ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಆರ್‌ಸಿಬಿಗೆ ಎಬಿಡಿ ವಾಪಸ್; ಮಾರ್ಚ್ 12ಕ್ಕೆ ಈತನ ಪಾಲಾಗಲಿದೆ ನಾಯಕತ್ವ

IPL 2022: Royal Challengers Bangalore likely to appoint Faf as captian and Ab de Villiers as mentor

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯ ಮಾರ್ಚ್ 26ರಂದು ನಡೆಯಲಿದ್ದು, ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯ ಸಂಜೆ 7.30ಕ್ಕೆ ನಿಗದಿಯಾಗಿದ್ದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸುತ್ತಿದ್ದು, ಈ 10 ತಂಡಗಳನ್ನು ಎರಡು ಗುಂಪುಗಳನ್ನಾಗಿ ವಿಭಜಿಸಲಾಗಿದೆ. ಗ್ರೂಪ್ 'ಎ'ನಲ್ಲಿ ಕೋಲ್ಕತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್, ರಾಜಸ್ತಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹೊಸ ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿದ್ದರೆ, ಗ್ರೂಪ್ 'ಬಿ'ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳಿವೆ. ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದಲ್ಲಿ ಎಲ್ಲಾ ತಂಡಗಳು ತಮ್ಮ ಗುಂಪಿನಲ್ಲಿರುವ ತಂಡಗಳ ವಿರುದ್ಧ 2 ಪಂದ್ಯಗಳಲ್ಲಿ ಸೆಣಸಾಟ ನಡೆಸಿದರೆ, ಇತರೆ ಗುಂಪಿನ ತಂಡಗಳ ಜೊತೆ ಒಂದು ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ. ಸದ್ಯ ಬಿಡುಗಡೆಗೊಂಡಿರುವ ವೇಳಾಪಟ್ಟಿಯ ಪ್ರಕಾರ ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಎಲ್ಲಾ ಪಂದ್ಯಗಳು ಮಹಾರಾಷ್ಟ್ರದಲ್ಲಿಯೇ ನಡೆಯಲಿದ್ದು, ಮುಂಬೈನ ವಾಂಖೆಡೆ, ಬ್ರಬೋರ್ನ್ ಕ್ರೀಡಾಂಗಣ, ಡಿವೈ ಪಾಟೀಲ್ ಕ್ರೀಡಾಂಗಣ ಮತ್ತು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯಲಿವೆ. ಲೀಗ್ ಹಂತದ ಒಟ್ಟು 70 ಪಂದ್ಯಗಳು 58 ದಿನಗಳಲ್ಲಿ ನಡೆಯಲಿದ್ದು, ಟೂರ್ನಿಯ ಈ ವೇಳಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದ ಬೆನ್ನಲ್ಲೇ ನಿರೀಕ್ಷೆಗಳು ಹೆಚ್ಚಾಗಿ ಯಾವ ತಂಡಗಳು ಹೆಚ್ಚು ಪಂದ್ಯಗಳನ್ನು ಗೆಲ್ಲಲಿವೆ ಎಂಬ ಚರ್ಚೆಗಳು ಆರಂಭಗೊಂಡಿವೆ. ಒಂದೆಡೆ ಟೂರ್ನಿಯ ಪಂದ್ಯಗಳ ಆಯೋಜನೆ ಕುರಿತು ಚರ್ಚೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕ ಯಾರಾಗಬಹುದು ಎಂಬ ಪ್ರಶ್ನೆ ಎದ್ದಿದೆ.

DC IPL 2022 Schedule : ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆDC IPL 2022 Schedule : ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಇನ್ನು ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕ ಗ್ಲೆನ್ ಮ್ಯಾಕ್ಸ್‌ವೆಲ್ ಆಗಲಿದ್ದಾರೆ ಎಂಬ ಮಾತುಗಳು ಹೆಚ್ಚಾಗಿ ಕೇಳಿಬರುತ್ತಿದ್ದವು. ಆದರೆ ಮೆಗಾ ಹರಾಜಿನಲ್ಲಿ ನಾಯಕತ್ವ ನಿಭಾಯಿಸಬಲ್ಲ ಆಟಗಾರರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಖರೀದಿಸಿದ ನಂತರ ಫಾಫ್ ಡು ಪ್ಲೆಸಿಸ್ ಮತ್ತು ದಿನೇಶ್ ಕಾರ್ತಿಕ್ ಅವರ ಹೆಸರುಗಳೂ ಕೂಡ ಹೆಚ್ಚಾಗಿ ಕೇಳಿಬರುತ್ತಿದ್ದು, ನಾಯಕತ್ವ ಯಾರ ಪಾಲಾಗಲಿದೆ ಎಂಬುದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾರ್ಚ್ ೧೨ರಂದು ಉತ್ತರ ನೀಡಲಿದೆ. ಹೌದು, ತನ್ನ ಮುಂದಿನ ನಾಯಕನನ್ನು ಮಾರ್ಚ್ ೧೨ರಂದು ಘೋಷಿಸುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ತಿಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನ ಮ್ಯೂಸಿಯಮ್ ರಸ್ತೆಯಲ್ಲಿ ಆಯೋಜಿಸಲಾಗಿರುವ ವಿಶೇಷ ಕಾರ್ಯಕ್ರಮದ ಮೂಲಕ ನೂತನ ನಾಯಕನನ್ನು ಘೋಷಿಸುವುದಾಗಿ ತಿಳಿಸಿದೆ.

ಪಾಕ್ vs ಆಸ್ಟ್ರೇಲಿಯಾ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹವಾ; ವಿಭಿನ್ನ ಬೇಡಿಕೆ ಇಟ್ಟ ಪಾಕ್ ಪ್ರೇಕ್ಷಕಪಾಕ್ vs ಆಸ್ಟ್ರೇಲಿಯಾ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹವಾ; ವಿಭಿನ್ನ ಬೇಡಿಕೆ ಇಟ್ಟ ಪಾಕ್ ಪ್ರೇಕ್ಷಕ

ಆದರೆ ಈ ಟ್ವೀಟ್‌ನಲ್ಲಿಯೂ ನಾಯಕ ಯಾರಾಗಬಹುದು ಎಂಬುದನ್ನು ಆರ್‌ಸಿಬಿ ಫ್ರಾಂಚೈಸಿ ಬಿಟ್ಟುಕೊಡದೇ ಇದ್ದು, ಐಪಿಎಲ್ ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಈ ಕೆಳಕಂಡ ಆಟಗಾರನನ್ನು ಮಾರ್ಚ್ ೧೨ರಂದು ನಾಯಕನನ್ನಾಗಿ ಆರ್‌ಸಿಬಿ ಫ್ರಾಂಚೈಸಿ ಘೋಷಿಸಲಿದೆ ಹಾಗೂ ಎಬಿಡಿ ವಾಪಸ್ ಆರ್‌ಸಿಬಿಗೆ ಮರಳಲಿದ್ದಾರೆ.

ಈತನೇ ಆರ್‌ಸಿಬಿ ನಾಯಕ

ಈತನೇ ಆರ್‌ಸಿಬಿ ನಾಯಕ

ಮಾರ್ಚ್ ೧೨ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಶೇಷ ಕಾರ್ಯಕ್ರಮ ಏರ್ಪಡಿಸಿ ನೂತನ ನಾಯಕನನ್ನು ಘೋಷಿಸಲಿದ್ದೇವೆ ಎಂದು ಮಾಹಿತಿಯನ್ನು ನೀಡಿದ್ದು, ಬಲ್ಲ ಮೂಲಗಳು ಈ ದಿನದಂದು ಆರ್‌ಸಿಬಿ ಫಾಫ್ ಡು ಪ್ಲೆಸಿಸ್ ಅವರನ್ನೇ ನೂತನ ನಾಯಕನನ್ನಾಗಿ ನೇಮಿಸುವುದು ಖಚಿತ ಎನ್ನಲಾಗುತ್ತಿದೆ.

ಆರ್‌ಸಿಬಿಗೆ ಎಬಿಡಿ ವಾಪಸ್

ಆರ್‌ಸಿಬಿಗೆ ಎಬಿಡಿ ವಾಪಸ್

ಇನ್ನು ೨೦೧೧ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿ ಕಳೆದ ಆವೃತ್ತಿಯವರೆಗೂ ಆರ್‌ಸಿಬಿ ಪರವೇ ಕಣಕ್ಕಿಳಿದಿದ್ದ ಎಬಿ ಡಿ ವಿಲಿಯರ್ಸ್ ಕಳೆದ ಬಾರಿಯ ಐಪಿಎಲ್ ಟೂರ್ನಿ ಮುಗಿದ ಬಳಿಕ ಎಲ್ಲಾ ಮಾದರಿಯ ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳಿಗೂ ನಿವೃತ್ತಿಯನ್ನು ಘೋಷಿಸಿದ್ದರು. ಹೀಗೆ ಎಬಿಡಿ ತೆಗೆದುಕೊಂಡಿದ್ದ ನಿರ್ಧಾರದಿಂದ ತೀವ್ರ ಬೇಸರಕ್ಕೊಳಗಾಗಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಕೇಳಿಬಂದಿದ್ದು ಎಬಿಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೆಂಟರ್ ಆಗಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಆರ್‌ಸಿಬಿ ತಂಡ

ಆರ್‌ಸಿಬಿ ತಂಡ

ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಆಕಾಶ್ ದೀಪ್, ಜೋಶ್ ಹ್ಯಾಜಲ್‌ವುಡ್, ಜೇಸನ್ ಬೆಹ್ರೆನ್‌ಡಾರ್ಫ್, ಚಾಮಾ ಮಿಲಿಂದ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಮಾಹಿ ಶೆಪಾಲ್ ಅಹ್ಮದ್ ರುದರ್‌ಫೋರ್ಡ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್

Story first published: Tuesday, March 8, 2022, 18:32 [IST]
Other articles published on Mar 8, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X