RCB vs SRH: ಹಸರಂಗ ಮ್ಯಾಜಿಕ್; ಬೃಹತ್ ಗೆಲುವು ಸಾಧಿಸಿದ ಆರ್‌ಸಿಬಿ ಪ್ಲೇ ಆಫ್ ಹಾದಿ ಮತ್ತಷ್ಟು ಸುಗಮ

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 54ನೇ ಪಂದ್ಯ ಇಂದು ( ಮೇ 8 ) ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗಿತು. ಈ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ಬಳಗ ಕೇನ್ ವಿಲಿಯಮ್ಸನ್ ಬಳಗವನ್ನು ಸದೆಬಡಿದು 67 ರನ್‌ಗಳ ಬೃಹತ್ ಜಯ ಸಾಧಿಸಿದೆ. ಹಾಗೂ ಈ ಗೆಲುವಿನ ಮೂಲಕ ಟೂರ್ನಿಯಲ್ಲಿ ಏಳನೇ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇ ಆಫ್ ಪ್ರವೇಶಿಸುವ ಹಾದಿ ಮತ್ತಷ್ಟು ಸುಗಮವಾಗಿದೆ ಎಂದು ಹೇಳಬಹುದು.
ಹೌದು ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಬಾರಿಸಿ ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 193 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಸನ್ ರೈಸರ್ಸ್ ಹೈದರಾಬಾದ್ 19.2 ಓವರ್‌ಗಳಲ್ಲಿ 125 ರನ್‌ಗಳಿಗೆ ಆಲ್ ಔಟ್ ಆಗಿ ಹೀನಾಯ ಸೋಲನ್ನು ಅನುಭವಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್
ಪಂದ್ಯದಲ್ಲಿ ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಶೂನ್ಯ, ನಾಯಕ ಫಾಫ್ ಡು ಪ್ಲೆಸಿಸ್ 50 ಎಸೆತಗಳಲ್ಲಿ ಅಜೇಯ 73 ರನ್ ಕಲೆಹಾಕಿದರು, ಕೊಹ್ಲಿ ಔಟ್ ಆದ ನಂತರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಒತ್ತಡದಲ್ಲಿ ಬ್ಯಾಟ್ ಬೀಸಿದ ರಜತ್ ಪಟಿದಾರ್ 38 ಎಸೆತಗಳಲ್ಲಿ 48 ರನ್ ಬಾರಿಸಿ ಉತ್ತಮ ಆಟವನ್ನಾಡಿದರು, ಗ್ಲೆನ್ ಮ್ಯಾಕ್ಸ್‌ವೆಲ್ 24 ಎಸೆತಗಳಲ್ಲಿ 33 ರನ್ ಬಾರಿಸಿದರು ಹಾಗೂ ಅಂತಿಮ ಹಂತದಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ 8 ಎಸೆತಗಳಲ್ಲಿ ಅಜೇಯ 30 ರನ್ ಬಾರಿಸಿ ಅಬ್ಬರಿಸಿದರು.

ಸನ್ ರೈಸರ್ಸ್ ಹೈದರಾಬಾದ್ ಇನ್ನಿಂಗ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ನೀಡಿದ್ದ ಬೃಹತ್ ಮೊತ್ತವನ್ನು ಬೆನ್ನತ್ತಲು ಯತ್ನಿಸಿದ ಸನ್ ರೈಸರ್ಸ್ ಹೈದರಾಬಾದ್ ಮೊದಲ ಓವರ್‌ನಲ್ಲಿಯೇ ಆರಂಭಿಕ ಆಟಗಾರರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿಕೊಂಡಿತು. ಅಭಿಷೇಕ್ ಶರ್ಮಾ ಮತ್ತು ಕೇನ್ ವಿಲಿಯಮ್ಸನ್ ಶೂನ್ಯಕ್ಕೆ ಔಟ್ ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಾಹುಲ್ ತ್ರಿಪಾಠಿ 37 ಎಸೆತಗಳಲ್ಲಿ 58 ರನ್ ಬಾರಿಸಿದರು. ಇನ್ನುಳಿದಂತೆ ಏಡನ್ ಮರ್ಕ್ರಮ್ 21, ನಿಕೋಲಸ್ ಪೂರನ್ 19, ಜಗದೀಶ ಸುಚಿತ್ 2, ಶಶಾಂಕ್ ಸಿಂಗ್ 8, ಕಾರ್ತಿಕ್ ತ್ಯಾಗಿ 0, ಭುವನೇಶ್ವರ್ ಕುಮಾರ್ 8, ಉಮ್ರಾನ್ ಮಲಿಕ್ 0 ಮತ್ತು ಫಜಲ್ ಹತ್ತು ಫರೂಕಿ ಅಜೇಯ 2 ರನ್ ಗಳಿಸಿದರು. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ದಾಳಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಅಕ್ಷರಶಃ ತತ್ತರಿಸಿತು.

ಆರ್‌ಸಿಬಿ ಉತ್ತಮ ಬೌಲಿಂಗ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ವನಿಂದು ಹಸರಂಗ 5 ವಿಕೆಟ್ ಪಡೆದರೆ, ಜೋಶ್ ಹೇಜಲ್ ವುಡ್ 2, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.
ವಿಶೇಷವಾಗಿ ವನಿಂದು ಹಸರಂಗ 4 ಓವರ್ ಬೌಲಿಂಗ್ ಮಾಡಿ 1 ಮೇಡನ್ ಸಹಿತ ಕೇವಲ 18 ರನ್ ನೀಡಿ 5 ವಿಕೆಟ್ ಗೊಂಚಲು ಪಡೆದರು. ಹೀಗೆ ಉತ್ತಮ ಪ್ರದರ್ಶನ ನೀಡಿದ ವನಿಂದು ಹಸರಂಗ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications