ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs DC: ಮಿಂಚಿದ ಬೌಲರ್ಸ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಕಂಬ್ಯಾಕ್ ಮಾಡಿದ ಆರ್‌ಸಿಬಿ

IPL 2022: Royal Challengers Bangalore beat Delhi Capitals by 16 runs

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಆರನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 16 ರನ್‌ಗಳ ಗೆಲುವನ್ನು ಸಾಧಿಸಿದೆ.

IPL 2022: ಟೂರ್ನಿಯ ಮೂರನೇ ವಾರದಲ್ಲಿ ಉತ್ತಮ ಪ್ರದರ್ಶನ ನೀಡಲಾಗದೇ ಫ್ಲಾಪ್ ಆದ 11 ಆಟಗಾರರಿವರು!IPL 2022: ಟೂರ್ನಿಯ ಮೂರನೇ ವಾರದಲ್ಲಿ ಉತ್ತಮ ಪ್ರದರ್ಶನ ನೀಡಲಾಗದೇ ಫ್ಲಾಪ್ ಆದ 11 ಆಟಗಾರರಿವರು!

ಈ ಬಾರಿಯ ಐಪಿಎಲ್ ಟೂರ್ನಿಯ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಟ ನಡೆಸಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡು ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 190 ರನ್‌ಗಳ ಕಠಿಣ ಗುರಿಯನ್ನು ನೀಡಿತು.

ಎಲ್ಲಿ ತಪ್ಪಾಗ್ತಿದೆ ಎಂದು ಅರ್ಥವಾಗ್ತಿಲ್ಲ; ಮುಂಬೈನ ಸತತ 6 ಸೋಲಿಗೆ ಹೊಣೆ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್ ಶರ್ಮಾಎಲ್ಲಿ ತಪ್ಪಾಗ್ತಿದೆ ಎಂದು ಅರ್ಥವಾಗ್ತಿಲ್ಲ; ಮುಂಬೈನ ಸತತ 6 ಸೋಲಿಗೆ ಹೊಣೆ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್ ಶರ್ಮಾ

ಇನ್ನು ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ದಾಳಿಗೆ ತತ್ತರಿಸಿದೆ. 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿದ ಡೆಲ್ಲಿ ಕ್ಯಾಪಿಟಲ್ಸ್ 16 ರನ್‌ಗಳ ಅಂತರದಲ್ಲಿ ಸೋಲನ್ನು ಅನುಭವಿಸಿದೆ. ಇನ್ನು ಈ ಗೆಲುವಿನ ಮೂಲಕ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಶಸ್ಸಿನ ಹಾದಿಗೆ ಮರಳಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಫಾಫ್ ಡು ಪ್ಲೆಸಿಸ್ ಮತ್ತು ಅನುಜ್ ರಾವತ್ ತಂಡಕ್ಕೆ ಭದ್ರ ಬುನಾದಿ ಹಾಕಿಕೊಡುವಲ್ಲಿ ಮತ್ತೊಮ್ಮೆ ವಿಫಲರಾಗಿದ್ದಾರೆ. ಅನುಜ್ ರಾವತ್ ಮೊದಲನೇ ಎಸೆತದಲ್ಲಿಯೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕೌಟ್ ಆದರೆ, ನಾಯಕ ಫಾಫ್ ಡು ಪ್ಲೆಸಿಸ್ 8 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು ಹಾಗೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 12 ರನ್ ಗಳಿಸಿ ಔಟ್ ಆದರು. ಹೀಗೆ ಆರಂಭಿಕ ಆಘಾತಕ್ಕೆ ಒಳಗಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಸರೆಯಾದ ಗ್ಲೆನ್ ಮ್ಯಾಕ್ಸ್‌ವೆಲ್ 34 ಎಸೆತಗಳನ್ನು ಎದುರಿಸಿ 55 ರನ್ ಚಚ್ಚಿದರು. ಇನ್ನು ಮ್ಯಾಕ್ಸ್‌ವೆಲ್ ಔಟ್ ಆದ ಬಳಿಕ ಮತ್ತೆ ಸಂಕಷ್ಟಕ್ಕೆ ಸಿಲುಕಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಜೋಡಿ 97 ರನ್‌ಗಳ ಜತೆಯಾಟವಾಡಿ ಆಸರೆಯಾಯಿತು. ದಿನೇಶ್ ಕಾರ್ತಿಕ್ 34 ಎಸೆತಗಳಲ್ಲಿ ಅಜೇಯ 66 ರನ್ ಚಚ್ಚಿದರೆ, ಶಹಬಾಜ್ ಅಹ್ಮದ್ 21 ಎಸೆತಗಳಲ್ಲಿ ಅಜೇಯ 32 ರನ್ ಸಿಡಿಸಿದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್, ಅಕ್ಷರ್ ಪಟೇಲ್ ಮತ್ತು ಕುಲ್ ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್

ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀಡಿದ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಡೇವಿಡ್ ವಾರ್ನರ್ 38 ಎಸೆತಗಳಲ್ಲಿ 66 ರನ್ ಬಾರಿಸಿ ಅಬ್ಬರಿಸಿದರೆ, ಮಧ್ಯಮ ಕ್ರಮಾಂಕದಲ್ಲಿ 17 ಎಸೆತಗಳಿಗೆ 34 ರನ್ ಬಾರಿಸಿದ ರಿಷಭ್ ಪಂತ್ ಪಂದ್ಯ ಗೆಲ್ಲಿಸುವ ಭರವಸೆಯನ್ನು ಆ ಕ್ಷಣಕ್ಕೆ ಹುಟ್ಟುಹಾಕಿದ್ದರು. ಇನ್ನುಳಿದಂತೆ ತಂಡದ ಪರ ಪೃಥ್ವಿ ಶಾ 16, ಮಿಚೆಲ್ ಮಾರ್ಷ್ 14, ರೋವ್ಮನ್ ಪೊವೆಲ್ 0, ಲಲಿತ್ ಯಾದವ್ 1, ಶಾರ್ದೂಲ್ ಠಾಕೂರ್ 17, ಅಕ್ಷರ್ ಪಟೇಲ್ ಅಜೇಯ 10 ಮತ್ತು ಕುಲ್ ದೀಪ್ ಯಾದವ್ ಅಜೇಯ 10 ರನ್ ದಾಖಲಿಸಿದರು.

ದಿನೇಶ್ ಕಾರ್ತಿಕ್ DC ವಿರುದ್ಧದ ಪಂದ್ಯದಲ್ಲಿ ಭರ್ಜರಿ ಆಟ | Oneindia Kannada
ಮಿಂಚಿದ ರಾಯಲ್ ಚಾಲೆಂಜರ್ಸ್ ಬೌಲಿಂಗ್ ವಿಭಾಗ

ಮಿಂಚಿದ ರಾಯಲ್ ಚಾಲೆಂಜರ್ಸ್ ಬೌಲಿಂಗ್ ವಿಭಾಗ

ಇನ್ನು ಕಳೆದ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಪ್ರದರ್ಶನವನ್ನು ನೋಡಿದ್ದ ಕ್ರಿಕೆಟ್ ಪ್ರೇಮಿಗಳು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಈ ಗುರಿಯನ್ನು ಬೆನ್ನಟ್ಟಲು ಬಿಡದೇ ರಾಯಲ್ ಚಾಲೆಂಜರ್ಸ್ ಬೌಲರ್‌ಗಳು ಬೌಲರ್‌ಗಳು ಎದುರಾಳಿಗಳನ್ನು ಕಟ್ಟಿ ಹಾಕುತ್ತಾರಾ ಎಂಬ ಅನುಮಾನ ಮೂಡಿತ್ತು. ಆದರೆ ಈ ಅನುಮಾನಗಳನ್ನು ಹುಸಿಗೊಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ತಂಡದ ಪರ ಜೋಶ್ ಹೇಜಲ್ ವುಡ್ 3 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 2 ವಿಕೆಟ್ ಮತ್ತು ವನಿಂದು ಹಸರಂಗ 1 ವಿಕೆಟ್ ಪಡೆದರು.

ಹಾಗೂ ಪಂದ್ಯದಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Story first published: Sunday, April 17, 2022, 0:25 [IST]
Other articles published on Apr 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X