಮೊದಲ ಪಂದ್ಯವನ್ನಾಡಲಿದ್ದು, ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಈ ಬಾರಿಯ ಮೆಗಾ ಹರಾಜಿನಲ್ಲಿ ತನ್ನ ತಂಡದ ಹಳೆ ಪ್ರಮುಖ ಆಟಗಾರರನ್ನು ಮರಳಿ ಖರೀದಿಸುವಲ್ಲಿ ಯಶಸ್ವಿಯಾಗಿರುವ ಮುಂಬೈ ಇಂಡಿಯನ್ಸ್ ಪರ ಈ ಬಾರಿಯ ಟೂರ್ನಿಯಲ್ಲಿ ಯಾರು ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಲಿದ್ದಾರೆ ಎಂಬುದರ ಕುರಿತು ತಂಡದ ನಾಯಕ ರೋಹಿತ್ ಶರ್ಮಾ ಮಾತನಾಡಿದ್ದು, ಈ ಕೆಳಕಂಡಂತೆ ಮಾಹಿತಿ ನೀಡಿದ್ದಾರೆ.

ಮುಂಬೈ ಇಂಡಿಯನ್ಸ್ ಆರಂಭಿಕ ಆಟಗಾರರು ಇವರೇ
ಹಿಂದೂಸ್ತಾನ್ ಟೈಮ್ಸ್ ಜೊತೆ ಮಾತನಾಡಿರುವ ರೋಹಿತ್ ಶರ್ಮಾ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಈ ಹಿಂದಿನ ಆವೃತ್ತಿಯ ರೀತಿಯೇ ತಾನೇ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಹಾಗೂ ತನ್ನ ಜೊತೆ ಇಶಾನ್ ಕಿಶನ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ಎಂದೂ ಸಹ ರೋಹಿತ್ ಶರ್ಮಾ ತಿಳಿಸಿದ್ದಾರೆ. ಇನ್ನು ರಿಟೆನ್ಷನ್ ಪ್ರಕ್ರಿಯೆಯಲ್ಲಿ ಇಶಾನ್ ಕಿಶನ್ ಅವರನ್ನು ರಿಟೈನ್ ಮಾಡಿಕೊಳ್ಳದೇ ಇದ್ದ ಮುಂಬೈ ಇಂಡಿಯನ್ಸ್ ಮೆಗಾ ಹರಾಜಿನಲ್ಲಿ ಬರೋಬ್ಬರಿ 15.25 ಕೋಟಿಗೆ ಖರೀದಿ ಮಾಡಿ ಮತ್ತೆ ತಂಡಕ್ಕೆ ಕರೆ ತರುವಲ್ಲಿ ಯಶಸ್ವಿಯಾಗಿದೆ.

ತಂಡದ ಪ್ರಮುಖ ಆಟಗಾರ ಇನ್ನೂ ಅನುಮಾನ
ವೆಸ್ಟ್ ಇಂಡೀಸ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದ ವೇಳೆ ಗಾಯದ ಸಮಸ್ಯಗೊಳಗಾದ ಸೂರ್ಯಕುಮಾರ್ ಯಾದವ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಫಿಟ್ ಆಗಿದ್ದಾರಾ ಎಂಬ ಪ್ರಶ್ನೆಗಳು ಎದ್ದಿವೆ. ಈ ಪ್ರಶ್ನೆಗೆ ಉತ್ತರ ನೀಡಿರುವ ರೋಹಿತ್ ಶರ್ಮಾ ಸೂರ್ಯಕುಮಾರ್ ಯಾದವ್ ಸದ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಇನ್ನು ಸೂರ್ಯಕುಮಾರ್ ಯಾದವ್ ಲಭ್ಯತೆಯ ಕುರಿತು ಈಗಲೇ ಏನನ್ನೂ ಹೇಳಲಾರೆ ಎಂದಿರುವ ರೋಹಿತ್ ಶರ್ಮಾ ಚೊಚ್ಚಲ ಪಂದ್ಯದಲ್ಲಿ ಅವರು ಭಾಗವಹಿಸುತ್ತಾರೋ ಅಥವಾ ಇಲ್ಲವೋ ಎಂಬುದರ ಕುರಿತು ಖಚಿತತೆ ಇಲ್ಲ ಎಂದಿದ್ದು, ಆದಷ್ಟು ಬೇಗ ಆತನನ್ನು ಕರೆ ತರಲಿದ್ದೇವೆ ಎಂದಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡ
ರೋಹಿತ್ ಶರ್ಮಾ ( ನಾಯಕ ), ಸೂರ್ಯಕುಮಾರ್ ಯಾದವ್, ಕೀರಾನ್ ಪೊಲಾರ್ಡ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಮುರುಗನ್ ಅಶ್ವಿನ್, ಜಯದೇವ್ ಉದದ್ಕತ್, ಮಯಾಂಕ್ ಮಾರ್ಕಾಂಡೆ, ಎನ್ ತಿಲಕ್ ವರ್ಮಾ, ಸಂಜಯ್ ಯಾದವ್, ಜೋಫ್ರಾ ಆರ್ಚರ್, ಡೇನಿಯಲ್ ಸಾಮ್ಸ್, ಟೈಮಲ್ ಡೇವಿಡ್, ಅರ್ಷದಿಮಿಲ್ಸ್, ಖಾನ್, ಅನ್ಮೋಲ್ಪ್ರೀತ್ ಸಿಂಗ್, ರಮಣದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಫ್ಯಾಬಿಯನ್ ಅಲೆನ್, ಆರ್ಯನ್ ಜುಯಲ್, ರಿಲೆ ಮೆರೆಡಿತ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications