ಐಪಿಎಲ್ ಹರಾಜು: ಮೊದಲ ದಿನದ ನಂತರ 11 ಆಟಗಾರರ ಆರ್‌ಸಿಬಿ ತಂಡ ಸಿದ್ಧ: ಉಳಿದಿರುವುದು ಇಷ್ಟೇ ಹಣ!

ಮುಂಬರುವ ಮಾರ್ಚ್ ತಿಂಗಳ ಕೊನೆಯ ವಾರ ಅಥವಾ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ದಿನದಿಂದ ದಿನಕ್ಕೆ ಕುತೂಹಲವನ್ನು ಹೆಚ್ಚಿಸುತ್ತಾ ಇದೆ. ಟೂರ್ನಿಗೆ ಸಂಬಂಧಪಟ್ಟಂತಹ ಹಲವಾರು ಚಟುವಟಿಕೆಗಳು ಗರಿಗೆದರಿದೆ. ಈಗಾಗಲೇ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತಾದ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯೂ ಕೂಡ ಆರಂಭವಾಗಿದ್ದು, ಇಂದು ( ಫೆಬ್ರವರಿ 12 ) ಮೊದಲನೇ ದಿನದ ಹರಾಜು ಪ್ರಕ್ರಿಯೆ ಜರುಗಿದೆ.
ಹೀಗೆ ಮುಕ್ತಾಯಗೊಂಡಿರುವ ಮೊದಲನೇ ದಿನದ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 74 ಆಟಗಾರರು ಹರಾಜಾಗಿದ್ದು, ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಅತಿ ದೊಡ್ಡ ಮೊತ್ತದ ಬಿಡ್ ಮಾಡಿದ ಫ್ರಾಂಚೈಸಿ ಎನಿಸಿಕೊಂಡಿತು. ಹೌದು, ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಇಶಾನ್ ಕಿಶನ್ ಮೇಲೆ 15.25 ಕೋಟಿ ಸುರಿಯಿತು. ಅತ್ತ ನೂತನ ಫ್ರಾಂಚೈಸಿಯಾದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ಆವೇಶ್ ಖಾನ್ 10 ಕೋಟಿ ಪಡೆಯುವ ಮೂಲಕ ಐಪಿಎಲ್ ಹರಾಜಿನಲ್ಲಿ ಅತಿ ದೊಡ್ಡ ಮೊತ್ತ ಪಡೆದ ಅನ್ ಕ್ಯಾಪ್ಡ್ ಪ್ಲೇಯರ್ ಎನಿಸಿಕೊಂಡರು. ಹೀಗೆ ಮೊದಲನೇ ದಿನ ಹಲವಾರು ದಾಖಲೆಯ ಬಿಡ್ಡಿಂಗ್ ನಡೆದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ದಿನದಂದು ಬರೋಬ್ಬರಿ 8 ಆಟಗಾರರನ್ನು ಖರೀದಿಸಿದೆ.
ಈ ಬಾರಿ ನಡೆದ ಆಟಗಾರರ ರಿಟೆನ್ಷನ್ ಪ್ರಕ್ರಿಯೆಯಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಈ ಮೂವರು ಆಟಗಾರರನ್ನು ರಿಟೇನ್ ಮಾಡಿಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೊದಲನೇ ದಿನದಂದು 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆಯ ಮೊದಲನೇ ದಿನ ಮುಕ್ತಾಯವಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು 11 ಆಟಗಾರರನ್ನು ಹೊಂದಿದ್ದು, ಈ ಕುರಿತಾದ ಮತ್ತಷ್ಟು ವಿವರ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬಳಿ ಉಳಿದಿರುವ ಹಣವೆಷ್ಟು ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಮೊದಲನೇ ದಿನದ ಹರಾಜು ಮುಗಿದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ
ಮೆಗಾ ಹರಾಜು ಪ್ರಕ್ರಿಯೆಯ ಮೊದಲನೇ ದಿನ ಮುಕ್ತಾಯಗೊಂಡ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಆಟಗಾರರನ್ನು ಹೊಂದಿದೆ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹಮದ್, ಅನುಜ್ ರಾವತ್, ವನಿಂದು ಹಸರಂಗಾ, ಹರ್ಷಲ್ ಪಟೇಲ್, ಜೋಶ್ ಹೇಜಲ್‌ವುಡ್, ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್

ತನ್ನದೇ ಇಬ್ಬರಿಗೆ ಬೃಹತ್ ಮೊತ್ತ ಹೂಡಿದ ರಾಯಲ್ ಚಾಲೆಂಜರ್ಸ್
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಳೆದ ಐಪಿಎಲ್ ಆವೃತ್ತಿಯಲ್ಲಿ ಆಡಿದ್ದ ಆಟಗಾರರ ಮೇಲೆ ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೃಹತ್ ಮೊತ್ತವನ್ನು ಹೂಡಿಕೆ ಮಾಡಿದೆ. ಕಳೆದ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಹರ್ಷಲ್ ಪಟೇಲ್ ಹಾಗೂ ವನಿಂದು ಹಸರಂಗ ಈ ಇಬ್ಬರು ಆಟಗಾರರ ಮೇಲೆ ಈ ಬಾರಿ ತಲಾ 10.75 ಕೋಟಿ ಹೂಡಿಕೆ ಮಾಡುವುದರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ಬಹುತೇಕ ತಂಡ ಸಿದ್ಧ, ಉಳಿದಿರುವ ಹಣವೆಷ್ಟು?
ಇನ್ನು ತಂಡಕ್ಕೆ ಸ್ಫೋಟಕ ಆರಂಭಿಕ ಆಟಗಾರ ಫಾಫ್ ಡು ಪ್ಲೆಸಿಸ್, ವಿಕೆಟ್ ಕೀಪರ್ ಆಗಿ ದಿನೇಶ್ ಕಾರ್ತಿಕ್, ಬೌಲಿಂಗ್ ವಿಭಾಗದಲ್ಲಿ ಜೋಶ್ ಹೇಜಲ್ ವುಡ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಮತ್ತು ವನಿಂದು ಹಸರಂಗ ಇರುವುದರ ಜೊತೆಗೆ ತಂಡಕ್ಕೆ ವಿರಾಟ್ ಕೊಹ್ಲಿ, ಮ್ಯಾಕ್ಸ್‌ವೆಲ್ ಬಲವಿದ್ದು ತಂಡ ಬಹುತೇಕ ಸಿದ್ಧವಾಗಿದೆ. ಇನ್ನು ಮೊದಲನೇ ದಿನದ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಬಳಿ 9.25 ಕೋಟಿ ಮೊತ್ತವನ್ನು ಉಳಿಸಿಕೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications