ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊಹ್ಲಿ, ಗ್ಲೆನ್, ಫಾಫ್: ಆರ್‌ಸಿಬಿಯ 'ಕೆಜಿಎಫ್ ಚಾಪ್ಟರ್ 2022' ಅತಿ ಶೀಘ್ರದಲ್ಲೇ!

IPL 2022: Royal Challengers Bangalore shared KGF special poster ahead of new season
RCB ಹಂಚಿಕೊಂಡ ಹೊಸ ಪೋಸ್ಟ್ ನೋಡಿ ಅಭಿಮಾನಿಗಳು ಥ್ರಿಲ್ | Oneindia Kannada

ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಯಾವ ಆಟಗಾರರು ಯಾವ ತಂಡದ ಪಾಲಾಗಲಿದ್ದಾರೆ ಎಂಬ ಅಭಿಮಾನಿಗಳ ಸಾಕಷ್ಟು ದಿನದ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಯಾವ ಫ್ರಾಂಚೈಸಿಗಳು ಯಾವ ಆಟಗಾರರನ್ನು ಖರೀದಿಸಿವೆ ಮತ್ತು ಯಾವ ಫ್ರಾಂಚೈಸಿ ಉತ್ತಮ ಆಟಗಾರರನ್ನು ಹೊಂದಿ ಬಲಿಷ್ಠವಾಗಿದೆ ಎಂಬುದರ ಕುರಿತು ಇದೀಗ ಚರ್ಚೆಗಳು ಆರಂಭವಾಗಿವೆ.

ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಮೇಲೆ ಇತರೆ ತಂಡದ ಅಭಿಮಾನಿಗಳಿಗಿಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ತುಸು ಹೆಚ್ಚೇ ನಿರೀಕ್ಷೆ ಹಾಗೂ ಕುತೂಹಲವಿತ್ತು ಎಂದು ಹೇಳಬಹುದು. ಹೌದು, ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ತ್ಯಜಿಸಿದ್ದು, ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಯಕತ್ವವನ್ನು ನಿರ್ವಹಿಸಬಲ್ಲ ಆಟಗಾರನನ್ನು ಖರೀದಿಸಲಿದೆ ಎಂಬ ನಿರೀಕ್ಷೆ ಅಭಿಮಾನಿಗಳ ಪಾಲಿಗಿತ್ತು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಬಾರಿಯ ಮೆಗಾ ಹರಾಜಿನಲ್ಲಿ ನಾಯಕತ್ವ ನಿರ್ವಹಿಸಬಲ್ಲ ಸಾಮರ್ಥ್ಯವಿರುವ ದಕ್ಷಿಣ ಆಫ್ರಿಕಾ ಮೂಲದ ಫಾಫ್ ಡು ಪ್ಲೆಸಿಸ್ ಅವರನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದ್ದು, ಫಾಫ್ ಡು ಪ್ಲೆಸಿಸ್ ಅವರೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಾಯಕನಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗುತ್ತಿದೆ.

ಡೇವಿಡ್ ವಾರ್ನರ್ ನಂತರ ಆಸ್ಟ್ರೇಲಿಯಾದ ಮತ್ತೋರ್ವನ ಜೊತೆ ಸನ್ ರೈಸರ್ಸ್ ಕಿರಿಕ್!ಡೇವಿಡ್ ವಾರ್ನರ್ ನಂತರ ಆಸ್ಟ್ರೇಲಿಯಾದ ಮತ್ತೋರ್ವನ ಜೊತೆ ಸನ್ ರೈಸರ್ಸ್ ಕಿರಿಕ್!

ಇನ್ನು ಮೆಗಾ ಹರಾಜಿಗೂ ಮುನ್ನ ನಡೆದ ರಿಟೆನ್ಷನ್ ಪ್ರಕ್ರಿಯೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ತನ್ನ ತಂಡದ ಪ್ರಮುಖ ಮೂವರು ಆಟಗಾರರಾದ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಫಾಫ್ ಡು ಪ್ಲೆಸಿಸ್ ಹೆಸರನ್ನು ಬಳಸಿ ಕೆಜಿಎಫ್ ಪೋಸ್ಟರ್ ಬಿಡುಗಡೆ ಮಾಡಿದೆ. ಹೌದು, ಕೊಹ್ಲಿ, ಗ್ಲೆನ್ ಮತ್ತು ಫಾಫ್ ಸೇರಿದರೆ ಕೆಜಿಎಫ್ ಶೀರ್ಷಿಕೆ ಬರಲಿದ್ದು, ಇದರ ಆಧಾರದ ಮೇಲೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಫಾಫ್ ಡು ಪ್ಲೆಸಿಸ್ ಚಿತ್ರಗಳನ್ನು ಬಳಸಿ ಪೋಸ್ಟರ್ ಡಿಸೈನ್ ಮಾಡಲಾಗಿದೆ. ಸದ್ಯ ಈ ಪೋಸ್ಟರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಆಗಿದ್ದು, ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹೀಗೆ ವಿಶೇಷ ಪೋಸ್ಟರ್ ಹಂಚಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಪ್ಟರ್ 2022 ಅತಿ ಶೀಘ್ರದಲ್ಲಿ ಬರಲಿದೆ ಎಂದು ಬರೆದುಕೊಂಡಿದೆ.

ಈ ಕಾರಣದಿಂದಲೇ ನಾನು ನನ್ನ ಮಗನ ಪಂದ್ಯಗಳನ್ನು ವೀಕ್ಷಿಸುವುದಿಲ್ಲ ಎಂದ ಸಚಿನ್!ಈ ಕಾರಣದಿಂದಲೇ ನಾನು ನನ್ನ ಮಗನ ಪಂದ್ಯಗಳನ್ನು ವೀಕ್ಷಿಸುವುದಿಲ್ಲ ಎಂದ ಸಚಿನ್!

ಹರಾಜಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಮೆಗಾ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಆಟಗಾರರ ಪಟ್ಟಿ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಆಕಾಶ್ ದೀಪ್, ಜೋಶ್ ಹ್ಯಾಜಲ್‌ವುಡ್, ಜೇಸನ್ ಬೆಹ್ರೆನ್‌ಡಾರ್ಫ್, ಚಾಮಾ ಮಿಲಿಂದ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಮಾಹಿ ಶೆಪಾಲ್ ಅಹ್ಮದ್ ರುದರ್‌ಫೋರ್ಡ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್

Story first published: Friday, February 18, 2022, 13:24 [IST]
Other articles published on Feb 18, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X