RCB IPL 2022 Schedule: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಯಾರು ಎಷ್ಟು ಬಾರಿ ಎದುರಾಳಿ? ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ಇದೇ ತಿಂಗಳ 26ರಿಂದ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಶುರುವಾಗಲಿವೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯ ಮಾರ್ಚ್ 26ರಂದು ನಡೆಯಲಿದ್ದು, ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯ ಸಂಜೆ 7.30ಕ್ಕೆ ನಿಗದಿಯಾಗಿದ್ದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 26ರ ಶನಿವಾರದಂದು ಉದ್ಘಾಟನಾ ಪಂದ್ಯ ನಡೆದರೆ, ಮಾರ್ಚ್ 27ರ ಭಾನುವಾರದಿಂದ ಡಬಲ್ ಹೆಡರ್ ಪಂದ್ಯಗಳು ಆರಂಭಗೊಳ್ಳಲಿವೆ. ಹೌದು, ಮಾರ್ಚ್ 27ರ ಭಾನುವಾರದಂದು ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಮಧ್ಯಾಹ್ನ 3.30ಕ್ಕೆ ನಡೆದರೆ, ಅದೇ ದಿನ ಸಂಜೆ 7.30ಕ್ಕೆ ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯ ನಡೆಯಲಿದೆ. ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಒಟ್ಟು ೧೨ ಡಬಲ್ ಹೆಡರ್ ಪಂದ್ಯಗಳು ನಡೆಯಲಿದ್ದು, ಲೀಗ್ ಹಂತದ ಒಟ್ಟು 70 ಪಂದ್ಯಗಳು 58 ದಿನಗಳಲ್ಲಿ ನಡೆಯಲಿವೆ.
ಇನ್ನು ಈ ಬಾರಿಯ ಟೂರ್ನಿಯ ಲೀಗ್ ಹಂತದ ಎಲ್ಲಾ ಪಂದ್ಯಗಳು ಮಹಾರಾಷ್ಟ್ರದ ಮುಂಬೈನ ವಾಂಖೆಡೆ ಕ್ರೀಡಾಂಗಣ, ಡಿ ವೈ ಪಾಟೀಲ್ ಕ್ರೀಡಾಂಗಣ ಹಾಗೂ ಬ್ರಬೋರ್ನ್ ಕ್ರೀಡಾಂಗಣಗಳಲ್ಲಿ ಮತ್ತು ಪುಣೆಯ ಎಂಸಿಎ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಆಯೋಜನೆಯಾಗಿವೆ. ಹೀಗೆ ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಎಲ್ಲಾ ಪಂದ್ಯಗಳು ಮಹಾರಾಷ್ಟ್ರದ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಆಯೋಜನೆಯಾಗಿದ್ದು, ಯಾವ ತಂಡಕ್ಕೂ ತವರು ನೆಲದ ಅನುಕೂಲ ಈ ಬಾರಿ ಇರುವುದಿಲ್ಲ ಎನ್ನಬಹುದು. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಿ ಗುಂಪಿನಲ್ಲಿದ್ದು, ಲೀಗ್ ಹಂತದಲ್ಲಿ ಒಟ್ಟು ೧೪ ಪಂದ್ಯಗಳನ್ನಾಡಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರ್ಚ್ 27ರ ಭಾನುವಾರದಂದು ಸಂಜೆ 7.30ಕ್ಕೆ ನಡೆಯಲಿರುವ ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದು, ತಂಡದ ಸಂಪೂರ್ಣ ಲೀಗ್ ಹಂತದ ಪಂದ್ಯಗಳ ವೇಳಾಪಟ್ಟಿ ಈ ಕೆಳಕಂಡಂತಿದೆ..

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಪೂರ್ಣ ವೇಳಾಪಟ್ಟಿ
27 ಮಾರ್ಚ್ 2022 - 7.30 pm- ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
30 ಮಾರ್ಚ್ 2022 - 7.30 pm -ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತಾ ನೈಟ್ ರೈಡರ್ಸ್
5 ಏಪ್ರಿಲ್ 2022 - 7.30 pm - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್
9 ಏಪ್ರಿಲ್ 2022 - 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್
12 ಏಪ್ರಿಲ್ 2022- 7.30 pm- ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
16 ಏಪ್ರಿಲ್ 2022-7.30 pm- ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
19 ಏಪ್ರಿಲ್ 2022 - 7.30 pm- ಲಕ್ನೋ ಸೂಪರ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
23 ಏಪ್ರಿಲ್ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್
26 ಏಪ್ರಿಲ್ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್
30 ಏಪ್ರಿಲ್ 2022- 3.30 pm- ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
4 ಮೇ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್
8 ಮೇ 2022- ಮಧ್ಯಾಹ್ನ 3.30- ಸನ್ ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
13 ಮೇ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್
19 ಮೇ 2022- 7.30pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್

ನಾಯಕನ ಘೋಷಣೆ ಇನ್ನೂ ಆಗಿಲ್ಲ
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾದರೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಯಾರು ಎಂಬುದು ಮಾತ್ರ ಇನ್ನೂ ಬಹಿರಂವಾಗಿಲ್ಲ. ಸದ್ಯ ಫಾಫ್ ಡುಪ್ಲೆಸಿಸ್ ಹೆಸರು ಹೆಚ್ಚಾಗಿ ಕೇಳಿಬರುತ್ತಿದ್ದು, ಫ್ರಾಂಚೈಸಿ ಯಾವಾಗ ಅಧಿಕೃತವಾಗಿ ಘೋಷಿಸಲಿದೆ ಎಂಬುದನ್ನು ಕಾದುನೋಡಬೇಕಿದೆ. ಇನ್ನು ಈ ನಾಯಕನ ಸ್ತಾನಕ್ಕೆ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ದಿನೇಶ್ ಕಾರ್ತಿಕ್ ಹೆಸರೂ ಕೂಡ ಕೇಳಿಬರುತ್ತಿದ್ದು, ಫ್ರಾಂಚೈಸಿ ಅಂತಿಮವಾಗಿ ಯಾರಿಗೆ ನಾಯಕ ಪಟ್ಟವನ್ನು ನೀಡಲಿದೆ ಎಂಬುದು ಪ್ರಶ್ನೆಯಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಆಕಾಶ್ ದೀಪ್, ಜೋಶ್ ಹ್ಯಾಜಲ್‌ವುಡ್, ಜೇಸನ್ ಬೆಹ್ರೆನ್‌ಡಾರ್ಫ್, ಚಾಮಾ ಮಿಲಿಂದ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಮಾಹಿ ಶೆಪಾಲ್ ಅಹ್ಮದ್ ರುದರ್‌ಫೋರ್ಡ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications