ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB Captain IPL 2022: ಕೊನೆಗೂ ನೂತನ ನಾಯಕನ ಘೋಷಣೆಯ ದಿನಾಂಕ ಪ್ರಕಟಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಇದೇ ಮಾರ್ಚ್ ೨೬ರಿಂದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಲಿದ್ದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕಳೆದ ಬಾರಿಯ ಐಪಿಎಲ್ ಟೂರ್ನಿಯ ರನ್ನರ್ ಅಪ್ ಆದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆಯಲಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಒಟ್ಟು ೧೦ ತಂಡಗಳು ಸೆಣಸಾಟ ನಡೆಸಲಿದ್ದು, ಈ ಕಾರಣದಿಂದಾಗಿ ಟೂರ್ನಿ ಸಾಕಷ್ಟು ದೊಡ್ಡ ಮಟ್ಟದ ಕುತೂಹಲ ಹಾಗೂ ನಿರೀಕ್ಷೆಯನ್ನು ಉಂಟುಮಾಡಿದೆ. ಇನ್ನು ಬಿಸಿಸಿಐ ಇತ್ತೀಚಿಗಷ್ಟೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಲೀಗ್ ಹಂತದಲ್ಲಿ ನಡೆಯಲಿರುವ ಎಲ್ಲಾ ಪಂದ್ಯಗಳು ಯಾವ ತಂಡಗಳ ನಡುವೆ ನಡೆಯಲಿವೆ, ಎಲ್ಲಿ ನಡೆಯಲಿವೆ ಹಾಗೂ ಯಾವ ಸಮಯಕ್ಕೆ ನಡೆಯಲಿವೆ ಎಂಬ ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿದೆ.

MI IPL 2022 Schedule : ಮುಂಬೈ ಇಂಡಿಯನ್ಸ್ ಯಾರ ವಿರುದ್ಧ ಎಷ್ಟು ಬಾರಿ ಸೆಣಸಾಡಲಿದೆ? ಇಲ್ಲಿದೆ ಸಂಪೂರ್ಣ ವೇಳಾಪಟ್ಟಿMI IPL 2022 Schedule : ಮುಂಬೈ ಇಂಡಿಯನ್ಸ್ ಯಾರ ವಿರುದ್ಧ ಎಷ್ಟು ಬಾರಿ ಸೆಣಸಾಡಲಿದೆ? ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಒಟ್ಟು ೭೦ ಪಂದ್ಯಗಳು ನಡೆಯಲಿದ್ದು, ಒಟ್ಟು ೧೨ ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ ಹಾಗೂ ಲೀಗ್ ಹಂತದ ೭೦ ಪಂದ್ಯಗಳು ೫೮ ದಿನಗಳಲ್ಲಿ ನಡೆಯಲಿವೆ. ಇನ್ನು ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ಪಂದ್ಯಗಳೂ ಮಹಾರಾಷ್ಟ್ರದ ಮುಂಬೈನ ವಾಂಖೆಡೆ ಕ್ರೀಡಾಂಗಣ, ಡಿವೈ ಪಾಟೀಲ್ ಕ್ರೀಡಾಂಗಣ, ಮತ್ತು ಬ್ರಬೌರ್ನ್ ಕ್ರೀಡಾಂಗಣಗಳಲ್ಲಿ ಹಾಗೂ ಪುಣೆಯ ಎಂಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಹೀಗೆ ಟೂರ್ನಿ ದಿನದಿಂದ ದಿನಕ್ಕೆ ಹೆಚ್ಚಿನ ಕ್ರೇಝ್ ಪಡೆದುಕೊಳ್ಳುತ್ತಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾತ್ರ ತನ್ನ ನೂತನ ಯಾರೆಂಬುದನ್ನು ಘೋಷಿಸಿಲ್ಲ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕ ಯಾರಾಗಬಹುದು ಎಂಬ ಕುತೂಹಲ ಕೂಡ ಒಂದೆಡೆ ಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಮುಂದಿನ ನಾಯಕನ ಕುರಿತು ಯಾವುದೇ ಮಾಹಿತಿ ನೀಡದೇ ಇದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇದೀಗ ಸಾಮಾಜಿಕ ಜಾಲತಾಣದ ಮೂಲಕ ತನ್ನ ಮುಂದಿನ ನಾಯಕನ ಘೋಷಣೆಯ ದಿನಾಂಕವನ್ನು ಬಹಿರಂಗಪಡಿಸಿದ್ದು, ಈ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಕಂಡಂತಿದೆ..

ನಾಯಕನ ಘೋಷಣೆ ಈ ದಿನದಂದು

ನಾಯಕನ ಘೋಷಣೆ ಈ ದಿನದಂದು

ಸದ್ಯ ತನ್ನ ಮುಂದಿನ ನಾಯಕನನ್ನು ಮಾರ್ಚ್ ೧೨ರಂದು ಘೋಷಿಸುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ತಿಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನ ಮ್ಯೂಸಿಯಮ್ ರಸ್ತೆಯಲ್ಲಿ ವಿಶೇಷ ಕಾರ್ಯಕ್ರಮದ ಮೂಲಕ ನೂತನ ನಾಯಕನನ್ನು ಘೋಷಿಸುವುದಾಗಿ ತಿಳಿಸಿದೆ. ಈ ವಿಷಯವನ್ನು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕತ್ವದ ನವಯುಗದ ಆರಂಭಕ್ಕೆ ದೊಡ್ಡ ವೇದಿಕೆಯ ಅಗತ್ಯವಿದೆ ಎಂದು ಬರೆದುಕೊಂಡಿದೆ.

ಮೂವರಲ್ಲಿ ಯಾರು ನಾಯಕ?

ಮೂವರಲ್ಲಿ ಯಾರು ನಾಯಕ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಯಾರಾಗಬಹುದು ಎಂಬುದರ ಕುರಿತು ನಡೆಯುತ್ತಿರುವ ಚರ್ಚೆಗಳಲ್ಲಿ ಹೆಚ್ಚಾಗಿ ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ದಿನೇಶ್ ಕಾರ್ತಿಕ್ ಈ ಮೂವರ ಹೆಸರು ಕೇಳಿಬರುತ್ತಿದ್ದು, ಫಾಫ್ ಡು ಪ್ಲೆಸಿಸ್ ನಾಯಕನಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಆಕಾಶ್ ದೀಪ್, ಜೋಶ್ ಹ್ಯಾಜಲ್‌ವುಡ್, ಜೇಸನ್ ಬೆಹ್ರೆನ್‌ಡಾರ್ಫ್, ಚಾಮಾ ಮಿಲಿಂದ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಮಾಹಿ ಶೆಪಾಲ್ ಅಹ್ಮದ್ ರುದರ್‌ಫೋರ್ಡ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್

Story first published: Tuesday, March 8, 2022, 16:06 [IST]
Other articles published on Mar 8, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X