ಎಲ್ಲಿ ತಪ್ಪಾಗ್ತಿದೆ ಎಂದು ಅರ್ಥವಾಗ್ತಿಲ್ಲ; ಮುಂಬೈನ ಸತತ 6 ಸೋಲಿಗೆ ಹೊಣೆ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್ ಶರ್ಮಾ

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಸಾಲುಸಾಲು ಪಂದ್ಯಗಳಲ್ಲಿ ಸೋಲುವುದರ ಮೂಲಕ ಅಕ್ಷರಶಃ ನೆಲಕಚ್ಚಿದೆ.
ಹೌದು, ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 5 ಬಾರಿ ಟ್ರೋಫಿಯನ್ನು ಗೆಲ್ಲುವುದರ ಮೂಲಕ ಅತಿ ಹೆಚ್ಚು ಬಾರಿ ಟ್ರೋಫಿಯನ್ನು ಎತ್ತಿ ಹಿಡಿದಿರುವಂತಹ ಬಲಿಷ್ಠ ತಂಡ ಎಂಬ ಹೆಗ್ಗಳಿಕೆಯನ್ನು ಹೊಂದಿರುವಂತಹ ಮುಂಬೈ ಇಂಡಿಯನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿನ ತನ್ನ ಮೊದಲ 6 ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳಲ್ಲಿಯೂ ಕೂಡ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಮಕಾಡೆ ಮಲಗಿದೆ.
ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲುವುದರ ಮೂಲಕ ಕೆಟ್ಟ ಆರಂಭವನ್ನು ಪಡೆದುಕೊಂಡ ಮುಂಬೈ ಇಂಡಿಯನ್ಸ್ 6 ಪಂದ್ಯಗಳು ಕಳೆದರೂ ಸಹ ಗೆಲುವಿನ ಖಾತೆ ತೆರೆಯಲಾಗದೇ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ಇನ್ನು ತನ್ನ 6ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಾಟ ನಡೆಸಿದ ಮುಂಬೈ ಇಂಡಿಯನ್ಸ್ 200 ರನ್‌ಗಳ ಕಠಿಣ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಗಿ 18 ರನ್‌ಗಳ ಸೋಲನ್ನು ಕಂಡಿತು. ಇನ್ನು ಈ ಪಂದ್ಯದಲ್ಲಿಯೂ ಕಳಪೆ ಪ್ರದರ್ಶನ ನೀಡಿದ ನಾಯಕ ರೋಹಿತ್ ಶರ್ಮಾ ಪಂದ್ಯ ಮುಗಿದ ನಂತರ ಮಾತನಾಡಿದ್ದು, ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಸಾಲು ಸಾಲು ಪಂದ್ಯಗಳಲ್ಲಿ ಸೋಲನ್ನು ಅನುಭವಿಸುತ್ತಿರುವುದಕ್ಕೆ ಹೊಣೆ ಯಾರೆಂಬುದನ್ನು ಈ ಕೆಳಕಂಡಂತೆ ತಿಳಿಸಿದ್ದಾರೆ.

ಎಲ್ಲಿ ತಪ್ಪಾಗುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ
ಟೂರ್ನಿಯಲ್ಲಿ ತಂಡದ ಪ್ರದರ್ಶನದ ಕುರಿತು ಮಾತನಾಡಿರುವ ರೋಹಿತ್ ಶರ್ಮಾ ತಪ್ಪು ಎಲ್ಲಿ ಆಗುತ್ತಿದೆ ಎಂಬುದೇ ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ತಪ್ಪು ಎಲ್ಲಿ ಆಗುತ್ತಿದೆ ಎಂಬುದು ತಿಳಿದಿದ್ದರೆ ನಾನು ತಿದ್ದಿಕೊಳ್ಳುತ್ತಿದ್ದೆ ಆದರೆ, ಯಾವ ಹಂತದಲ್ಲಿ ತಪ್ಪಾಗುತ್ತಿದೆ ಎಂಬುದೇ ತಿಳಿಯುತ್ತಿಲ್ಲ ಎಂದು ರೋಹಿತ್ ಶರ್ಮಾ ನಿರಾಸೆಯಿಂದ ಮಾತನಾಡಿದ್ದಾರೆ. ಹಾಗೂ ಪ್ರತಿ ಪಂದ್ಯಕ್ಕೂ ಕೂಡ ತನ್ನನ್ನು ತಾನು ಸರಿಯಾದ ರೀತಿಯಲ್ಲಿಯೇ ಸಿದ್ಧಪಡಿಸಿಕೊಂಡು ಕಣಕ್ಕಿಳಿಯುತ್ತಿದ್ದರೂ ಸಹ ತಪ್ಪನ್ನು ತಿದ್ದಿಕೊಳ್ಳಲು ಆಗುತ್ತಿಲ್ಲ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ಹಾಗೂ ಮುಂದಿನ ಪಂದ್ಯಗಳಲ್ಲಿ ತಪ್ಪನ್ನು ತಿದ್ದಿಕೊಂಡು ಕಮ್ ಬ್ಯಾಕ್ ಮಾಡುವುದಾಗಿಯೂ ರೋಹಿತ್ ಶರ್ಮಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸತತ ಸೋಲಿನ ಹೊಣೆ
ಇನ್ನೂ ಮುಂದುವರಿದು ಮಾತನಾಡಿರುವ ರೋಹಿತ್ ಶರ್ಮಾ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಸಾಲು ಸಾಲು ಸೋಲುಗಳನ್ನು ಕಂಡು ವಿಫಲವಾಗಿರುವುದರ ಹೊಣೆಯನ್ನು ಸ್ವತಃ ತಾನೇ ಹೊರುತ್ತೇನೆಂದು ತಿಳಿಸಿದ್ದಾರೆ. ಹಾಗೂ ತಂಡ ಎಡವುತ್ತಿರುವುದು ಎಲ್ಲಿ ಎಂಬುದನ್ನು ತಿಳಿದು ಯಶಸ್ಸಿನ ಹಾದಿಗೆ ಮರಳುವ ವಿಶ್ವಾಸವನ್ನು ರೋಹಿತ್ ಶರ್ಮಾ ವ್ಯಕ್ತಪಡಿಸಿದ್ದಾರೆ ಮತ್ತು ಈ ಸೋಲುಗಳಲ್ಲಿಯೇ ಎಲ್ಲವೂ ಮುಗಿದು ಹೋಗಲ್ಲ ಎಂದೂ ಸಹ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಟೂರ್ನಿಯಲ್ಲಿ ರೋಹಿತ್ ಫ್ಲಾಪ್ ಶೋ
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ನೆಲಕಚ್ಚಿದ್ದು ಮಾತ್ರವಲ್ಲದೇ ನಾಯಕ ರೋಹಿತ್ ಶರ್ಮಾ ಕೂಡ ವೈಯಕ್ತಿಕವಾಗಿ ಫ್ಲಾಪ್ ಆಗಿದ್ದಾರೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 6 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ 114 ರನ್ ಗಳಿಸುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ. ಹಾಗೂ ಟೂರ್ನಿಯಲ್ಲಿ ಒಂದೇ ಒಂದು ಅರ್ಧ ಶತಕವನ್ನೂ ಬಾರಿಸದ ರೋಹಿತ್ ಶರ್ಮಾ ಗರಿಷ್ಠ 41 ರನ್ ಕಲೆಹಾಕಿದ್ದಾರೆ..
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications