For Quick Alerts
ALLOW NOTIFICATIONS  
For Daily Alerts
 

GT vs RCB: ಆರ್‌ಸಿಬಿಗೆ 169 ರನ್‌ಗಳ ಗುರಿ ನೀಡಿದ ಗುಜರಾತ್; ನಿರ್ಣಾಯಕ ಪಂದ್ಯ ಗೆಲ್ಲುತ್ತಾ ಫಾಫ್ ಪಡೆ?

IPL 2022: Royal Challengers Bangalore needs 169 runs to win against Gujarat Titans

ಕಳೆದ ಮಾರ್ಚ್ ತಿಂಗಳ ಅಂತಿಮ ವಾರದಲ್ಲಿ ಅರಂಭವಾದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಇದೀಗ ಮುಕ್ತಾಯದ ಹಂತಕ್ಕೆ ತಲುಪಿದ್ದು, ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲು ಫಾಫ್ ಡು ಪ್ಲೆಸಿಸ್ ಪಡೆ ಇಂದು ( ಮೇ 19 ) ಅಗ್ನಿಪರೀಕ್ಷೆಗೆ ಇಳಿದಿದೆ. ಹೌದು, ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತದಲ್ಲಿನ ತನ್ನ ಅಂತಿಮ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಾಟ ನಡೆಸಲು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕಣಕ್ಕಿಳಿದಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 169 ರನ್‌ಗಳ ಗುರಿ ನೀಡಿದೆ.

ಗುಜರಾತ್ ಟೈಟನ್ಸ್ ತಂಡದ ಆರಂಭಿಕರಾಗಿ ಕಣಕ್ಕಿಳಿದ ಶುಬ್‌ಮನ್ ಗಿಲ್ ಕೇವಲ 1 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರೆ, ವೃದ್ಧಿಮಾನ್ ಸಹಾ 22 ಎಸೆತಗಳಲ್ಲಿ 31 ರನ್ ಕಲೆಹಾಕಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಥ್ಯೂ ವೇಡ್ 16 ರನ್ ಕಲೆಹಾಕಿದರೆ, ಡೇವಿಡ್ ಮಿಲ್ಲರ್ 25 ಎಸೆತಗಳಲ್ಲಿ 34 ರನ್, ರಾಹುಲ್ ತೆವಾಟಿಯಾ 2 ರನ್ ಕಲೆಹಾಕಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಹಾರ್ದಿಕ್ ಪಾಂಡ್ಯ 47 ಎಸೆತಗಳಲ್ಲಿ ಅಜೇಯ 62 ರನ್ ಕಲೆಹಾಕಿದರೆ, ಇನ್ನಿಂಗ್ಸ್‌ನ ಅಂತಿಮ ಹಂತದಲ್ಲಿ ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಶೀದ್ ಖಾನ್ 6 ಎಸೆತಗಳಲ್ಲಿ ಅಜೇಯ 19 ರನ್ ಬಾರಿಸಿದರು.

ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಜೋಶ್ ಹೇಜಲ್‌ವುಡ್ 2 ವಿಕೆಟ್ ಪಡೆದರೆ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ವನಿಂದು ಹಸರಂಗ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು:

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೊರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಸಿದ್ದಾರ್ಥ್ ಕೌಲ್, ಜೋಶ್ ಹ್ಯಾಜಲ್‌ವುಡ್

Story first published: Thursday, May 19, 2022, 21:27 [IST]
Other articles published on May 19, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+