ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

GT vs RCB: ಅಬ್ಬರಿಸಿದ ಕಿಂಗ್ ಕೊಹ್ಲಿ, ಮ್ಯಾಕ್ಸಿ; ಟೇಬಲ್ ಟಾಪರ್ಸ್ ವಿರುದ್ಧ ಗೆದ್ದ ಆರ್‌ಸಿಬಿ ಪ್ಲೇಆಫ್ ಆಸೆ ಜೀವಂತ

IPL 2022: Royal Challengers Bangalore beats Gujarat Titans by 8 wickets

ಕಳೆದ ಮಾರ್ಚ್ ತಿಂಗಳ ಅಂತಿಮ ವಾರದಲ್ಲಿ ಅರಂಭವಾದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಇದೀಗ ಮುಕ್ತಾಯದ ಹಂತಕ್ಕೆ ತಲುಪಿದ್ದು, ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲು ಫಾಫ್ ಡು ಪ್ಲೆಸಿಸ್ ಪಡೆ ಇಂದು ( ಮೇ 19 ) ಅಗ್ನಿಪರೀಕ್ಷೆಗೆ ಇಳಿದು ಟೇಬಲ್ ಟಾಪರ್ಸ್ ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಪಂದ್ಯದಲ್ಲಿ ಅಬ್ಬರಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು

ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 18.4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 170 ರನ್ ಬಾರಿಸಿದೆ.

GT vs RCB: ಗುಜರಾತ್ ವಿರುದ್ಧ ಆರ್‌ಸಿಬಿ ಸೋತರೆ ಈ ತಂಡ ಪ್ಲೇಆಫ್‌ಗೆ; ಗೆದ್ದರೆ ಈ 2 ತಂಡ ಮನೆಗೆ!GT vs RCB: ಗುಜರಾತ್ ವಿರುದ್ಧ ಆರ್‌ಸಿಬಿ ಸೋತರೆ ಈ ತಂಡ ಪ್ಲೇಆಫ್‌ಗೆ; ಗೆದ್ದರೆ ಈ 2 ತಂಡ ಮನೆಗೆ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಅದ್ಭುತ ಆರಂಭವನ್ನು ಕಟ್ಟಿಕೊಟ್ಟರು. ಈ ಜೋಡಿ 115 ರನ್‌ಗಳ ಅಮೋಘ ಜತೆಯಾಟವಾಡುವ ಮೂಲಕ ಅಬ್ಬರಿಸಿತು. ಫಾಫ್ ಡುಪ್ಲೆಸಿಸ್ 38 ಎಸೆತಗಳಲ್ಲಿ 44 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 73 ಬಾರಿಸಿ ಅಬ್ಬರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್‌ವೆಲ್ 18 ಎಸೆತಗಳಲ್ಲಿ ಅಜೇಯ 44 ರನ್ ಬಾರಿಸಿ ಅಬ್ಬರದ ಬ್ಯಾಟಿಂಗ್ ನಡೆಸಿದರೆ, ದಿನೇಶ್ ಕಾರ್ತಿಕ್‌ ಅಜೇಯ 2 ರನ್ ಕಲೆಹಾಕಿದರು. ಹೀಗೆ ಗುಜರಾತ್ ಟೈಟನ್ಸ್ ವಿರುದ್ಧ್ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದು, ತನ್ನ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು, ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಿಂದ ಹೊರಬಿದ್ದಿವೆ. ಇನ್ನು ಶನಿವಾರ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಶಸ್ವಿಯಾಗಿ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ.

ಗುಜರಾತ್ ಟೈಟನ್ಸ್ ಪರ ರಶೀದ್ ಖಾನ್ ಎರಡು ವಿಕೆಟ್ ಪಡೆದದ್ದು ಬಿಟ್ಟರೆ ಉಳಿದ ಯಾವುದೇ ಬೌಲರ್ ಕೂಡ ಯಾವುದೇ ವಿಕೆಟ್ ಪಡೆಯಲಿಲ್ಲ.

ಗುಜರಾತ್ ಟೈಟನ್ಸ್ ಇನ್ನಿಂಗ್ಸ್:

ಗುಜರಾತ್ ಟೈಟನ್ಸ್ ತಂಡದ ಆರಂಭಿಕರಾಗಿ ಕಣಕ್ಕಿಳಿದ ಶುಬ್‌ಮನ್ ಗಿಲ್ ಕೇವಲ 1 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರೆ, ವೃದ್ಧಿಮಾನ್ ಸಹಾ 22 ಎಸೆತಗಳಲ್ಲಿ 31 ರನ್ ಕಲೆಹಾಕಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಥ್ಯೂ ವೇಡ್ 16 ರನ್ ಕಲೆಹಾಕಿದರೆ, ಡೇವಿಡ್ ಮಿಲ್ಲರ್ 25 ಎಸೆತಗಳಲ್ಲಿ 34 ರನ್, ರಾಹುಲ್ ತೆವಾಟಿಯಾ 2 ರನ್ ಕಲೆಹಾಕಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಹಾರ್ದಿಕ್ ಪಾಂಡ್ಯ 47 ಎಸೆತಗಳಲ್ಲಿ ಅಜೇಯ 62 ರನ್ ಕಲೆಹಾಕಿದರೆ, ಇನ್ನಿಂಗ್ಸ್‌ನ ಅಂತಿಮ ಹಂತದಲ್ಲಿ ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಶೀದ್ ಖಾನ್ 6 ಎಸೆತಗಳಲ್ಲಿ ಅಜೇಯ 19 ರನ್ ಬಾರಿಸಿದರು.

ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಜೋಶ್ ಹೇಜಲ್‌ವುಡ್ 2 ವಿಕೆಟ್ ಪಡೆದರೆ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ವನಿಂದು ಹಸರಂಗ ತಲಾ ಒಂದೊಂದು ವಿಕೆಟ್ ಪಡೆದರು.

GT vs RCB: ಗುಜರಾತ್ ವಿರುದ್ಧದ ಪಂದ್ಯದಲ್ಲಿ ಸಿರಾಜ್‌ರನ್ನು ಹೊರಹಾಕಿದ್ದೇಕೆ? ಕಾರಣ ಬಿಚ್ಚಿಟ್ಟ ಡು ಪ್ಲೆಸಿಸ್!GT vs RCB: ಗುಜರಾತ್ ವಿರುದ್ಧದ ಪಂದ್ಯದಲ್ಲಿ ಸಿರಾಜ್‌ರನ್ನು ಹೊರಹಾಕಿದ್ದೇಕೆ? ಕಾರಣ ಬಿಚ್ಚಿಟ್ಟ ಡು ಪ್ಲೆಸಿಸ್!

ಆಡುವ ಬಳಗಗಳು:

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ

ರೋಹಿತ್ ಶರ್ಮಾ ನೀಡಿದ ಈ ಹೇಳಿಕೆಯಿಂದ ರೊಚ್ಚಿಗೆದ್ದ RCB ಅಭಿಮಾನಿಗಳು | Oneindia Kannada

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೊರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಸಿದ್ದಾರ್ಥ್ ಕೌಲ್, ಜೋಶ್ ಹ್ಯಾಜಲ್‌ವುಡ್

Story first published: Friday, May 20, 2022, 9:33 [IST]
Other articles published on May 20, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X